ಉಡುಪಿ | ಶಿವಾಜಿಯ ಜೀವನ ಚರಿತ್ರೆ, ಆದರ್ಶ ತತ್ವಗಳು ಮಾದರಿಯಾಗಲಿ – ಶಾಸಕ ಯಶ್ಪಾಲ್ ಸುವರ್ಣ

Date:

ಛತ್ರಪತಿ ಶಿವಾಜಿಯವರು ತಮ್ಮ ಜೀವನದಲ್ಲಿ ಅಳವಡಿಸಿಕೊಂಡಿದ್ದ ಆದರ್ಶ ತತ್ವಗಳು ಎಲ್ಲರಿಗೂ ಮಾದರಿಯಾಗಬೇಕು ಹಾಗೂ ಅವರ ಜೀವನಚರಿತ್ರೆ, ಆಚಾರ ವಿಚಾರಗಳನ್ನು ಪ್ರತಿಯೊಬ್ಬರೂ ಅನುಸರಿಸಬೇಕು ಎಂದು ಶಾಸಕ ಯಶ್‌ಪಾಲ್ ಎ ಸುವರ್ಣ ಹೇಳಿದರು.

- Advertisement -

ಅವರು ಇಂದು ಮಲ್ಪೆಯ ಸರಕಾರಿ ಪದವಿ ಪೂರ್ವ ಕಾಲೇಜಿನ ಸಭಾಭವನದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಛತ್ರಪತಿ ಶಿವಾಜಿ ಜಯಂತಿ ಆಚರಣೆ ಕಾರ್ಯಕ್ರಮವನ್ನು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿ ಮಾತನಾಡುತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಶಿವಾಜಿಯ ಜೀವನ ಚರಿತ್ರೆಯನ್ನು ಅವಲೋಕಿಸಿ ಇತಿಹಾಸಕ್ಕೆ ನೀಡಿದ ಅವರ ಕೊಡುಗೆಗಳನ್ನು, ವ್ಯಕ್ತಿತ್ವ ಗುಣಗಳನ್ನು ಅರಿತುಕೊಳ್ಳಬೇಕು. ದೇಶದಲ್ಲೇ ಉತ್ತಮ ಆಡಳಿತ ನೀಡಿದ ಹಿಂದೂ ಮಹಾಕ್ರಾಂತಿಕಾರಿ ಶಿವಾಜಿ ಜಯಂತಿಗೆ ಅರ್ಥಪೂರ್ಣ ಮಹತ್ವ ದೊರೆಯಬೇಕು ಎಂದ ಅವರು, ಶೀಘ್ರದಲ್ಲಿಯೇ ಜಿಲ್ಲೆಯಲ್ಲಿ ಶಿವಾಜಿಯವರ ಪ್ರತಿಮೆಯನ್ನು ನಿರ್ಮಾಣ ಮಾಡಲಾಗುವುದು ಎಂದರು.

ಅಪರ ಜಿಲ್ಲಾಧಿಕಾರಿ ನಾಗರಾಜ್ ವಿ ನಾಯಕ್ ಮಾತನಾಡಿ, ಅಂದಿನ ಕಾಲಘಟ್ಟದಲ್ಲಿ ದೇಶ ಕಟ್ಟುವಲ್ಲಿ ಶ್ರದ್ಧೆಯಿಂದ ಹೋರಾಡಿದ ಧೀಮಂತ ನಾಯಕ ಹಾಗೂ ಶಿವಾಜಿಯ ಜಾಣ್ಮೆಯು ತನ್ನ ಆಡಳಿತಕ್ಕೆ ಪ್ರಮುಖವಾಗಿತ್ತು. ಜೀವನಕ್ಕೆ ಉತ್ತಮ ದಾರಿಗಳನ್ನು ಹುಡುಕುವ ಮುಂಚೆ ಸಂಕೋಚವನ್ನು ಬಿಡಬೇಕು ಹಾಗೂ ತಂದೆ, ತಾಯಿ ಮತ್ತು ಗುರುಗಳು ಹಾಕಿಕೊಟ್ಟ ದಾರಿಯಲ್ಲಿ ನಡೆಯಬೇಕು ಎಂದರು.

ಜಿಲ್ಲೆಯ ಲೇಖಕ ಮತ್ತು ಕಥೆಗಾರರಾದ ಮಂಜುನಾಥ ಹಿಲಿಯಾಣ ಉಪನ್ಯಾಸ ನೀಡಿ ಮಾತನಾಡಿ, ಶಿವಾಜಿಯ ಶ್ರದ್ಧೆ ಮತ್ತು ಧೈರ್ಯ ಎಲ್ಲರಿಗೂ ಪ್ರೇರಣೆಯಾಗಬೇಕು ಹಾಗೂ ಅವರ ಆದರ್ಶಗಳನ್ನು, ಜೀವನದ ಮೌಲ್ಯಗಳನ್ನು ಇಂದಿನ ಪೀಳಿಗೆಯ ವಿದ್ಯಾರ್ಥಿಗಳು ಅಳವಡಿಸಿಕೊಳ್ಳಬೇಕು. ಇತಿಹಾಸಕ್ಕೆ ಶಿವಾಜಿ ನೀಡಿದ ಕೊಡುಗೆಗಳನ್ನು ಮನನ ಮಾಡಿಕೊಳ್ಳಬೇಕು ಎಂದರು.

ಇದೇ ಸಂದರ್ಭದಲ್ಲಿ ಸಮುದಾಯದ ವತಿಯಿಂದ ಯಕ್ಷಗಾನ ಕ್ಷೇತ್ರದಲ್ಲಿ ಸಾಧನೆಗೈದ ಕೇಶವ್ ರಾವ್ ಬಡಾನಿಡಿಯೂರು ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಸಾಧನೆಗೈದ ಸಮೃದ್ಧಿ ಆರ್ ಇವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ಕರ್ನಾಟಕ ಕ್ಷತ್ರೀಯ ಮರಾಠ ಪರಿಷತ್ತಿನ ಜಿಲ್ಲಾಧ್ಯಕ್ಷ ಪ್ರಕಾಶ್ ರಾವ್, ಛತ್ರಪತಿ ಶಿವಾಜಿ ವಿವಿದ್ದೋದೇಶ ಸಹಕಾರ ಸಂಘದ ಅಧ್ಯಕ್ಷ ದಿನೇಶ್ ನಾಯ್ಕ್, ಕಾಲೇಜಿನ ಪ್ರಾಂಶುಪಾಲೆ ಜಯಶ್ರೀ, ಮರಾಠ ಪರಿಷತ್ತಿನ ಪದಾಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿ, ತೇಜಸ್ ಬಂಗೇರ ನಿರೂಪಿಸಿ, ಕಾಲೇಜಿನ ಹಿರಿಯ ಶಿಕ್ಷಕ ಸತೀಶ್ ಭಟ್ ವಂದಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...