ಪಠ್ಯಪುಸ್ತಕ ಪರಿಷ್ಕರಣೆ ವಿಷಯದಲ್ಲಿ ತಜ್ಞರ ಸಲಹೆ ಪಡೆದು ಮುಂದುವರೆಯಲಾಗುತ್ತಿದೆ. ಯಾವುದೇ ಪಕ್ಷದ ಸಿದ್ಧಾಂತವನ್ನು ಪಠ್ಯದ ಮೇಲೆ ಹೇರುವುದಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟಪಡಿಸಿದ್ದಾರೆ.
ಶಿವಮೊಗ್ಗ ಜಿಲ್ಲೆ ಸಾಗರ ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಶಿಕ್ಣಣ ಕ್ಷೇತ್ರದಲ್ಲಿ ಯಾವುದೇ ಬದಲಾವಣೆ ತರುವುದಿದ್ದರೂ ತಜ್ಞರ ಸಲಹೆ ಪಡದೇ ಮುಂದುವರೆಯಲಾಗುವುದು” ಎಂದು ತಿಳಿಸಿದರು.
ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಮದ್ಯ ನಿಷೇಧ ಮಾಡಿ; ಇಲ್ಲವೇ ನೀರಾ, ಸಾರಾಯಿ ಜಾರಿಗೆ ತನ್ನಿ: ಕಸವನಹಳ್ಳಿ ರಮೇಶ್
“ರಾಜ್ಯದಲ್ಲಿ ಕೊರತೆ ಇರುವ ಶಿಕ್ಷಕರ ನೇಮಕಾತಿಗೆ ಅಗತ್ಯ ಕ್ರಮ ಕೈಗೊಳ್ಳಲಾಗವುದು. ಅತಿಥಿ ಉಪನ್ಯಾಸಕರ ನೇಮಕಾತಿಗೆ ನ್ಯಾಯಾಲಯದ ನಿರ್ದೇಶನದಂತೆ ಪ್ರಕ್ರಿಯೆ ನಡೆಸಲಾಗುವುದು” ಎಂದು ಹೇಳಿದರು