ಉಡುಪಿ | ಟಿಪ್ಪರ್ ಲಾರಿ ಪಲ್ಟಿ, ಚಾಲಕ ಸಾವು

Date:

ಟಿಪ್ಪರ್ ಲಾರಿ ಪಲ್ಟಿಯಾಗಿ ಚಾಲಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಉಡುಪಿ‌ಯ ಬೆಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಟ್ಟಿಂಗೇರಿ ಗಣಪಣಕಟ್ಟೆ ತಿರುವಿನ ಬಳಿ ಮಂಗಳವಾರ ಮುಂಜಾನೆ ನಡೆದಿದೆ.

- Advertisement -

ಮೃತರನ್ನು ಬೈಂದೂರಿನ ಸುಬ್ರಮಣ್ಯ ಆಚಾರ್ಯ (40) ಎಂದು ಗುರುತಿಸಲಾಗಿದೆ. ಮಂಗಳವಾರ ಮುಂಜಾನೆ 4 ಗಂಟೆಯ ಸುಮಾರಿಗೆ ಈ ದುರ್ಘಟನೆ ನಡೆದಿದೆ. ಟಿಪ್ಪರ್ ಬೈಂದೂರಿನಿಂದ ಪಳ್ಳಿಯ ಕೋರೆಗೆ ಜಲ್ಲಿ ತರಲು ಹೋಗುತ್ತಿದ್ದ ವೇಳೆ ಆಕಸ್ಮತ್ತಾಗಿ ರಸ್ತೆಯಲ್ಲೇ ಪಲ್ಟಿಯಾಗಿದೆ. ಪರಿಣಾಮ ಚಾಲಕ ಸುಬ್ರಮಣ್ಯ ಟಿಪ್ಪರ್ ಅಡಿಗೆ ಬಿದ್ದು ಸ್ಥಳದಲ್ಲೇ ದಾರುಣವಾಗಿ ಪ್ರಾಣ ಕಳೆದುಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಘಟನೆ ನಡೆದ ಬಳಿಕ ಸ್ಥಳಕ್ಕೆ ಧಾವಿಸಿದ ಬೆಳ್ಳೆ ಗ್ರಾಮ ಪಂಚಾಯತ್ ಸದಸ್ಯರಾದ ಗುರುರಾಜ್ ಭಟ್, ಸುಧಾಕರ ಪೂಜಾರಿ, ಕೃಷ್ಣ ಆಚಾರ್ಯ ಹಾಗೂ ಶಿರ್ವ ಪೊಲೀಸ್ ಸಿಬ್ಬಂದಿಯವರ ಸಹಕಾರದೊಂದಿಗೆ ಜೆಸಿಬಿ ಮೂಲಕ ಲಾರಿಯನ್ನು ಎತ್ತಿ ಚಾಲಕನ ಮೃತ ದೇಹವನ್ನು ಹೊರತೆಗೆದು ಅಜ್ಜರಕಾಡು ಜಿಲ್ಲಾ ಆಸ್ಪತ್ರೆಗೆ ಕಳಿಸಲಾಯಿತು. ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...