ಶಿವಮೊಗ್ಗ | ಶೀಘ್ರದಲ್ಲಿ17 ಸಾವಿರ ಶಿಕ್ಷಕರ ನೇಮಕ ;ಮಧು ಬಂಗಾರಪ್ಪ

Date:

Advertisements

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಸೋಮವಾರದಂದು ಶಿವಮೊಗ್ಗ ನಗರದ ಉಸ್ತುವಾರಿ ಸಚಿವರ ಕಚೇರಿಯಲ್ಲಿ ಸಾರ್ವಜನಿಕರಿಂದ ಅಹವಾಲು ಅರ್ಜಿಗಳನ್ನು ಸ್ವೀಕರಿಸಿದರು.

ಶಿವಮೊಗ್ಗ-ಭದ್ರಾವತಿ ಮೀಟರ್ ಟ್ಯಾಕ್ಸಿ ಅಸೋಸಿಯೇಷನ್‌ನವರು ತಮ್ಮ ಟ್ಯಾಕ್ಸಿಗಳಿಗೆ ಜಿಪಿಎಸ್ ಮತ್ತು ಟ್ರ್ಯಾಕಿಂಗ್ ವ್ಯವಸ್ಥೆ ಅಳವಡಿಕೆ ಮಾಡಬೇಕೆಂಬ ಆದೇಶವಿರುತ್ತದೆ. ಈ ವ್ಯವಸ್ಥೆ ಇಲ್ಲದಿದ್ದಲ್ಲಿ ಆರ್‌ಟಿಓ ಕಚೇರಿಯಿಂದ ಎಫ್‌ಸಿ ಮಾಡಿಸಲು ಬರುವುದಿಲ್ಲ. ಆದರೆ ಈ ವ್ಯವಸ್ಥೆ ಅಳವಡಿಕೆಯಿಂದ ಟ್ಯಾಕ್ಸಿ ನಡೆಸುವವರಿಗೆ ಅಧಿಕ ಖರ್ಚು ಬರುತ್ತದೆ. ಹಾಗೂ ಈ ಟ್ಯಾಕ್ಸಿಗಳು ಶಿವಮೊಗ್ಗ ಮತ್ತು ಭದ್ರಾವತಿ ನಡುವೆ ಮಾತ್ರ ಕಾರ್ಯಾಚರಣೆ ಮಾಡುತ್ತಿರುವ ಕಾರಣ ಮತ್ತು ಅಧಿಕ ಖರ್ಚು ಆಗುವುದರಿಂದ ಸದರಿ ವ್ಯವಸ್ಥೆಯನ್ನು ರದ್ದುಪಡಿಸಿ ಅನುಕೂಲ ಮಾಡಿಕೊಡಬೇಕೆಂದು ಸಚಿವರಿಗೆ ಮನವಿ ಸಲ್ಲಿಸಿದರು.

ಪ್ರಿಯಾಂಕ ಬಡಾವಣೆ ನಿವಾಸಿಗಳ ಹಿತರಕ್ಷಣಾ ವೇದಿಕೆಯ ಸದಸ್ಯರು ಪ್ರಿಯಾಂಕ ಬಡಾವಣೆಯಲ್ಲಿ ಉದ್ದ ಮತ್ತು ಅಡ್ಡ ರಸ್ತೆಗೆ ಹೊಸದಾಗಿ ಡಾಂಬರೀಕರಣ ಮಾಡಿಸಿಕೊಡಬೇಕೆಂದು ಮನವಿ ಮಾಡಿದರು.

Advertisements
1001567630

ಜಿಲ್ಲಾ ತೆಲುಗು ಅರುಂಧತಿ ಆದಿಕರ್ನಾಟಕ ಸಮಾಜದವರು ನಗರದ 27 ನೇ ವಾರ್ಡಿನಲ್ಲಿ ಅರ್ಧಕ್ಕೆ ನಿಲ್ಲಿಸಿರುವ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನವನ್ನು ಪೂರ್ಣಗೊಳಿಸಲು ರೂ.50 ಲಕ್ಷ ಅನುದಾನವನ್ನು ಮಂಜೂರು ಮಾಡಬೇಕೆಂದು ಕೋರಿದರು.ಬನಶಂಕರಿ ಬಡಾವಣೆಯ ಆಂಜನೇಯ ಸಮಿತಿಯವರು ದೇವಸ್ಥಾನ ನಿರ್ಮಿಸಲು ಅನುದಾನ ನೀಡುವಂತೆ ಕೋರಿದರು.

ಹಾಗೂ ಉದ್ಯೋಗ ಒದಗಿಸುವಂತೆ ಕೋರಿ ಇಬ್ಬರು ಮಹಿಳೆಯರು ಅರ್ಜಿ ನೀಡಿದರು. ಸಚಿವರು 10 ಕ್ಕೂ ಅಧಿಕ ಅಹವಾಲು ಅರ್ಜಿಗಳನ್ನು ಸ್ವೀಕರಿಸಿದರು.ಎಸ್‌ಎಸ್‌ಎಲ್‌ಸಿ-ಉತ್ತಮ ಫಲಿತಾಂಶಕ್ಕೆ ಸಹಕರಿಸಿದವರಿಗೆ ಅಭಿನಂದನೆಗಳನ್ನು ತಿಳಿಸಿದರು.

1001567617

ಇದೇ ವೇಳೆ ಪತ್ರಿಕಾಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು, ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಜಿಲ್ಲೆ ರಾಜ್ಯದಲ್ಲಿ 4ನೇ ಸ್ಥಾನ ಪಡೆದಿದ್ದು, ಜಿಲ್ಲೆಯ ಗೋಪಾಳದ ರಾಮಕೃಷ್ಣ ವಿದ್ಯಾಲಯದ ನಿತ್ಯ ಎಂ ಕುಲಕರ್ಣಿ, ಪ್ರಿಯದರ್ಶಿನಿ ಶಾಲೆಯ ನಮನ ಹಾಗೂ ಆದಿಚುಂಚನಗಿರಿ ವಿದ್ಯಾ ಸಂಸ್ಥೆಯ ಸಹಿಷ್ಣು ಎಂಬ ವಿದ್ಯಾರ್ಥಿಗಳು 625 ಕ್ಕೆ 625 ಅಂಕ ಪಡೆದು ಜಿಲ್ಲೆಯ ಕೀರ್ತಿ ಹೆಚ್ಚಿಸಿದ್ದಾರೆ ಎಂದರು.2024-25 ರ ಪರೀಕ್ಷೆ 1ರ ಫಲಿತಾಂಶವು ಕಳೆದ ಸಾಲಿಗಿಂತ ಶೇ.8.5 ರಷ್ಟು ಅಧಿಕವಾಗಿದೆ.

ಈ ವರ್ಷ ಶೇ.75 ರಷ್ಟು ವಿದ್ಯಾರ್ಥಿಗಳು ಪ್ರಥಮ ದರ್ಜೆ(ಶೇ.60) ಮತ್ತು ಅದಕ್ಕಿಂತ ಹೆಚ್ಚಿನ ಅಂಕಗಳನ್ನು ಗಳಿಸಿದ್ದಾರೆ. ಕಳೆದ ವರ್ಷ ಶೇ.54 ರಷ್ಟು ವಿದ್ಯಾರ್ಥಿಗಳು ಪ್ರಥಮ ದರ್ಜೆ ಪಡೆದಿದ್ದರು. ಈ ಬಾರಿ ಶೇ.75 ರಷ್ಟು ಆರ್‌ಟಿಇ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.ಉತ್ತಮ ಫಲಿತಾಂಶ ಬರಲು ಇಲಾಖೆಯಲ್ಲಿ ಸಾಕಷ್ಟು ಬದಲಾವಣೆಯನ್ನು ಈ ಬಾರಿ ತರಲಾಗಿತ್ತು ಎಂದು ತಿಳಿಸಿದರು.

1001567631

ರಾಜ್ಯಾದ್ಯಂತ ಎಲ್ಲ ಶಾಲೆಗಳಲ್ಲಿ ಸಂಜೆ ಹೊತ್ತು ವಿದ್ಯಾರ್ಥಿಗಳಿಗೆ ವಿಶೇಷ ತರಗತಿ ನಡೆಸಲಾಗಿತ್ತು. ಅಣಕು ಪರೀಕ್ಷೆಗಳ ಸಂಖ್ಯೆ ಹೆಚ್ಚಿಸಲಾಗಿತ್ತು. ಜಿಲ್ಲಾಡಳಿತ, ಜಿ.ಪಂ, ಇತರೆ ಇಲಾಖೆಗಳು ಹಾಗೂ ಶಿಕ್ಷಕರು, ಪೋಷಕರು, ವಿದ್ಯಾರ್ಥಿಗಳ ಪರಿಶ್ರಮದಿಂದ ಉತ್ತಮ ಫಲಿತಾಂಶ ಬಂದಿದ್ದು, ಇದಕ್ಕೆ ಸಹಕರಿಸಿದ ಎಲ್ಲರಿಗೂ ಧನ್ಯವಾದಗಳು ಎಂದು ತಿಳಿಸಿದರು.

ಗ್ರಾಮೀಣ, ಹಿಂದುಳಿದ, ರೈತರು ಮತ್ತು ಬಡ ಮಕ್ಕಳಿಗೆ ಅನುಕೂಲವಾಗಲೆಂದು ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ಪರೀಕ್ಷೆ ಕಟ್ಟಲು ಯಾವುದೇ ಶುಲ್ಕವನ್ನು ವಿಧಿಸಿಲ್ಲ. ಜೊತೆಗೆ ಆನ್‌ಲೈನ್ ನಲ್ಲೇ ತಕ್ಷಣ ಪರೀಕ್ಷೆ ತೆಗೆದುಕೊಳ್ಳುವ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು ಇದು ಅತ್ಯಂತ ಯಶಸ್ಸು ಕಂಡಿದೆ ಎಂದರು.

ಪಿಯುಸಿಯಲ್ಲಿ ಕಳೆದ ಬಾರಿ 36 ಸಾವಿರ ವಿದ್ಯಾರ್ಥಿಗಳು ಇಂಪ್ರೂವ್‌ಮೆಂಟ್‌ಗೆ ನೋಂದಣಿ ಮಾಡಿಸಿದ್ದರೆ ಈ ಬಾರಿ 79 ಸಾವಿರ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ. ಈವರೆಗೆ 64,600 ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಎರಡನೇ ಪರೀಕ್ಷೆಗೆ ದಾಖಲಾಗಿದ್ದು, ಮೂರು ಪರೀಕ್ಷೆಗಳ ಸೂತ್ರ ಯಶಸ್ಸು ಕಂಡಿದೆ.ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶದಂದೇ ಪರೀಕ್ಷೆ-2 ಬರೆಯಲು ನೋಂದಣಿ ಆರಂಭಿಸಿದ್ದು ಅಂದೇ ಪರೀಕ್ಷೆ 2 ಮತ್ತು ಪರೀಕ್ಷೆ 3 ರ ದಿನಾಂಕಗಳನ್ನು ಪ್ರಕಟಿಸಲಾಗಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ದಿನಾಂಕ: 26-05-2025 ರಿಂದ 02-06-2025 ಹಾಗೂ ಪರೀಕ್ಷೆ-3 ದಿ: 23-06-2025 ರಿಂದ 30-06-2025 ರವರೆಗೆ ನಡೆಯಲಿದೆ ಎಂದು ತಿಳಿಸಿದರು.

ಸರ್ಕಾರಿ ಶಾಲೆಗಳಿಗೆ ಸುಮಾರು 11 ಸಾವಿರ ಹಾಗೂ ಅನುದಾನಿಕ ಶಾಲೆಗಳಿಗೆ 6500 ಸೇರಿದಂತೆ ಸುಮಾರು 17 ಸಾವಿರ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಈ ವೇಳೆ ತಿಳಿಸಿದರು.

ಪತ್ರಿಕಾಗೋಷ್ಟಿಯಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಚಂದ್ರಭೂಪಾಲ್, ತಾಲ್ಲೂಕು ಅಧ್ಯಕ್ಷ ಹೆಚ್.ಎಂ ಮಧು, ಕಾಂಗ್ರೇಸ್ ಜಿಲ್ಲಾಧ್ಯಕ್ಷರಾದ ಆರ್.ಪ್ರಸನ್ನಕುಮಾರ್, ಮುಖಂಡರಾದ ಕಲಗೋಡು ರತ್ನಾಕರ, ಮಂಜುನಾಥ್ ಸೇರಿದಂತೆ ಇತರೆ ಮುಖಂಡರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X