ಬೀದರ್‌ | ಹಾಡು ಹಗಲೇ ತಹಸೀಲ್ ಕಚೇರಿಯಲ್ಲಿ ಶಿರಸ್ತೆದಾರ್‌ಗೆ ಚಾಕು ಇರಿತ ; ಇಬ್ಬರ ಬಂಧನ

Date:

ಬೀದರ್ ನಗರದ ತಹಶೀಲ್ದಾರ್ ಕಚೇರಿಯಲ್ಲಿ ಆಹಾರ ವಿಭಾಗದ ಶಿರಸ್ತೆದಾರನಿಗೆ ಚಾಕು ಇರಿದ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ.

- Advertisement -

ಘಟನೆಗೆ ಸಂಬಂಧಿಸಿದ ಆರೋಪಿಗಳಾದ ಎಂ.ಡಿ.ಅಮನ್, ಮೊಹಮ್ಮದ್ ಜಿಶಾನ್‌ ಇಬ್ಬರು ಸಹೋದರರನ್ನು ಘಟನೆ ನಡೆದ ನಾಲ್ಕು ಗಂಟೆಗಳಲ್ಲೇ ಪೊಲೀಸರು ಬಂದಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಚಾಕು ಇರಿತಕ್ಕೊಳಗಾದ ಶಿರಸ್ತೆದಾರ್ ಅನಿಲಕುಮಾರ್ ಕಾಂಬಳೆ ಅವರನ್ನು ಬ್ರಿಮ್ಸ್‌ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆಗೆ ಒಳಪಡಿಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ʼತಹಶೀಲ್ದಾರ್ ಕಚೇರಿಯ ಆಹಾರ ವಿಭಾಗದಲ್ಲಿ ಅನಿಲಕುಮಾರ್ ಕಾಂಬಳೆ ಅವರೊಂದಿಗೆ ಬಂಧಿತ ಎಂ.ಡಿ.ಅಮನ್ ಅವರ ಪತ್ನಿ ಕೆಲಸ ನಿರ್ವಹಿಸುತ್ತಾರೆ. ಪತ್ನಿಯೊಂದಿಗೆ ಅನಿಲಕುಮಾರ್ ಆತ್ಮೀಯರಾಗಿದ್ದಾರೆ ಎಂಬ ಅನುಮಾನದಿಂದ ಅನಿಲಕುಮಾರ್ ಅವರನ್ನು ಕೊಲೆ ಮಾಡುವ ಉದ್ದೇಶದಿಂದ ಆತನ ಸಹೋದರ ಮೊಹಮ್ಮದ್ ಜಿಶಾನ್‌ ಅವರೊಂದಿಗೆ ಕಚೇರಿಯೊಳಗೆ ಹೋಗಿ ಜಾತಿ ನಿಂದನೆ ಮಾಡಿ, ಚಾಕುವಿನಿಂದ ಎಡಗೈ ರಟ್ಟೆಗೆ ಇರಿದು ಮಾರಣಾಂತಿಕ ಹಲ್ಲೆ ಮಾಡಿದ್ದಾರೆʼ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಪ್ರದೀಪ ಗುಂಟಿ ತಿಳಿಸಿದ್ದಾರೆ.

ಸ್ಥಳಕ್ಕೆ ಮಾರ್ಕೆಟ್‌ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು. ಘಟನೆ ನಡೆದ ನಾಲ್ಕು ಗಂಟೆಗಳ ಒಳಗೆ ಇಬ್ಬರು ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸಲಾಗಿದೆʼ ಎಂದು ಮಾಹಿತಿ ನೀಡಿದರು.

ಈ ಕುರಿತು ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಲೂನ್ ಮಾರುವ 9 ವರ್ಷದ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಅಪರಾಧಿ ಕಾರ್ತಿಕ್‌ಗೆ ಗಲ್ಲು ಶಿಕ್ಷೆ

ಕಳೆದ ವರ್ಷದ ದಸರಾ ಮಹೋತ್ಸವದ ಸಂದರ್ಭದಲ್ಲಿ ಕುಟುಂಬದೊಂದಿಗೆ ಟೆಂಟ್‌ನಲ್ಲಿ ಮಲಗಿದ್ದ 9...

ಬಾಗೇಪಲ್ಲಿ | ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಅಂತರ ಕಾಲೇಜು ವಿದ್ಯಾರ್ಥಿಗಳ ಗುಡ್ಡಗಾಡು ಓಟ ಸ್ಪರ್ಧೆ

ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಶಾರೀರಿಕ...

ರಾಯಚೂರು | ಮಾನ್ವಿ ಬಳಿ ಈರುಳ್ಳಿ ಸಾಗಿಸುತ್ತಿದ್ದ ಲಾರಿ ಪಲ್ಟಿ; ಚಾಲಕ, ಕ್ಲೀನರ್‌ಗೆ ಗಾಯ

ಮಾನ್ವಿ ತಾಲೂಕಿನ ಗ್ರಾಮದ ಸಮೀಪದ ಹೊರವಲಯದಲ್ಲಿ ಮಾನ್ವಿ ರಸ್ತೆಯಲ್ಲಿ ಈರುಳ್ಳಿ ಸಾಗಿಸುತ್ತಿದ್ದ...