ಶಿವಮೊಗ್ಗ ನಗರ ಹೊರವಲಯದ ಕಾನೇಹಳ್ಳ ಕ್ರಾಸ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ.
ಆರ್ ಎಂ ಎಲ್ ನಗರ ನಿವಾಸಿ ನಿಸಾರ್, ಮಂಜುನಾಥ ಬಡಾವಣೆ ನಿವಾಸಿ ಯಶವಂತ್ ಅಪಘಾತದಲ್ಲಿ ಸಾವನ್ನಪ್ಪಿದವರಾಗಿದ್ದು, ಇಬ್ಬರು ಗಾಜನೂರಿನ ಐಟಿಐ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ ಎನ್ನಲಾಗಿದೆ.
ನಿಸಾರ್ ಮತ್ತು ಯಶವಂತ್ ಕಾಲೇಜಿಗೆ ಹೋಗುವಾಗ ಕಾನೇಹಳ್ಳದ ಕ್ರಾಸ್ ಬಳಿ ಬೈಕ್ ಸವಾರನ ನಿಯಂತ್ರಣ ತಪ್ಪಿ ಜಾಹೀರಾತುವಿನ ಹ್ಯಾಂಗರ್ ಕಂಬಕ್ಕೆ ಗುದ್ದಿದ್ದು, ಬೈಕ್‌ನಲ್ಲಿದ್ದ ಇಬ್ಬರ ತಲೆಗೂ ಬಲವಾದ ಹೊಡೆತ ಬಿದ್ದಿದ್ದರಿಂದ ಇಬ್ಬರೂ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ಇದನ್ನು ಓದಿದ್ದೀರಾ? ಚನ್ನಪಟ್ಟಣ | ಮುಸ್ಲಿಮರಿಗೆ ಕುರ್‌ಆನಿನ ಪ್ರತಿಯೊಂದಿಗೆ ಹಣ ಹಂಚಿದ ಜೆಡಿಎಸ್: ವ್ಯಾಪಕ ಆಕ್ರೋಶ
ತುಂಗ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಇಬ್ಬರ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.
