ಶಿರೂರು ದುರಂತ | ಮತ್ತೆ ಕಾರ್ಯಾಚರಣೆ ಮುಂದುವರಿಸಿದ ಮುಳುಗು ತಜ್ಞ ಈಶ್ವರ್ ಮಲ್ಪೆ ತಂಡ

Date:

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಳೆದ ಜುಲೈ 16ರಂದು ಸಂಭವಿಸಿದ ಭೂ ಕುಸಿತ ಘಟನೆ ನಡೆದು ಸರಿಸುಮಾರು ಒಂದು ತಿಂಗಳಾಗುತ್ತಾ ಬಂದಿದೆ.

- Advertisement -

ಗಂಗಾವಳಿ ನದಿಯಲ್ಲಿ ಕಾಣೆಯಾದ ಮೂವರ ಶೋಧ ಕಾರ್ಯಕ್ಕೆ ಜಿಲ್ಲಾಡಳಿತ ಹಿಂದೇಟು ಹಾಕಿತ್ತು. ಆದರೆ ಕಾರವಾರದ ಶಾಸಕ ಸತೀಶ್ ಸೈಲ್ ಅವರ ಸೂಚನೆಯಂತೆ ಉಡುಪಿಯ ಮುಳುಗುತಜ್ಞ ಈಶ್ವರ್ ಮಲ್ಪೆಯವರು ಗಂಗಾವಳಿ ನದಿಯಲ್ಲಿ ಮಂಗಳವಾರ ಸಂಜೆ ವೇಳೆಯಲ್ಲಿ ಶೋಧ ಕಾರ್ಯಕ್ಕಿಳಿದಿದ್ದರು. ಈ ವೇಳೆ ಗ್ಯಾಸ್ ಟ್ಯಾಂಕರ್‌ನ ಚಿಕ್ಕ ಭಾಗ ಹಾಗೂ ಕೇರಳ ಮೂಲದ ಭಾರತ್ ಬೆಂಝ್ ಲಾರಿಯ ವೀಲ್ ಜಾಕ್ ಕಾರ್ಯದಲ್ಲಿ ಪತ್ತೆಯಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಈ ಹಿನ್ನೆಲೆಯಲ್ಲಿ ಬುಧವಾರ ಕೂಡ ಶೋಧ ಕಾರ್ಯಾಚರಣೆಯನ್ನು ಬೆಳಗ್ಗೆ 10 ಗಂಟೆಯಿಂದಲೇ ಮುಳುಗು ತಜ್ಞ ಈಶ್ವರ್ ಮಲ್ಪೆ ಹಾಗೂ ನೌಕಾದಳದ ತಂಡ ಆರಂಭಿಸಿದೆ.

ಕೇರಳದ ಲಾರಿ ಚಾಲಕ ಅರ್ಜುನ್, ಶಿರೂರಿನ ಜಗನ್ನಾಥ್, ಗಂಗೆಕೊಳ್ಳದ ಲೋಕೇಶ್ ಶವಕ್ಕಾಗಿ ಶೋಧ ನಡೆಸಬೇಕಿದ್ದು, ಇದೀಗ ಗಂಗಾವಳಿ ನದಿಯಲ್ಲಿ ಶೋಧ ಕಾರ್ಯ ಮುಂದುವರಿಸಲಾಗಿದೆ.

ವೀಲ್ ಜಾಕ್

ಕಾರವಾರ ಶಾಸಕ ಸತೀಶ್ ಸೈಲ್ ಸೂಚನೆ ಮೇರೆಗೆ ಇದೀಗ ಮತ್ತೆ ಶೋಧ ಕಾರ್ಯ ಆರಂಭವಾಗಿದ್ದು, ಉಡುಪಿಯ ಮುಳುಗು ತಜ್ಞ ಈಶ್ವರ್ ಮಲ್ಪೆ ಅವರು ಗಂಗಾವಳಿ ನದಿಯಲ್ಲಿ ಪರಿಶೀಲಿಸಿದಾಗ ಗ್ಯಾಸ್ ಟ್ಯಾಂಕರ್‌ನ ಸ್ವಲ್ಪ ಭಾಗ ಪತ್ತೆಯಾಗಿದೆ.

ಕೇರಳದ ಚಾಲಕ ಅರ್ಜುನ್ ಎಂಬಾತನಿಗೆ ಸೇರಿದ್ದ ಲಾರಿಯ ಕೆಲವು ಭಾಗಗಳು ಪತ್ತೆಯಾಗಿರುವುದು ಶೋಧ ತಂಡಕ್ಕೆ ಹೊಸ ಭರವಸೆ ಮೂಡಿಸಿದೆ. ತಂಡವು ಗಂಗಾವಳಿ ನದಿಯ ಮಧ್ಯದಲ್ಲಿ ಶೋಧ ಕಾರ್ಯಾಚರಣೆಯನ್ನು ಮುಂದುವರಿಸಿದೆ.

ನಾಪತ್ತೆಯಾದವರ ಪತ್ತೆಗೆ ಒತ್ತಡ ಹೆಚ್ಚಿದ್ದು, ಭರವಸೆಯಂತೆ ಜಿಲ್ಲಾಡಳಿತ ಮತ್ತೆ ಶೋಧ ಕಾರ್ಯ ಆರಂಭಿಸಿದೆ. ಅದರಂತೆ ಎನ್‌ ಡಿ ಆರ್‌ ಎಫ್, ಎಸ್ ಡಿ ಆರ್‌ ಎಫ್ ಜಿಲ್ಲಾಡಳಿತ ಮತ್ತು ಭಾರತೀಯ ನೌಕಾಪಡೆ ಜಂಟಿಯಾಗಿ ಶೋಧ ಕಾರ್ಯದಲ್ಲಿ ಭಾಗಿಯಾಗಿವೆ.

ಲಾರಿ 4

ನೌಕಾಪಡೆಯ ಅಧಿಕಾರಿಗಳು ರಾಡಾರ್ ಮತ್ತು ಇತರ ಅತ್ಯಾಧುನಿಕ ಉಪಕರಣಗಳನ್ನು ಬಳಸಿಕೊಂಡು ಶೋಧ ಕಾರ್ಯಾಚರಣೆಯನ್ನು ನಡೆಸಿದರೆ, ಡೈವರ್‌ಗಳು ನಾಪತ್ತೆಯಾದ ಮೂವರಿಗಾಗಿ ನೀರೊಳಗೆ ಮುಳುಗಿ ಶೋಧ ನಡೆಸುತ್ತಿದ್ದಾರೆ.

ಜಿಲ್ಲಾಡಳಿತದ ಪ್ರಕಾರ ಭೂಕುಸಿತದಲ್ಲಿ 11 ಮಂದಿ ಸಾವನ್ನಪ್ಪಿದ್ದಾರೆ, ಆದರೆ ಇದುವರೆಗೆ 8 ಶವಗಳು ಮಾತ್ರ ಪತ್ತೆಯಾಗಿವೆ. ಕೇರಳ ಸರ್ಕಾರ ಮತ್ತು ಮಾಧ್ಯಮಗಳು ಶೋಧ ಕಾರ್ಯಾಚರಣೆಗೆ ಮುಂದಾಗುವಂತೆ ಜಿಲ್ಲಾಡಳಿತವನ್ನು ಒತ್ತಾಯಿಸಿದ್ದವು. ಶಿರೂರು ಮರು ಕಾರ್ಯಾಚರಣೆಯನ್ನು ಕೇರಳದ ಬಹುತೇಕ ಮುಖ್ಯ ಮಾಧ್ಯಮಗಳು ಸ್ಥಳದಲ್ಲೇ ನಿಂತು ವರದಿ ಮಾಡುತ್ತಿದೆ.

malpe team

ನದಿಯಲ್ಲಿ ಮತ್ತೆ ಲಾರಿ ಡೀಸೆಲ್ ಸೋರಿಕೆಯ ಸುಳಿವು

ಇನ್ನು ಶೋಧ ಕಾರ್ಯಾಚರಣೆ ವೇಳೆ ಈಶ್ವರ್ ಮಲ್ಪೆ ತಂಡವು ನದಿಯಲ್ಲಿ ಮತ್ತೆ ಲಾರಿ ಡೀಸೆಲ್ ಸೋರಿಕೆಯ ಸುಳಿವು ಪತ್ತೆಯಾಗಿರುವುದಾಗಿ ಮಾಹಿತಿ ನೀಡಿದೆ.

ಈ ಬಗ್ಗೆ ಮಾತನಾಡಿರುವ ಈಶ್ವರ್ ಮಲ್ಪೆ, “ಕಾರ್ಯಾಚರಣೆ ಆರಂಭ ಮಾಡಿದ್ದೇವೆ. ಲಾರಿ ಇಂತಹದ್ದೇ ಸ್ಥಳದಲ್ಲಿ ಇದೆ ಎಂಬುವುದು ಖಚಿತ ಆಗಿದೆ. ಆದರೆ ಆ ಲಾರಿಯ ಮೇಲೆ ದೊಡ್ಡ ಪ್ರಮಾಣದಲ್ಲಿ ಮಣ್ಣು ಬಿದ್ದಿದೆ. ಮಣ್ಣನ್ನು ತೆರವು ಮಾಡುವ ಕಾರ್ಯದ ಬಳಿಕ ಮೃತ ದೇಹಗಳು ಸಿಗುವ ಸಾಧ್ಯತೆಯಿದೆ” ಎಂದು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...