ಶಿರುಂಜ ಗ್ರಾಮದ 5 ವರ್ಷದ ಬಾಲಕ ಡೆಂಘೀ ಜ್ವರದಿಂದ ಮೃತಪಟ್ಟಿದ್ದು, ಗದಗದಲ್ಲಿ ಡೆಂಘೀಗೆ ಮೊದಲ ಬಲಿಯಾಗಿದ್ದಾನೆ.
ಗದಗ ತಾಲೂಕಿನ ಶಿರುಂಜ ಗ್ರಾಮದ ಚಿರಾಯಿ ಹೊಸಮನಿ(5)ಯನ್ನು ಚಿಕಿತ್ಸೆಗಾಗಿ ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಕಳೆದ ಒಂದು ವಾರದಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ. ಬಳಿಕ ಬಾಲಕನನ್ನು ಹೆಚ್ಚಿನ ಚಿಕಿತ್ಸೆಗಾಗಿ ಧಾರವಾಡದ ಎಸ್‌ಡಿಎಂ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಆದರೆ ಚಿಕಿತ್ಸೆ ಫಲಿಸದೆ ಭಾನುವಾರ ಧಾರವಾಡದ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಗಿ ತಿಳಿದುಬಂದಿದೆ.
ಈ ಸುದ್ದಿ ಓದಿದ್ದೀರಾ? ರಾಯಚೂರು | ಚಿರತೆ ದಾಳಿಯಿಂದ ಮೂವರಿಗೆ ಗಾಯ; ಚಿರತೆ ಸೆರೆಗೆ ಸಿದ್ಧತೆ
ಮೃತ ಬಾಲಕನ ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದ್ದರೆ ಗ್ರಾಮದಲ್ಲಿ ಆತಂಕ ಸೃಷ್ಟಿಯಾಗಿದೆ. ಈ ಮಧ್ಯೆ ಗದಗ ಜಿಲ್ಲಾ ಆರೋಗ್ಯ ಇಲಾಖೆಯ ಹಿರಿ ಕಿರಿಯ ಅಧಿಕಾರಿಗಳಿಗೆ, ಜಿಲ್ಲಾಡಳಿತ ವ್ಯವಸ್ಥೆಗೆ ಜನತೆ ಹಿಡಿಶಾಪ ಹಾಕುತ್ತಿದ್ದು, ಈಗಲಾದರು ಆರೋಗ್ಯ ಇಲಾಖೆ, ಜಿಲ್ಲಾಡಳಿತ ಎಚ್ಚೆತ್ತುಕೊಂಡು ಜಿಲ್ಲೆಯಲ್ಲಿ ಡೆಂಘೀ ಜ್ವರ ಹೆಚ್ಚಾಗದಂತೆ ಎಚ್ಚರಿಕೆ ವಹಿಸಬೇಕಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
