ಶಿವಮೊಗ್ಗ | ಖಾಸಗಿ ಬಸ್ ಮಾಲೀಕರು ಮತ್ತು ಏಜೆಂಟರ ನಡುವೆ ಗಲಾಟೆ; ಪ್ರಯಾಣಿಕರು ಹೈರಾಣ

Date:

ಶಿವಮೊಗ್ಗದ ಖಾಸಗಿ ಬಸ್ ನಿಲ್ದಾಣದಲ್ಲಿ ಖಾಸಗಿ ಬಸ್ ಮಾಲೀಕರು ಮತ್ತು ಏಜೆಂಟ್‌ಗಳ ನಡುವೆ ಶುಕ್ರವಾರ ಗಲಾಟೆ ನಡೆದಿದೆ. ನಿಗದಿತ ಸಮಯಕ್ಕೆ ಮುಂಚೆಯೇ ಖಾಸಗಿ ಬಸ್‌ಗಳು ಬಸ್‌ ನಿಲ್ದಾಣಕ್ಕೆ ಬರುತ್ತಿವೆ. ಜೊತೆಗೆ, ಲಗೇಜ್‌ ವಾಹನಗಳೂ ಅತಿಕ್ರಮವಾಗಿ ಬಸ್‌ ನಿಲ್ದಾಣಕ್ಕೆ ಪ್ರವೇಶಿಸುತ್ತಿವೆ. ಇದರಿಂದ ಸಮಸ್ಯೆಯಾಗುತ್ತಿದೆ ಎಂಬ ಕಾರಣಕ್ಕೆ ಜಗಳ ಶುರುವಾಗಿದೆ. ಜಗಳ ವಿಕೋಪಕ್ಕೆ ತಿರುಗಿದ್ದು, ಪ್ರಯಾಣಿಕರು ಹೈರಾಣಾಗಿದ್ದಾರೆ.

ಸುಮಾರು 2 ಗಂಟೆಗಳ ಕಾಲ ಗಲಾಟೆ ನಡೆದಿದ್ದು, ಆ ವೇಳೆಯಲ್ಲಿ ಯಾವುದೇ ಬಸ್‌ಗಳು ನಿಲ್ದಾಣಕ್ಕೆ ಬಾರದಂತೆ ಮತ್ತು ಹೊರಹೋಗದಂತೆ ತಡೆಯಲಾಗಿತ್ತು. ಹೀಗಾಗಿ, ಪ್ರಯಾಣಿಕರು ತಮ್ಮೂರುಗಳಿಗೆ ಹೋಗಲಾಗದೆ, ಮಾಲೀಕರು-ಏಜೆಂಟ್‌ಗಳ ಜಗಳದಿಂದ ಬೇಸತ್ತು ಅಸಹಾಯಕರಾಗಿದ್ದಾರೆ. ಸಮಸ್ಯೆಗಳನ್ನು ಪೊಲೀಸರ ಮುಖಾಂತರ ಬಗೆಹರಿಸಿಕೊಳ್ಳಿ, ಪ್ರಯಾಣಿಕರಿಗೆ ತೊಂದರೆ ಕೊಡಬೇಡಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗಲಾಟೆ ಸಂಬಂಧ ಈದಿನ.ಕಾಮ್ ಜೊತೆ ಮಾತನಾಡಿದ ಖಾಸಗಿ ಬಸ್‌ ಮಾಲೀಕರು, “ಬಸ್ ನಿಲ್ದಾಣದ ಒಳಗೆ ನಿಗದಿತ ಸಮಯಕ್ಕೆ ಮುಂಚೆನೆ ಬಸ್‌ಗಳನ್ನು ತಂದು ನಿಲ್ಲಿಸಲಾಗುತ್ತಿದೆ. ಇದರಿಂದ, ಬಹಳಷ್ಟು ಬಾರಿ ಸಮಸ್ಯೆ ಉಂಟಾಗುತ್ತದೆ. ಸಮಸ್ಯೆ ಬಗೆಹರಿಯುವವರೆಗೂ ಬಸ್‌ಗಳನ್ನು ಆಚೆ ಬಿಡುವುದಿಲ್ಲ, ನಿಲ್ದಾಣ ಒಳಗೆ ಬಸ್‌ಗಳು ಬರುವುದಕ್ಕೂ ಬಿಡುವುದಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಘಟನೆಯ ಬಗ್ಗೆ ಈದಿನ.ಕಾಮ್ ಪ್ರತಿನಿಧಿ ಟ್ರಾಫಿಕ್ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸ್‌ ಪೇದೆ ಮುನೇಶಪ್ಪ ಅವರು ಕೂಡಲೇ ಸ್ಥಳಕ್ಕೆ ಬಂದು, ಮಾಲೀಕರು ಮತ್ತು ಏಜೆಂಟರನ್ನು ಸಮಾಧಾನಿಸಲು ಯತ್ನಿಸಿದರು. ಆದರೂ, ಗಲಾಟೆ ಮುಂದುವರೆದಿತ್ತು.

ಬಳಿಕ, ಶಿವಮೊಗ್ಗ ಪಶ್ಚಿಮ ಸಂಚಾರಿ ಪೊಲೀಸ್ ಪಿಎಸ್‌ಐ ತಿರುಮಲೇಶ್ ಅವರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ. ಆ ವೇಳೆ, ಪೊಲೀಸರೊಂದಿಗೆ ಬಸ್‌ ಮಾಲೀಕರು ವಾಗ್ವಾದ ನಡೆಸಿದ್ದಾರೆ. ನಿಗದಿತ ಸಮಯಕ್ಕೆ ಮುಂಚೆ ಬರುವ ಬಸ್‌ಗಳ ಮೇಲೆ ಕ್ರಮ ಜರುಗಿಸಬೇಕು. ಅನಧಿಕೃತವಾಗಿ ಬರುವ ಖಾಸಗಿ ಬಸ್ ಸೇರಿದಂತೆ ಲಗೇಜ್ ವಾಹನಗಳಮೇಲೆ ಪ್ರಕರಣ ದಾಖಲಿಸಬೇಕು ಎಂದು ಒತ್ಥಾಯಿಸಿದ್ದಾರೆ. ಠಾಣೆಗೆ ಬಂದು ದೂರು ನೀಡಿ ಎಂದು ಪಿಎಸ್‌ಐ ತಿಳಿಸಿದ್ದು, ಬಸ್‌ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

ಗಲಾಟೆ ಬಗ್ಗೆ ಈದಿನ.ಕಾಮ್ ಜೊತೆ ಮಾತನಾಡಿದ ಟ್ರಾಫಿಕ್ ಸಬ್ ಇನ್ಸ್ಪೆಕ್ಟರ್ ತಿರುಮಲೇಶ್, “ಪ್ರಕರಣ ಸಂಬಂಧ ಕ್ರಮ ಕೈಗೊಳ್ಳುತ್ತೇವೆ. ಪ್ರಯಾಣಿಕರು ಸಾರ್ವಜನಿಕರಿಗೆ ತೊಂದರೆ ಉಂಟಾಗದಂತೆ ಎಚ್ಚರ ವಹಿಸುತ್ತೇವೆ. ಅನಧಿಕೃತ ವಾಹನಗಳು ಬಸ್ ಸ್ಟಾಂಡ್ ಒಳಗೆ ಬಂದರೆ ಕ್ರಮ ಜರುಗಿಸಿ ಫೈನ್ ಹಾಕುತ್ತೇವೆ” ಎಂದು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಬಸ್‌ಗಳಿಲ್ಲದೇ ಪರದಾಟ; ವಿದ್ಯಾರ್ಥಿಗಳ ಪ್ರತಿಭಟನೆ

ಬಸ್ ಅವಾಂತರದಿಂದ ಬೇಸತ್ತ ವಿದ್ಯಾರ್ಥಿಗಳು ಬೇಲೂರು ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ....

ಬೆಂಗಳೂರು | ಫೆ.26ರಿಂದ ಮೆಜೆಸ್ಟಿಕ್ – ಗರುಡಾಚಾರ್ ಪಾಳ್ಯ ಮೆಟ್ರೋ ನಿಲ್ದಾಣಗಳ ನಡುವೆ ಹೆಚ್ಚುವರಿ ಮೆಟ್ರೋ ಸೇವೆ

ಬೆಳಗಿನ ಜನದಟ್ಟಣೆಯ ಸಮಯದಲ್ಲಿ ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್ ಮತ್ತು ಗರುಡಾಚಾರ್‌ಪಾಳ್ಯ...

ವಿಪಕ್ಷ ನಾಯಕನ ಹುದ್ದೆಗೆ ಅಶೋಕ್ ನಾಲಾಯಕ್: ಪ್ರಮೋದ್ ಮುತಾಲಿಕ್

ವಿಧಾನಸಭೆ ವಿಪಕ್ಷ ನಾಯಕನ ಹುದ್ದೆಗೆ ಆರ್ ಅಶೋಕ್ ನಾಲಾಯಕ್. ಬೆಂಗಳೂರಿನ ಚಾಮರಾಜಪೇಟೆಯಲ್ಲಿ...

ಶಿವಮೊಗ್ಗ | ಫೆ.24ರಂದು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಸಮಾವೇಶ

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಜಿಲ್ಲೆಯ ಪ್ರತೀ ಅರ್ಹರಿಗೆ ತಲುಪಿಸುವ ಉದ್ದೇಶದಿಂದ...