ಶಿರಾ | ಕಳಪೆ ಗುಣಮಟ್ಟದ ಆಹಾರ ಸೇವಿಸಿ 50ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Date:

ಹಾಸ್ಟೆಲ್‌ನಲ್ಲಿ ಊಟ ಸೇವಿಸಿದ ಬಳಿಕ 40 ರಿಂದ 50 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಆತಂಕಕಾರಿ ಘಟನೆ ತುಮಕೂರು ಜಿಲ್ಲೆ ಶಿರಾ ತಾಲೂಕಿನಲ್ಲಿ ನಡೆದಿದೆ.

- Advertisement -

ಶಿರಾ ಪಟ್ಟಣದ ವಿಧಾನ ಪರಿಷತ್ ಸದಸ್ಯ ಚಿದಾನಂದ್ ಒಡೆತನದ ಪ್ರೆಸಿಡೆನ್ಸಿ ಖಾಸಗಿ ವಸತಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ. ಕಳಪೆ ಗುಣಮಟ್ಟದ ಕಲುಷಿತ ಆಹಾರ ಸೇವಿಸಿ ಆರೋಗ್ಯದಲ್ಲಿ ಏರುಪೇರಾಗಿರಬಹುದು ಎನ್ನುವ ಶಂಕೆ ವ್ಯಕ್ತವಾಗಿದೆ. ಸದ್ಯ ಶಿರಾ ತಾಲೂಕು ಆಸ್ಪತ್ರೆಗೆ ವಿದ್ಯಾರ್ಥಿಗಳನ್ನು ದಾಖಲಿಸಲಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ವಿಷಯ ತಿಳಿದ ವಸತಿ ಶಾಲೆಯ ಮಾಲೀಕ ಹಾಗೂ ಎಂ‌ಎಲ್‌ಸಿ ಚಿದಾನಂದ್ ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದ್ದಾರೆ.

ಇತ್ತೀಚೆಗೆ ಮಂಗಳೂರು ಹಾಗೂ ಕೊಪ್ಪಳದಲ್ಲೂ ಈ ರೀತಿಯ ಘಟನೆಗಳು ನಡೆದಿದ್ದವು. ಅವು ಮಾಸುವ ಮುನ್ನವೇ ರಾಜ್ಯದಲ್ಲಿ ಮತ್ತೊಂದು ಇಂಥದ್ದೇ ಘಟನೆ ಮರುಕಳಿಸಿರುವುದು ಪೋಷಕರಲ್ಲಿ ಹಾಗೂ ವಿದ್ಯಾರ್ಥಿಗಳಲ್ಲಿ ಆತಂಕ ಹೆಚ್ಚಿಸಿದೆ.

ಈ ಸುದ್ದಿ ಓದಿದ್ದೀರಾ?: ಶಿರಾ |  ಹಾಸ್ಟೆಲ್ ನ 14 ವಿದ್ಯಾರ್ಥಿಗಳು ಅಸ್ವಸ್ಥ : ಆಸ್ಪತ್ರೆಯಲ್ಲಿ ಚಿಕಿತ್ಸೆ 

ರಾಜ್ಯದ ಬಹುತೇಕ ಶಾಲೆಗಳಲ್ಲಿ ಊಟದಲ್ಲಿ ನುಸಿ, ಹುಳುಗಳು ಕಂಡುಬರುತ್ತಿರುವ ವರದಿಗಳು ದಿನನಿತ್ಯ ಪ್ರಕಟವಾಗುತ್ತಿವೆ. ಆಹಾರ ಧಾನ್ಯಗಳನ್ನು ಪ್ರತಿ ತಿಂಗಳು ಆಯಾ ಶಾಲೆಗೆ ಬೇಕಾಗುವಷ್ಟು ಸರಬರಾಜು ಮಾಡಲಾಗುತ್ತದೆ. ಜಿಲ್ಲೆಯ ವಿವಿಧ ಗೋಡೌನ್ ಗಳಿಂದ ಅಕ್ಕಿ ಪೂರೈಕೆಯಾದ್ರೆ, ತೊಗರಿಬೇಳೆ, ಎಣ್ಣೆ ಸೇರಿದಂತೆ ಬೇರೆ ಪದಾರ್ಥಗಳು ಟೆಂಡರ್ ಪಡೆಯುವ ಏಜೆನ್ಸಿಗಳು ಪೂರೈಗೆ ಮಾಡುತ್ತವೆ. ಕಳಪೆ ಆಹಾರ ಧಾನ್ಯಗಳನ್ನು ಪೂರೈಕೆ ಮಾಡುವ ಏಜೆನ್ಸಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಪೋಷಕರು ಮನವಿ ಮಾಡುತ್ತಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಶ್ರೀ ದುರ್ಗಾಂಬ ಬಸ್ ಕಳವು ಪ್ರಕರಣ: ಬಸ್ ಪತ್ತೆ

ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗದಲ್ಲಿ ನಿಲ್ಲಿಸಿದ್ದ ಸುಮಾರು ₹40 ಲಕ್ಷ ಮೌಲ್ಯದ...

ಸಿಂಧನೂರು | ₹10 ಕೋಟಿಗೂ ಅಧಿಕ ಅವ್ಯವಹಾರ ಆರೋಪ; ಕಿರಿಯ ಅಭಿಯಂತರ ಅಮಾನತು

ಸಿಂಧನೂರು ಉಪವಿಭಾಗದ ಕಿರಿಯ ಅಭಿಯಂತರ ನಾಗರಾಜ ಪ್ರಭಾ ಅವರನ್ನು ₹10 ಕೋಟಿಗೂ...

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ: ಪರಿಶೀಲನೆಗೆ ಸಮಿತಿ ರಚನೆ

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಅಥವಾ ಶಾಶ್ವತ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಪರಿಶೀಲನೆ...

ಮಧುಗಿರಿ | ವ್ಯಾಕರಣ ಎಂದರೆ ಕೇವಲ ನಿಯಮಗಳಲ್ಲ: ಪ್ರೊ ಡಿ ಎಸ್ ಮುನೀಂದ್ರಕುಮಾರ್

  ಕೇಶಿರಾಜ ಬರೆದ ‘ಶಬ್ದಮಣಿದರ್ಪಣ’ವು ಕನ್ನಡ ಭಾಷೆಗೆ ಹಿಡಿದ ಸ್ವಚ್ಛವಾದ ಕನ್ನಡಿ....