ಉತ್ತರ ಕನ್ನಡ | ಶಿರೂರ ಭೂ ಕುಸಿತ : ಮೃತರಿಗೆ ಪರಿಹಾರ ಒದಗಿಸಲು ಎಸ್‌ಎಫ್‌ಐ ಆಗ್ರಹ

Date:

Advertisements

ಶಿರೂರು ಗುಡ್ಡ ಕುಸಿತದ ದುರಂತದಲ್ಲಿ ಮೃತರಾದವರಿಗೆ ತಲಾ 50 ಲಕ್ಷ ರೂ. ಪರಿಹಾರ ಹಾಗೂ ಕುಟುಂಬದ ಸದಸ್ಯರಿಗೆ ಖಾಯಂ ಸರ್ಕಾರಿ ಉದ್ಯೋಗ ನೀಡಬೇಕೆಂದು ಭಾರತೀಯ ವಿದ್ಯಾರ್ಥಿ ಫೇಡರೇಷನ್ (ಎಸ್‌ಎಫ್‌ಐ) ಆಗ್ರಹಿಸಿದೆ.

ಈ ಕುರಿತು ಪ್ರಧಾನಿ ಮಂತ್ರಿ ನರೇಂದ್ರ ಮೋದಿ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮುಖ್ಯಸ್ಥರಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಅವರಿಗೆ ಮನವಿ ಸಲ್ಲಿಸಿದರು.

ದಕ್ಷಿಣ ಕನ್ನಡ ಜಿಲ್ಲಾ ಎಸ್‌ಎಫ್‌ಐ ಸಂಚಾಲಕ ಗಣೇಶ್ ರಾಠೋಡ್ ಮಾತನಾಡಿ, ʼಶಿರೂರು ಭೂ ಕುಸಿತದಲ್ಲಿ 7 ಜನ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಾಪತ್ತೆಯಾದ ಇನ್ನೂ 3 ಜನರಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಅಪಘಾತದ ಸ್ಥಳದಲ್ಲಿ ರಾಷ್ಟ್ರೀಯ ಹೆದ್ದಾರಿಯ ಕಳಪೆ ಮಟ್ಟದ ಕಾಮಗಾರಿಯಿಂದಾಗಿ ಈ ದುರಂತ ಸಂಭವಿಸಿದೆʼ ಎಂದು ಆರೋಪಿಸಿದರು.

Advertisements

ʼಈ ಘಟನೆಗೆ ತಪ್ಪಿಸ್ಥರಾದ ಭಾರತ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವನ್ನು (ಎನ್‌ಎಚ್‌ಎಐ) ಹೊಣೆಗಾರರನ್ನಾಗಿ ಮಾಡಬೇಕು. ಕೂಡಲೇ ಕೇಂದ್ರ ಸರ್ಕಾರ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಪಘಾತ ತಡೆಗಟ್ಟಲು ಸೂಕ್ತ ವೈಜ್ಞಾನಿಕ ಕ್ರಮಗಳನ್ನು ಪ್ರಾರಂಭಿಸಬೇಕುʼ ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ನಮಾಜ್‌ ವೇಳೆ ಮಸೀದಿಗೆ ಮದ್ಯದ ಬಾಟಲಿ ಎಸೆತ : ಇಬ್ಬರ ಬಂಧನ

ಈ ಸಂದರ್ಭದಲ್ಲಿ ಎಸ್‌ಎಫ್‌ಐ ರಾಜ್ಯ ಪದಾಧಿಕಾರಿಗಳು ಹಾಗೂ ತಾಲೂಕು ಮುಖಂಡರಾದ ಶೇಖಪ್ಪ ಬಳ್ಳಾರಿ, ಓಂಕಾರ, ರೋಹಿತ, ಕಪೀಲ್ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X