ಶಿವಮೊಗ್ಗ | ತೀರ್ಥಹಳ್ಳಿ ತಾಲೂಕಿನ ಹಲವು ಅರಣ್ಯ ಅಧಿಕಾರಿಗಳ ವರ್ಗಾವಣೆ

Date:

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹಲವು ಅರಣ್ಯ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.

- Advertisement -

ಕಳೆದ ಮೂರು ವರ್ಷಗಳಿಂದ ಮಂಡಗದ್ದೆ ಮತ್ತು ಮೇಗರವಳ್ಳಿ (ಆಗುಂಬೆ) ವಲಯ ಅರಣ್ಯ ಅಧಿಕಾರಿಗಳಾಗಿ ಅರಣ್ಯ ರಕ್ಷಣೆ , ಅರಣ್ಯದಲ್ಲಿನ ಅಕ್ರಮಗಳ ನಿಯಂತ್ರಣ, ಮಣ್ಣು ಮಾಫಿಯಾ, ಮರಳು ಮಾಫಿಯಾದ ವಿಚಾರಗಳಲ್ಲಿ ಹದ್ದಿನ ಕಣ್ಣಿಟ್ಟು ದಕ್ಷತೆ ಮತ್ತು ಪ್ರಾಮಾಣಿಕತೆಯಿಂದ ಕೆಲಸ ಮಾಡುತ್ತಿದ್ದ ಮಂಡಗದ್ದೆ ವಲಯ ಅರಣ್ಯ ಅಧಿಕಾರಿ ಆದರ್ಶ.ಎಂ.ಪಿ. ಅವರನ್ನು ಕೊಪ್ಪ ವಿಭಾಗದ ಚಿಕ್ಕ ಅಗ್ರಹಾರ (ಎನ್ ಆರ್ ಪುರ) ವಲಯ ಅರಣ್ಯ ಅಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಮಂಡಗದ್ದೆ ವಲಯ ಅರಣ್ಯ ಅಧಿಕಾರಿಯಾಗಿ ವಿನಯಕುಮಾರ್ ಆರ್ ಬೇಲೂರು ಹಾಸನ ಜಿಲ್ಲೆಯಿಂದ ಮಂಡಗದ್ದೆಗೆ ವರ್ಗಾವಣೆ ಮಾಡಲಾಗಿದೆ.

ಮಂಡಗದ್ದೆಯಲ್ಲಿ ಉತ್ತಮ ಕೆಲಸ ಮಾಡಿ ಜನರಿಂದ ಹೆಸರು ಗಳಿಸಿರುವ ಮೇಗರವಳ್ಳಿ (ಆಗುಂಬೆ) ಮಧುಕರ್ ಎನ್.ವಿ. ರವರನ್ನು ಶೃಂಗೇರಿ ವಲಯ ಅರಣ್ಯ ಅಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದ್ದು, ಅವರ ಜಾಗಕ್ಕೆ ಹೇಮಗಿರಿ ಅಂಗಡಿ ಅವರನ್ನು ಮಂಗಳೂರಿನಿಂದ ಮೇಗರವಳ್ಳಿಗೆ ವರ್ಗಾವಣೆ ಮಾಡಲಾಗಿದೆ.

ತೀರ್ಥಹಳ್ಳಿಯ ವಲಯ ಅರಣ್ಯ ಅಧಿಕಾರಿ ಡಾಕ್ಟರ್ ಲೋಕೇಶ್ ಎಸ್. ಎಲ್. ಅವರನ್ನು ಕೋಲಾರ ಜಿಲ್ಲೆಯ ಮುಳಬಾಗಿಲು ಕಚೇರಿಗೆ ವರ್ಗಾವಣೆ ಮಾಡಲಾಗಿದೆ. ತೀರ್ಥಹಳ್ಳಿಗೆ ಸಂಜಯ್ .ಬಿ. ಎಸ್. ನಗರ ವಲಯದಿಂದ ವರ್ಗಾವಣೆ ಮಾಡಲಾಗಿದೆ.

ಇದನ್ನು ಓದಿದ್ದೀರಾ? ತುಮಕೂರು | ಸಿನಿಮೀಯ ರೀತಿ ಕುಖ್ಯಾತ ಆರೋಪಿಯನ್ನು ಬಂಧಿಸಿದ ಹೆಡ್‌ ಕಾನ್ಸ್‌ಟೇಬಲ್; ವ್ಯಾಪಕ‌‌ ಶ್ಲಾಘನೆ

ತೀರ್ಥಹಳ್ಳಿಯಲ್ಲಿ ಈ ಹಿಂದೆ ವಲಯ ಅರಣ್ಯ ಅಧಿಕಾರಿಯಾಗಿ ಸೇವೆ ಸಲ್ಲಿಸಿದ, ಅಂದಿನ ನ್ಯಾಯಾಧೀಶರಾದ ಸಂದೀಪ್ ಸಾಲಿಯಾನ ಅವರೊಂದಿಗೆ ಸೇರಿಕೊಂಡು ತುಂಗಾ ಕಾಲೇಜು ಆವರಣ, ಪ್ರವಾಸಿ ಮಂದಿರ, ಕುಶಾವತಿ ನೆಹರೂ ಪಾರ್ಕ್, ಎಡೇಹಳ್ಳಿ ಕೆರೆಯ ಮೇಲ್ಭಾಗದ ಅಬ್ದುಲ್ ಕಲಾಂ ಉದ್ಯಾನವನ ಮುಂತಾದ ಹತ್ತಾರು ಕಡೆಯಲ್ಲಿ ಸಾವಿರಾರು ಗಿಡಗಳನ್ನು ನೆಟ್ಟು ಇಂದಿಗೂ ಗಿಡಗಳನ್ನು ಸಂರಕ್ಷಣೆಯಾಗಿ ಮಾದರಿಯಾಗಿದ್ದ ಮಧುಸೂದನ್ .ಎ .ರವರನ್ನು ತೀರ್ಥಹಳ್ಳಿಯ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಯಾಗಿ ಸರ್ಕಾರ ವರ್ಗಾವಣೆ ಮಾಡಿ ಆದೇಶಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...

ರಾಯಚೂರು | ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತ: ಇಬ್ಬರು ಸಾವು, ಇಬ್ಬರಿಗೆ ಗಂಭೀರ ಗಾಯ

ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತಕ್ಕೀಡಾಗಿ ನಾಲ್ವರ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,...