ಸಾಲಬಾಧೆ ತಾಳಲಾರದೆ ಮನನೊಂದು ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ಜಿಲ್ಲೆ ಶಿರಾ ತಾಲೂಕಿನ ಚಿಕ್ಕನಕೋಟೆ ಗ್ರಾಮದಲ್ಲಿ ನಡೆದಿದೆ. ಲೀಲಾವತಿ (35) ನೇಣಿಗೆ ಶರಣಾದ ಮಹಿಳೆ.
ಮೈಕ್ರೋ ಫೈನಾನ್ಸ್ ಸೇರಿದಂತೆ ಹಲವೆಡೆ ಸುಮಾರು ₹9 ಲಕ್ಷ ಸಾಲ ಮಾಡಿಕೊಂಡಿದ್ದರು ಅಲ್ಲದೆ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ.
ಸಾಲ ಕೊಟ್ಟವರು ಪ್ರತಿನಿತ್ಯ ಹಿಂತಿರುಗಿಸುವಂತೆ ಕೇಳುತ್ತಿದ್ದರು. ಇತ್ತ ಆರೋಗ್ಯವೂ ಹದಗೆಟ್ಟ ಕಾರಣ ಸಾಲ ತೀರಿಸಲಾಗದೆ ಜೀವನದಲ್ಲಿ ಜಿಗುಪ್ಸೆ ಹೊಂದಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪಟ್ಟನಾಯಕನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
