ಶಿವಮೊಗ್ಗ ಜಿಲ್ಲಾ ಸಾಗರ ತಾಲೂಕಿನ ಶಾಸಕರಾದ ಗೋಪಾಲಕೃಷ್ಣ ಬೇಳೂರು ವಿದೇಶದಲ್ಲಿರುವ ಹಿನ್ನೆಲೆಯಲ್ಲಿ ಸಾಗರ ತಾಲೂಕು ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು.
ಮಳೆಯಿಂದ ಅನಾಹುತ ಸಂಭವಿಸಿದ ಸ್ಥಳಗಳಿಗೆ ಸಾಧ್ಯವಾದಷ್ಟು ಬೇಗ ಪರಿಹಾರ ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಹಾಗೆಯೇ ಅಧಿಕಾರಿಗಳಿಂದ ಮಾಹಿತಿ ಕೂಡ ಪಡೆದುಕೊಂಡರು.
ಸಾಗರ ತಾಲೂಕು ತಹಸೀಲ್ದಾರ್ ಚಂದ್ರಶೇಖರ ನಾಯ್ಕ್ ಮತ್ತು ಸಾಗರ ನಗರಸಭಾ ಕಮಿಷನರ್ ಎಚ್ ಕೆ ನಾಗಪ್ಪ ವಿಡಿಯೋ ಕಾನ್ಫರೆನ್ಸ್‌ನಲ್ಲಿ ಮಳೆಯಿಂದ ಹಾನಿಗೊಳಗಾದ ಸಂತ್ರಸ್ತರಿಗೆ ಸೂಕ್ತ ಪರಿಹಾರ ಒದಗಿಸಲಾಗಿದೆ ಎಂದು ತಿಳಿಸಿದರು.
ಗ್ರಾಮೀಣ ಭಾಗದಲ್ಲಿ ಮಳೆಯಿಂದ ಹಾನಿಗೊಳಗಾದ ಕಡೆ ಹೆಚ್ಚಿನ ಗಮನ ನೀಡಲಾಗಿದೆ. ಹಾನಿಗೊಳಗಾದ ಪ್ರತಿಯೊಂದು ಕಡೆ ಹೆಚ್ಚಿನ ನಿಗಾವಹಿಸಲು ಪಿಡಿಓಗಳಿಗೆ ಸೂಚನೆ ನೀಡಲಾಗಿದೆ ಎಂದು ತಾಲೂಕು ಪಂಚಾಯತ್ ಇಒ ಗುರುಕೃಷ್ಣ ಶೆಣೈ ತಿಳಿಸಿದರು.
ಗ್ರಾಮೀಣ ಭಾಗದ ಕುಡಿಯುವ ನೀರು ಮತ್ತು ನೈರ್ಮಲ್ಯದ ಬಗ್ಗೆ ಗಮನವಿಟ್ಡು ಜನತೆಗೆ ತೊಂದರೆ ಆಗದಂತೆ ಕೆಲಸ ಮಾಡಲಾಗಿದೆ ಎಂದು ಇಂಜಿನಿಯರ್ ಭರತ್ ಶಾಸಕರಿಗೆ ಮಾಹಿತಿ ನೀಡಿದರು.
ರಸ್ತೆಗಳು ಮಳೆಯಿಂದ ಹಾನಿಗೊಳಗಾದ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಮತ್ತು ಸಾಗರ ತಾಲ್ಲೂಕು ಕಚೇರಿ ಮೇಲ್ಛಾವಣಿಗೆ ಟೆಂಡರ್ ಕರೆಯುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಲೋಕೋಪಯೋಗಿ ಇಂಜಿನಿಯರ್ ಮಂಜುನಾಥ್ ಸಭೆಯಲ್ಲಿ ತಿಳಿಸಿದರು.
ಇದನ್ನು ಓದಿದ್ದೀರಾ? ಕೇಂದ್ರ ಬಜೆಟ್ | ”ಎಕನಾಮಿಕ್ ಸರ್ವೇ”: ಗಾಳಿ ಬಂದತ್ತ ತೂರಿಕೊಳ್ಳುವ ಪ್ಲಾನ್ ಇರಬಹುದೇ?
ಮಳೆಯಿಂದ ಕೆಲವು ಶಾಲೆಗಳಿಗೆ ಹಾನಿಯಾಗಿದ್ದು, ಅವುಗಳಲ್ಲಿ ಪಾಠ ಮಾಡಲು ಸಾಧ್ಯವಾಗದೇ ಇದ್ದರೆ ಅಂತಹ ಸ್ಥಳದಲ್ಲಿ ಮುಖ್ಯ ಶಿಕ್ಷಕರು ತೀರ್ಮಾನ ಕೈಗೊಳ್ಳಲು ಸೂಚಿಸಲಾಗಿದೆ ಎಂದು ಸಾಗರ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಪರಶುರಾಮ್ ತಿಳಿಸಿದರು.
ಇದೇ ವೇಳೆ ಸಭೆಯಲ್ಲಿ ಮೆಸ್ಕಾಂ ಲೈನ್‌ಮೆನ್’ಗಳ ಪರಿಶ್ರಮಕ್ಕೆ ಶಾಸಕ ಗೋಪಾಲ ಕೃಷ್ಣ ಮೆಚ್ಚುಗೆ ವ್ಯಕ್ತಪಡಿಸಿದರು.
