ಶಿವಮೊಗ್ಗ | ಮೂಲ ಸೌಕರ್ಯಗಳಿಲ್ಲದ ಉರ್ದು ಶಾಲೆ; ಪರಿಹಾರ ಒದಗಿಸುತ್ತಾರೆಯೇ ಸಚಿವ ಮಧು ಬಂಗಾರಪ್ಪ?

Date:

ಶಿಕ್ಷಣ ಸಚಿವರ ತವರು ಜಿಲ್ಲೆಯಲ್ಲಿರುವ ಉರ್ದು ಶಾಲೆಯಲ್ಲಿ ಮೂಲ ಸೌಕರ್ಯಗಳಿಲ್ಲದೆ ಮುಚ್ಚುವಂತಹ ದುಃಸ್ಥಿತಿಗೆ ತಲುಪಿರುವ ಶಾಲೆಗೆ ಸಚಿವ ಮಧು ಬಂಗಾರಪ್ಪ ಅವರು ಪರಿಹಾರ ಒದಗಿಸುವರೆ? ಎಂದು ಸ್ಥಳೀಯರು ಕಾದು ಕುಳಿತಿದ್ದಾರೆ.

- Advertisement -

ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಆನಂದಪುರಂ ಹೋಬಳಿಯ ಬಸ್ ತಂಗುದಾಣ ಹಿಂಭಾಗದಲ್ಲಿ ಇರುವ ಸರ್ಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆ ಅವನತಿಯ ಹಂಚಿಗೆ ತಲುಪಿದೆ. ಈ ಶಾಲೆ ಪ್ರಾರಂಭವಾಗಿದ್ದು 1949ರಲ್ಲಿ. ತುಂಬಾ ಚೆನ್ನಾಗಿ ನೆಡೆದುಕೊಂಡು ಬರುತ್ತಿದ್ದ ಶಾಲೆ, ಇತ್ತೀಚಿನ ವರ್ಷಗಳಲ್ಲಿ ಅಂದರೆ ಕೋವಿಡ್ ನಂತರದ ಸಮಯದಲ್ಲಿ ಶಾಲೆಗೆ ಬರುವ ಮಕ್ಕಳ ಸಂಖ್ಯೆ ಕಡಿಮೆಯಾಗುತ್ತಾ ಬಂದಿದ್ದು, ಕ್ರಮೇಣ ಕಳೆದ ವರ್ಷ ಈ ಶಾಲೆ ಮುಚ್ಚಲ್ಪಟ್ಟಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಸದರಿ ಶಾಲೆಯಲ್ಲಿ ಒಂದರಿಂದ ಐದನೇ ತರಗತಿವರೆಗೂ ತರಗತಿಗಳು ಇದ್ದು, ನಂತರ ಈ ಶಾಲೆ ಕಟ್ಟಡ ಶಿಥಿಲಾವಸ್ಥೆ ಹಂತಕ್ಕೆ ತಲುಪಿದೆ. ಹಾಗೆಯೇ ಶಾಲೆಯಲ್ಲಿ ಸರಿಯಾದ ಶೌಚಾಲಯ ವ್ಯವಸ್ಥೆಯೂ ಇಲ್ಲ. ಕುಡಿಯುವ ನೀರಿನ ವ್ಯವಸ್ಥೆಗೆ ಶಾಲೆ ಆವರಣದಲ್ಲಿ ಇರುವ ಬಾವಿಯಿಂದ ನೀರು ಸೇದಬೇಕಾಗಿದೆ. ಹಾಗೂ ಇದು ಸುರಕ್ಷಿತವಾಗಿಲ್ಲ.

ಉರ್ದು ಶಾಲೆಯ ಎಸ್‌ಡಿಎಂಸಿ

ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಸಯ್ಯದ್ ಉಮರ್ ಈ.ದಿನ.ಕಾಮ್‌ನೊಂದಿಗೆ ಮಾತನಾಡಿ, “ಶಾಲೆಯ ವಿದ್ಯುತ್ ಬಿಲ್ ಪಾವತಿ ಮಾಡದ ಕಾರಣ ವಿದ್ಯುತ್ ಕಡಿತಗೊಳಿಸಲಾಗಿದ್ದು, ಪ್ರಸ್ತುತ ಶಾಲೆಯಲ್ಲಿ ಎರಡು ಕೊಠಡಿಗಳಿವೆ. ಒಂದರಿಂದ ಐದನೇ ತರಗತಿವರೆಗೂ ಶಾಲೆ ನಡೆಸಲು ಶಿಕ್ಷಕರೂ ಕೂಡ ಇಲ್ಲ. ಇಬ್ಬರು ಶಿಕ್ಷಕರಿದ್ದು, ಅದರಲ್ಲಿ ಒಬ್ಬರು ಮುಖ್ಯ ಶಿಕ್ಷಕಿ ಹಾಗೂ ಮತ್ತೊಬ್ಬರು ನಿಯೋಜಿತ ಕನ್ನಡ ಶಿಕ್ಷಕರು. ಇವರು ಮೂರು ದಿನ ಮಾತ್ರ ಶಾಲೆಗೆ ಬರುತ್ತಿದ್ದು, ಮತ್ತೆ ಮೂರು ದಿನ ಬೇರೆ ಶಾಲೆಗೆ ಹೋಗಬೇಕಾಗಿದೆ” ಎಂದರು.

ಉರ್ದು ಶಾಲೆ

“ಕೆಪಿಎಸ್‌ ಶಾಲೆ ಪ್ರಾರಂಭವಾಗಿದ್ದರಿಂದ ಇಲ್ಲಿದ್ದ ಸರ್ಕಾರಿ ಪ್ರಾಥಮಿಕ ಶಾಲೆ ಮುಚ್ಚಿದ್ದು, ಬೇರೆಡೆಗೆ ಸ್ಥಳಾಂತರ ಮಾಡಲಾಗಿದೆ. ಹಾಗಾಗಿ ಪೋಷಕರು ಶಾಲೆಯ ಪರಿಸ್ಥಿತಿ ನೋಡಿ ಮಕ್ಕಳನ್ನು ಸರ್ಕಾರಿ ಶಾಲೆಗೆ ದಾಖಲಿಸುತ್ತಿಲ್ಲ” ಎಂದು ಬೇಸರ ವ್ಯಕ್ತಪಡಿಸಿದರು.

“ಶಾಲೆಯ ಆವರಣದಲ್ಲಿ ಅಂಗನವಾಡಿ ಇದೆ. ಒಂದು ಸಭಾಂಗಣ ಇದೆ. ಸರ್ಕಾರಿ ಪ್ರಾಥಮಿಕ ಶಾಲೆ ಇದ್ದಂತಹ ಈ ಆವರಣದಲ್ಲಿ ಇದೀಗ ಎಲ್ಲ ಕಟ್ಟಡಗಳೂ ಹಾಳಾಗಿದ್ದು, ಹಾಳು ಕೊಂಪೆಯಾಗಿದೆ. ಸಂಜೆ ಆಗುತ್ತಿದ್ದಂತೆ ಅಕ್ರಮ ಅನೈತಿಕ ಚಟುವಟಿಕೆಗಳು ನಡೆಯುತ್ತವೆ. ಕುಡುಕರು, ಜೂಜು ಕೋರರು, ಹುಚ್ಚರು ಹೀಗೆ ಯಾರ್ಯಾರೋ ಬಂದು ಶಾಲೆಯಲ್ಲಿ ಇದ್ದಂತ ನೀರಿನ ಮೋಟಾರ್ ಆಗಿರಬಹುದು ಅಥವಾ ಇನ್ನಿತರೇ ವಸ್ತುಗಳನ್ನು ಕಳ್ಳತನ ಮಾಡುವುದು ಇಲ್ಲವೇ ಹಾಳು ಮಾಡುವುದು ಈ ರೀತಿ ನಡೆಯುತ್ತಿದೆ. ಶಾಲೆಗಿರುವ ಗೇಟ್ ಕೂಡ ಹಾಳಾಗಿದೆ” ಎಂದರು.

ಉರ್ದು ಶಾಲೆ 2

“ಶಾಲೆಯ ಈ ಸಮಸ್ಯೆ ನಡುವೆ ಖಾಸಗಿ ಶಾಲೆಗಳೂ ಹೆಚ್ಚಾಗಿರುವ ಕಾರಣ ಪೋಷಕರು ತಮ್ಮ ಮಕ್ಕಳನ್ನು ಈ ಸರ್ಕಾರಿ ಶಾಲೆಗೆ ಸೇರಿಸಲು ಮುಂದಾಗುತ್ತಿಲ್ಲ. ಹಾಗಾಗಿ ಈ ಶಾಲೆಯನ್ನು ಪುನರುಜ್ಜೀವನಗೊಳಿಸುವ ಸಲುವಾಗಿ ಶಾಲೆಯ ಶಿಕ್ಷಕ ವೃಂದ, ಎಸ್‌ಡಿಎಂಸಿ, ಪೋಷಕರು ಮತ್ತು ಊರಿನ ಗ್ರಾಮಸ್ಥರೆಲ್ಲ ಕೂಡಿ ಈ ಶಾಲೆಯನ್ನು ಮತ್ತೆ ಪ್ರಾರಂಭ ಮಾಡಬೇಕು ಮಾದರಿ ಶಾಲೆಯನ್ನಾಗಿ ಮಾಡಬೇಕೆಂಬ ಸಲುವಾಗಿ ಸಭೆ ನಡೆಸಿ ಪ್ರಸಕ್ತ ಸಾಲಿನಿಂದ ಶಾಲೆ ಪ್ರಾರಂಭ ಮಾಡಲಾಗಿದೆ. ಪ್ರಸ್ತುತ ವರ್ಷದಲ್ಲಿ ಶಾಲೆಗೆ 14 ಮಂದಿ ಮಕ್ಕಳು ದಾಖಲಾಗಿದ್ದಾರೆ” ಎಂದು ತಿಳಿಸಿದರು.

ಉರ್ದು ಶಾಲೆ ಮಕ್ಕಳು

“ಶಾಲೆಗೆ ಬೇಕಿರುವ ವಿದ್ಯುತ್ ಬಿಲ್ ₹3000ಕ್ಕೂ ಅಧಿಕವಿರುವ ಬಿಲ್‌ ಪಾವತಿಸಲು ನಿರ್ಧಾರ ಮಾಡಲಾಗಿದೆ. ಮುಖ್ಯವಾಗಿ ಮಕ್ಕಳಿಗೆ ಪ್ರಾಥಮಿಕ ಹಂತದಲ್ಲಿ ಮಾತೃ ಭಾಷೆಯಲ್ಲಿ ಶಿಕ್ಷಣ ಒದಗಿಸುವುದು ಸರ್ಕಾರದ ನಿಯಮವಾಗಿದೆ. ಇದು ಬಹುಮುಖ್ಯವಾದ ವಿಚಾರ ಆಗಿರುತ್ತದೆ. ಈ ಶಾಲೆಯನ್ನು ಪುನರಾರಂಭ ಮಾಡುವ ನಿಟ್ಟಿನಲ್ಲಿ ಎಲ್ಲರೂ ಕೈ ಜೋಡಿಸುತ್ತಿದ್ದೇವೆ” ಎಂದು ತಿಳಿಸಿದರು.

“ಶಾಲೆಗೆ ಬೇಕಾದ ಸೌಲಭ್ಯಗಳನ್ನು ಒದಗಿಸಿ ಕೊಡಲು ಅವರವರ ಕೈಗೆಟುಕುವಷ್ಟರ ಮಟ್ಟಿಗೆ ಸಹಾಯ ಮಾಡಬೇಕೆಂದು ನಿರ್ಧಾರ ಮಾಡಿಕೊಂಡಿದ್ದೇವೆ” ಎಂದು ಊರಿನ ಗ್ರಾಮಸ್ಥರು ಮತ್ತು ಪೋಷಕರು ಈ ದಿನ.ಕಾಮ್‌ಗೆ ತಿಳಿಸಿದ್ದಾರೆ.‌

WhatsApp Image 2024 07 15 at 12.15.26 PM 2

“ಶಾಲೆಗೆ ಮತ್ತಷ್ಟು ಬೇಕಾಗಿರುವ ಪರಿಹಾರದ ವ್ಯವಸ್ಥೆಯನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹಾಗೂ ಸ್ಥಳೀಯ ಸಾಗರ ತಾಲೂಕಿನ ಶಾಸಕ ಗೋಪಾಲ್ ಕೃಷ್ಣ ಬೇಳೂರು ಇವರುಗಳು ನಮ್ಮ ಶಾಲೆಯ ಸಮಸ್ಯೆ ಬಗೆಹರಿಸಿ ಶಾಲೆ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು” ಎಂದು ಮನವಿ ಮಾಡಿದರು.

ಉರ್ದು ಶಾಲೆ ಶಿಕ್ಷಕರು

ಶಾಲೆಯ ಶಿಕ್ಷಕರು ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಸರ್ಕಾರಿ ಶಾಲೆಯಲ್ಲಿ ಮೆರಿಟ್‌ನಿಂದ ಬಂದಂಥ ಶಿಕ್ಷಕರಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆಯುವುದರಿಂದ ಇದನ್ನು ಮನೆ ಮನೆಗೆ ಸುತ್ತಮುತ್ತಲಿನ ಹಳ್ಳಿಗಳಿಗೆ ತೆರಳಿ ಮಕ್ಕಳನ್ನು ಶಾಲೆಗೆ ಸೇರಿಸುವ ನಿಟ್ಟಿನಲ್ಲಿ ನಾವೆಲ್ಲರೂ ಅಂದರೆ ಪೋಷಕರು, ಗ್ರಾಮಸ್ಥರು, ಎಸ್‌ಡಿಎಂಸಿ ಹೀಗೆ ಎಲ್ಲರೂ ಪ್ರಯತ್ನ ಮಾಡಿ ಈ ಶಾಲೆಯನ್ನು ಮಾದರಿ ಶಾಲೆ ಮಾಡುವ ಕನಸನ್ನು ಹೊಂದಿದ್ದೇವೆ” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಸಾಂವಿಧಾನಿಕ 371(ಜೆ) ಕಲಂ ಕುರಿತು ಜಾಗೃತಿ ಕಾರ್ಯಗಾರಕ್ಕೆ ಚಿಂತನೆ

“ಶಾಲೆಗೆ ಇಂಗ್ಲೀಷ್‌ ಶಿಕ್ಷಕರ ಅವಶ್ಯಕತೆ ಇದ್ದು, ಕೊಠಡಿಗಳ ವ್ಯವಸ್ಥೆಯನ್ನೂ ಮಾಡ ಬೇಕಾಗಿದೆ. ಹಾಗಾಗಿ ಅತ್ಯಂತ ಹಳೆಯದಾದ ಸರ್ಕಾರಿ ಶಾಲೆಯನ್ನು ಉಳಿಸಿಕೊಳ್ಳುವ ಪ್ರಯತ್ನದಲ್ಲಿ ಇರುವ ಶಾಲೆಗೆ ಶಿಕ್ಷಣ ಸಚಿವರು ತಮ್ಮ ತವರು ಜಿಲ್ಲೆಗೆ ಸಹಕರಿಸಬೇಕು. ಈ ರೀತಿಯಲ್ಲಿ ಇರುವ ಪರಿಸ್ಥಿತಿಯನ್ನು ಗಮನಿಸಿ ಶಾಲೆಗೆ ಸೂಕ್ತ ನೆರವು ನೀಡುವ ಮೂಲಕ ಶಾಲೆಯನ್ನು ಪುನಶ್ಚೇತನಗೊಳಿಸಿ ಮಾದರಿ ಶಾಲೆಯಾಗಿ ಮಾಡಲು ಸರ್ಕಾರದಿಂದ ಅಗತ್ಯ ಸೌಲಭ್ಯ ನೀಡಬೇಕು” ಎಂದು ಪೋಷಕರು, ಗ್ರಾಮಸ್ಥರು ಒತ್ತಾಯಿಸಿದರು.

“ಶಾಲೆಗೆ ಬೇಕಾಗಿರುವ ಸರ್ಕಾರದ ಸೌಲಭ್ಯಗಳನ್ನು ಒದಗಿಸುವಂತೆ ಕ್ಷೇತ್ರ ಶಿಕ್ಷಣಧಿಕಾರಿ, ಶಿಕ್ಷಣ ಸಚಿವರು ಮತ್ತು ಸರ್ಕಾರಕ್ಕೆ ಮನವಿ ನೀಡುತ್ತೇವೆ. ಬಳಿಕ ಅವರು ಹೇಗೆ ಸ್ಪಂದಿಸುತ್ತಾರೆಂಬುದನ್ನು ಕಾದು ನೋಡಬೇಕು” ಎಂದರು.

WhatsApp Image 2025 11 17 at 5.17.05 PM
ರಾಘವೇಂದ್ರ, ಶಿವಮೊಗ್ಗ
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...