ಶಿವಮೊಗ್ಗ ಜಿಲ್ಲೆ ಸಾಗರದ ಶಿಕ್ಷಕರ ಬಡಾವಣೆಯ ಮನೆಯೊಂದರಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಸಾಗರದ ಪೇಟೆ ಠಾಣೆ ಪೊಲೀಸರು ಕಳವಾಗಿದ್ದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಶಿಗ್ಗಾಂವ್ ತಾಲೂಕಿನ ಸಾವದಗಾರ್ ಓಣಿಯಲ್ಲಿ ವಾಸವಿರುವ ಅಮೀರ್ ಖಾನ್(42) ಹಾಗೂ ಬೆಳಗಾವಿಯ ಉಡಚಗಾವ್ ನಿವಾಸಿ ವಿಶಾಲ್ ನರಸಿಂಗ ಶೇರ್ಖಾನೆ (52) ಬಂಧಿತ ಆರೋಪಿಗಳು.
“ಬಂಧಿತ ಆರೋಪಿಗಳಿಂದ ₹84,000 ಮೌಲ್ಯದ ಚಿನ್ನ, ಬೆಳ್ಳಿ ವಸ್ತುಗಳು ಮತ್ತು ಕಳ್ಳತನಕ್ಕೆ ಬಳಸಿದ್ದ ₹2 ಲಕ್ಷ ಮೌಲ್ಯದ ಕಾರನ್ನು ವಶಪಡಿಸಿಕೊಳ್ಳಲಾಗಿದೆ” ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಯಾದಗಿರಿ | ಬ್ಯೂಟಿಷಿಯನ್ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ ವಿತರಣೆ
ಡಿವೈಎಸ್‌ಪಿ ಗೋಪಾಲಕೃಷ್ಣ ತಿಮ್ಮಪ್ಪ ನಾಯ್ಕ್ ಮಾರ್ಗದರ್ಶನದಲ್ಲಿ, ಇನ್ಸ್‌ಪೆಕ್ಟರ್ ಸೀತಾರಾಂ ನೇತೃತ್ವದಲ್ಲಿ ಸಬ್ ಇನ್ಸ್‌ಪೆಕ್ಟರ್ ನಾಗರಾಜ್, ಸಿಬ್ಬಂದಿಗಳಾದ ರತ್ನಾಕರ್, ಮೆಹಬೂಬ್, ಕೃಷ್ಣಮೂರ್ತಿ, ವಿಶ್ವನಾಥ್, ವಿಕಾಸ್ ಕಾರ್ಯಾಚರಣೆಯಲ್ಲಿ ಇದ್ದರು.