ರಾಜ್ಯ ಸರ್ಕಾರದ ವಿರುದ್ದ ಮುಂದಿನ ದಿನಗಳಲ್ಲಿ ಹೋರಾಟ ನಡೆಸಲಾಗುವುದು ಎಂದು ಜೆಡಿಎಸ್ ಮುಖಂಡ ಕೆಬಿಪಿ ಶಿವಮೊಗ್ಗ ಜಿಲ್ಲೆಯ ಸೊರಬದಲ್ಲಿ ಹೇಳಿಕೆ ನೀಡಿದ್ದಾರೆ.
ಸೊರಬ ಪಟ್ಟಣದ ಅಲೇಕಲ್ ಸಭಾಂಗಣದಲ್ಲಿ ಬುಧವಾರ ಕರೆದಿದ್ದ ಜಾತ್ಯತೀತ ಜನತಾದಳದ ತಾಲೂಕು ಮಟ್ಟದ ಕಾರ್ಯಕರ್ತರ ಸಭೆ ಉದ್ದೇಶಿಸಿ ಮಾತನಾಡಿ, “ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸುಳ್ಳು ಗ್ಯಾರಂಟಿಗಳ ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದು ಜನರ ಆಶೋತ್ತರಗಳಿಗೆ ವಿರುದ್ಧವಾಗಿ ಆಡಳಿತ ನಡೆಸುತ್ತಿದೆ” ಎಂದು ಆರೋಪಿಸಿದರು.
ಜೆಡಿಎಸ್ ಮುಖಂಡ ಹಾಗೂ ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್ ಮಾತನಾಡಿ, “ಸರ್ಕಾರದ ವಿರುದ್ಧ ಹೋರಾಡುವ ಮೂಲಕ ಜೆಡಿಎಸ್ ಪಕ್ಷವನ್ನು ಕಟ್ಟಿ ಬೆಳೆಸುವ ಅಗತ್ಯವಿದೆ. ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳ, ಭಾಗ್ಯಲಕ್ಷ್ಮಿ ಯೋಜನೆ ಹಣ, ಪಡಿತರ ಹಣ ಗ್ರಾಹಕರಿಗೆ ಸರಿಯಾಗಿ ತಲುಪುತ್ತಿಲ್ಲ. ಇಂತಹ ವಿಚಾರಗಳನ್ನು ಇಟ್ಟುಕೊಂಡು ಸರ್ಕಾರದ ವಿರುದ್ಧ ಹೋರಾಡುವ ಅಗತ್ಯವಿದೆ” ಎಂದರು.
ಈ ಸುದ್ದಿ ಓದಿದ್ದೀರಾ? ಧಾರವಾಡ | ಹೆಣ್ಣು ದೇವತೆ ಸಮಾನಳು, ಭ್ರೂಣ ಹತ್ಯೆ ಮಹಾಪಾಪ: ನ್ಯಾ. ಪಿ.ಎಫ್ ದೊಡ್ಡಮನಿ
ಜೆಡಿಎಸ್ ಜಿಲ್ಲಾಧ್ಯಕ್ಷ ಕಡಿದಾಳ್ ಗೋಪಾಲ್ ಮಾತನಾಡಿ, “ಅಭಿಪ್ರಾಯಗಳನ್ನು ಸಂಗ್ರಹಿಸಿ ಸೂಕ್ತ ಅಭ್ಯರ್ಥಿಯನ್ನು ಜೆಡಿಎಸ್ ತಾಲೂಕು ಘಟಕದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗುವುದು” ಎಂದರು.
ಜೆಡಿಎಸ್ ಹಿರಿಯ ಮುಖಂಡ ರಾಮಕೃಷ್ಣ, ಕೆ ಅಜ್ಜಪ್ಪ, ತ್ಯಾಗರಾಜ್, ಹುಚ್ಚಪ್ಪ, ದೀಪಕ್ ಸಿಂಗ್, ಸಿದ್ದಪ್ಪ, ವಿಜಯ್ ಕುಮಾರ್, ವಾಜೀದ, ಸಂಗಯ್ಯ, ಗಣಪತಿ, ಬಸವನಗೌಡ ಪಾಟೀಲ್, ಪುಂಡಲೀಕಪ್ಪ, ಶ್ರೀಧರ್ ಶೇಟ್, ಕುಮಾರ್ ಸೇರಿದಂತೆ ಇತರರು ಇದ್ದರು.