ಶಿವಮೊಗ್ಗ | ತಲಾ ಇಬ್ಬರು ಡಿವೈಎಸ್‌ಪಿ, ಪೊಲೀಸ್ ಇನ್‌ಸ್ಪೆಕ್ಟರ್‌ ವರ್ಗಾವಣೆ; ಒಬ್ಬರಿಗೆ ಪಿಐ ಬಡ್ತಿ

Date:

ರಾಜ್ಯಾದ್ಯಂತ ಡಿವೈಎಸ್‌ಪಿ, ಪೊಲೀಸ್ ಇನ್‌ಸ್ಪೆಕ್ಟರ್‌ಗಳ ವರ್ಗಾವಣೆಯಾಗಿದ್ದು, ಶಿವಮೊಗ್ಗ ಜಿಲ್ಲೆಯ ಇಬ್ಬರು ಡಿವೈಎಸ್‌ಪಿ ಮತ್ತು ಇಬ್ಬರು ಪೊಲೀಸ್ ಇನ್‌ಸ್ಪೆಕ್ಟರ್‌ಗಳ ವರ್ಗಾವಣೆಯಾದರೆ, ಒಬ್ಬರಿಗೆ ಪಿಎಸ್ಐನಿಂದ ಪಿಐಗೆ ಬಡ್ತಿ ದೊರೆತಿದೆ.

- Advertisement -

ತೀರ್ಥಹಳ್ಳಿಯಲ್ಲಿ ಇಬ್ಬರು ಅಧಿಕಾರಿಗಳು ವರ್ಗಾವಣೆಯಾಗಿದ್ದಾರೆ. ಡಿವೈಎಸ್‌ಪಿ ಗಜಾನನ ಸುತಾರ ಹಾಗೂ ಇನ್‌ಸ್ಪೆಕ್ಟರ್ ಅಶ್ವಥ್ ಗೌಡರನ್ನು ವರ್ಗಾಯಿಸಿ ಆದೇಶಿಸಿದೆ. ಡಿವೈಎಸ್‌ಪಿ ಗಜಾನನ ವಾಮನ ಸುತಾರರನ್ನು ಬಾಗಲಕೋಟೆಗೆ ವರ್ಗಾಯಿಸಲಾಗಿದ್ದರೆ, ಇನ್‌ಸ್ಪೆಕ್ಟ‌ರ್ ಅಶ್ವಥ್ ಗೌಡರನ್ನು ಬೆಂಗಳೂರಿನ ಐಜಿ ಕಚೇರಿಗೆ ವರ್ಗಾಯಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಕಣ ಭೌತವಿಜ್ಞಾನ-ಖಗೋಳವಿಜ್ಞಾನಗಳೆರಡರ ಸಮ್ಮಿಳನದ...

ಫ್ರಾನ್ಸಿಸ್ ಹಾಲ್ಜೆನ್ ಅವರ ಮೂಲ ಆಲೋಚನೆ ಕೇವಲ ಹಿಮದೊಳಗೆ ಸಂವೇದಕಗಳನ್ನು ಇಡುವ ಯೋಜನೆಯಾಗಿರಲಿಲ್ಲ. ಅದು ವಿಶ್ವವನ್ನು ನೋಡುವ ಹೊಸ ವಿಧಾನಕ್ಕೆ ಬಾಗಿಲು ತೆರೆಯುವ ಆಲೋಚನೆಯಾಗಿತ್ತು. ಅಗೋಚರವಾಗಿರುವ ಕಣಗಳನ್ನು ಹಿಡಿಯುವ ಮೂಲಕ, ವಿಶ್ವದ ಅತ್ಯಂತ...

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ತೀರ್ಥಹಳ್ಳಿಗೆ ಇನ್ ಸ್ಪೆಕ್ಟರ್ ಆಗಿ ಇಮ್ರಾನ್ ಬೇಗ್ ಎಂಬುವರು ವರ್ಗಾಯಿಸಲಾಗಿದೆ. ಶಿವಮೊಗ್ಗದಲ್ಲಿ ಡಿವೈಎಸ್ಪಿಯಾಗಿರುವ ಸುರೇಶ್ ರವರಿಗೆ ವರ್ಗಾವಣೆಯಾಗಿದೆ. ಇವರ ಜಾಗಕ್ಕೆ ರಾಜ್ಯ ಗುಪ್ತವಾರ್ತೆಯಲ್ಲಿದ್ದ ಸಂಜೀವ್ ಕುಮಾರ್ ತಿರ‌್ಲುಕ ಅವರು ವರ್ಗಾವಣೆಯಾಗಿದ್ದಾರೆ.

ಇನ್ನು ತುಂಗನಗರ ಪೊಲೀಸ್ ಠಾಣೆಯಲ್ಲಿ ಪಿಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಶಿವಪ್ರಸಾದ್ ಅವರು ಇನ್‌ಸ್ಪೆಕ್ಟರ್ ಆಗಿ ಬಡ್ತಿ ಪಡೆದಿದ್ದಾರೆ. ಲೋಕಾಯುಕ್ತದಲ್ಲಿ ಇನ್‌ಸ್ಪೆಕ್ಟರ್ ಆಗಿ ಬಡ್ತಿಪಡೆದು ವರ್ಗಗೊಂಡಿದ್ದಾರೆ. ಸ್ಥಳ ನಿರೀಕ್ಷೆಯಲ್ಲಿದ್ದ ಪುಲ್ಲಯ್ಯನವರನ್ನು ಸಾಗರ ಪೊಲೀಸ್ ಠಾಣೆಯ ಸಿಪಿಐ ಆಗಿ ವರ್ಗವಾಗಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಮೇಲಧಿಕಾರಿಗಳೊಂದಿಗೆ ದುರ್ನಡತೆ; ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಜಯ ಪ್ರಸಾದ್ ಅಮಾನತು

ಶಿವಮೊಗ್ಗದ ಜಯನಗರ, ಗ್ರಾಮಾಂತರದಲ್ಲಿ ಪಿಐ ಆಗಿ ಕರ್ತವ್ಯ ನಿರ್ವಹಿಸಿ ಚಿಕ್ಕಮಗಳೂರಿನ ಡಿಎಸ್‌ಪಿ ಆಗಿ ವರ್ಗವಾಗಿದ್ದ ಅಭಯ್ ಪ್ರಕಾಶ್ ಸೋಮನಾಳ್ ಚಿಕ್ಕಮಗಳೂರಿನ ಟೌನ್ ಠಾಣೆಯ ಪಿಐ ಆಗಿ ವರ್ಗವಾಗಿದ್ದಾರೆ. ಒಟ್ಟು 41 ಪಿಐಗಳು ಮತ್ತು 11 ಜನ ಡಿವೈಎಸ್‌ಪಿಗಳ ವರ್ಗಾವಣೆಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ನಕಲಿ ಸುಪ್ರೀಂ ಕೋರ್ಟ್ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ; ಕಾರಾಗೃಹ ಡಿಐಜಿ ಬಂಧನ

ಬೆಂಗಳೂರು ಸುಪ್ರೀಂ ಕೋರ್ಟ್‌ ಆದೇಶದ ಮಾದರಿಯನ್ನು ಅನುಕರಿಸಿ ನಕಲಿ ಆದೇಶವೊಂದನ್ನು ಸಿದ್ಧಪಡಿಸಿ...

ಕಲಬುರಗಿ | ವಸತಿ ನಿಲಯದ ಊಟ ಸೇವಿಸಿ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಆಳಂದ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ...

ಕಲಬುರಗಿ | ತಾಂತ್ರಿಕ ದೋಷಕ್ಕೆ ತುರ್ತು ಲ್ಯಾಂಡಿಂಗ್; ತೊಗರಿ ಜಮೀನಿನಲ್ಲಿ ಲಘು ವಿಮಾನದ ತುರ್ತು ಭೂಸ್ಪರ್ಶ

ಹಾರಾಟದ ವೇಳೆ ದಿಢೀರ್‌ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತರಬೇತಿ ಲಘು...

ರಾಯಚೂರು | ಸರ್ಕಾರಿ ಶಾಲೆಗಳ ವಿವಿಧ ಬೇಡಿಕೆ ಈಡೇರಿಕೆಗೆ ನ.26ರಿಂದ ಅಹೋರಾತ್ರಿ ಧರಣಿ

ಸರ್ಕಾರ ಶಿಕ್ಷಣ ಹಕ್ಕು ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು, ಸರ್ಕಾರಿ ಶಾಲೆಗಳಿಗೆ ಪೂರ್ಣ...