ಶಿವಮೊಗ್ಗ | ಪ್ರೀತಿ ನಿರಾಕರಿಸಿದ ಯುವತಿಗೆ ಕೊಲೆ ಬೆದರಿಕೆ; ಯುವಕನ ವಿರುದ್ಧ ದೂರು ದಾಖಲು

Date:

ಹನಿಟ್ರ್ಯಾಪ್ ಎಂದು ಕರೆದುಕೊಂಡ ಪ್ರಕರಣದ ಬೆನ್ನಲ್ಲೇ ಮತ್ತೊಂದು ಪ್ರಕರಣವೊಂದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಹದಿಹರೆಯದವರಿಬ್ಬರ ನಡುವೆ ಬೆಳೆದ ಪ್ರೀತಿ ಸಧ್ಯಕ್ಕೆ ಠಾಣೆ ಮೆಟ್ಟಿಲೇರಿದೆ.

- Advertisement -

ರಾಮನಗರದ ಯುವಕನೊಂದಿಗೆ ತೀರ್ಥಹಳ್ಳಿಯ ಯುವತಿಗೆ ಮೂರುವರ್ಷದ ಹಿಂದೆ ಇನ್‌ಸ್ಟಾಗ್ರಾಂನಲ್ಲಿ ಶುರುವಾದ ಪರಿಚಯ ಪ್ರೀತಿಯಾಗಿ ಪರಿವರ್ತನೆಗೊಂಡಿತ್ತು. ಯಾವಾಗ ಅವರಿಬ್ಬರ ಪ್ರೀತಿ ಬಗ್ಗೆ ಮನೆಯವರಿಗೆ ಗೊತ್ತಾಗುತ್ತದೆಯೋ ಆಗ ಯುವತಿಯ ಮನೆಯವರು ಅಕ್ಷೇಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಮನೆಯವರ ಅಕ್ಷೆಪಣೆಯಿಂದ ಹಿಂದೆ ಸರಿದ ಯುವತಿಯನ್ನು ಸಂಪರ್ಕಿಸಲು ಯುವಕ ಅನೇಕ ಬಾರಿ ಯತ್ನಿಸಿದ್ದಾನೆ. ಯುವತಿ ಹಿಂದೆ ಸರಿದ ಪರಿಣಾಮ ಯುವಕ ಸೇಡು ತೀರಿಸಿಕೊಳ್ಳಲು ಮುಂದಾಗುತ್ತಾನೆ. ಯುವತಿ ಸಲುಗೆಯಿಂದ ಇದ್ದಾಗ ತೆಗೆದ ಫೊಟೊಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಟ್ಟಿದ್ದಾನೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ಕಾಲುವೆಗೆ ಬಿದ್ದ ಗೂಡ್ಸ್ ಆಟೋ: ಮಹಿಳಾ ಕೂಲಿಕಾರರನ್ನು ನಡು ನೀರಲ್ಲಿ ಬಿಟ್ಟು ಚಾಲಕ ಪರಾರಿ!

ಅಷ್ಟಕ್ಕೂ ನಿಲ್ಲದ ಆತನ ಆಕ್ರೋಶ, ಆಕೆಯ ಬೆತ್ತಲೆ ಫೋಟೊಗಳನ್ನೂ ಸಾಮಾಜಿಕ ಜಾಲತಾಣದಲ್ಲಿ ಹಾಕುವ ಬೆದರಿಕೆ ಒಡ್ಡಿದ್ದಾನೆ. ಯುವಕನಿಗೆ ಬುದ್ದಿವಾದ ಹೇಳಲು ಬಂದ ಯುವತಿಯ ಕುಟುಂಬಸ್ಥರಿಗೂ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಬಳಿಕ ಕೊಲೆ ಬೆದರಿಕೆ ಹಾಕಿರುವುದಾಗಿ ಯುವತಿ ಆತನ ವಿರುದ್ಧ ತೀರ್ಥಹಳ್ಳಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ ಶೂನ್ಯ ಜನವಸತಿ!

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು...

‘SIR’ ಪರಿಶೋಧ-ಪ್ರತಿರೋಧ: ಸೆ.29ರಂದು ಮೈಸೂರಿನಲ್ಲಿ ಪ್ರಕಾಶ್ ರಾಜ್ ಸಂವಾದ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision-SIR) ಪ್ರಕ್ರಿಯೆ...

ಉಡುಪಿ | ಹೆತ್ತ ತಾಯಿಯನ್ನೇ ಕಾರಿನಲ್ಲಿ ಕರೆತಂದು ಅಪರಿಚಿತ ಸ್ಥಳದಲ್ಲಿ ಬಿಟ್ಟುಹೋದ ಮಗ

ಹೆತ್ತ ತಾಯಿಯನ್ನೇ ಮಗ ಅಪರಿಚಿತ ಸ್ಥಳದಲ್ಲಿ ಬಿಟ್ಟು ತೆರಳಿರುವ ಅಮಾನವೀಯ ಘಟನೆ...

ಬಳ್ಳಾರಿ | ಲಾರಿ ಪಲ್ಟಿ; ಸ್ಟೀನಿಂಗ್ ಯಂತ್ರ ಬಿದ್ದು ಯುವಕ ದುರ್ಮರಣ

ಜಿಲ್ಲೆ ಸಂಡೂರು ತಾಲ್ಲೂಕಿನ ಉಬ್ಬಳಗಂಡಿ ಗ್ರಾಮದ ಬಳಿ ಮೈನ್‌ಸ್‌ನ ಸ್ಟೀನಿಂಗ್ ಯಂತ್ರವನ್ನು...