ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯಲ್ಲಿ ಉತ್ತಮವಾಗಿ ಕರ್ತವ್ಯ ನಿರ್ವಹಿಸಿದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಪ್ರಶಂಸನಾ ಪತ್ರ ನೀಡುವ ಮೂಲಕ ಅಭಿನಂದಿಸಲಾಯಿತು.
76ನೇ ಗಣರಾಜ್ಯೋತ್ಸವದ ಅಂಗವಾಗಿ ಜಿಲ್ಲಾ ಪೊಲೀಸ್ ಅಧೀಕ್ಷಕ ಮಿಥುನ್ ಕುಮಾರ್ ಜಿ ಕೆ ಕಚೇರಿಯಲ್ಲಿ ಧ್ವಜಾರೋಹಣ ಮಾಡಿ ಅಧಿಕಾರಿ ಸಿಬ್ಬಂದಿಗಳಿಗೆ ಪ್ರಶಂಸನಾ ಪತ್ರ ನೀಡಿ ಗೌರವಿಸಿದರು. ಬಳಿಕ ರಾಜ್ಯೋತ್ಸವದ ಶುಭಾಶಯ ಕೋರಿದರು.
ಈ ಸಂದರ್ಭದಲ್ಲಿ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಅನಿಲ್ ಕುಮಾರ್ ಭುಮರೆಡ್ಡಿ, ಕಾರಿಯಪ್ಪ ಎ ಜಿ, ಪೊಲೀಸ್ ಉಪಾಧೀಕ್ಷಕ ಬಾಬು ಆಂಜನಪ್ಪ, ಜಿಲ್ಲಾ ಬಿ ಉಪವಿಭಾಗ ಉಪಾಧೀಕ್ಷಕ ಸಂಜೀವ್ ಕುಮಾರ್ ಟಿ, ಸಿಇಎನ್ ಠಾಣೆ ಉಪಾಧೀಕ್ಷಕ ಕೃಷ್ಣಮೂರ್ತಿ ಸೇರಿದಂತೆ ನಗರದ ಎಲ್ಲಾ ಪೊಲೀಸ್ ವೃತ್ತ ನಿರೀಕ್ಷಕರು, ಪೊಲೀಸ್ ಉಪನಿರೀಕ್ಷಕರು, ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಜರಿದ್ದರು.
ಈ ಸುದ್ದಿ ಓದಿದ್ದೀರಾ?: ಶಿವಮೊಗ್ಗ | ಅಲ್ಲಮಪ್ರಭು ಫ್ರೀಡಂ ಪಾರ್ಕ್ ಕಾಮಗಾರಿಗೆ ಸಚಿವ ಮಧು ಬಂಗಾರಪ್ಪ ಶಂಕುಸ್ಥಾಪನೆ