ಶಿವಮೊಗ್ಗ | ಶೀಘ್ರದಲ್ಲೇ 2 ವಂದೇಭಾರತ್‌ ರೈಲು ಸಂಚಾರಕ್ಕೆ ಚಾಲನೆ: ಸಂಸದ ಬಿ ವೈ ರಾಘವೇಂದ್ರ

Date:

ಶಿವಮೊಗ್ಗಕ್ಕೆ 2 ವಂದೇ ಭಾರತ್‌ ರೈಲು, ಒಂದು ತಿರುಪತಿಗೆ, ಮತ್ತೊಂದು ಬೆಂಗಳೂರಿಗೆ ಸಂಚಾರ, ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗಕ್ಕೆ 2 ವಂದೇ ಭಾರತ್‌ ಎಕ್ಸ್‌ಪ್ರೆಸ್‌ ಸೇರಿ 7 ಹೊಸ ರೈಲುಗಳ ಸೇವೆ ಲಭ್ಯವಾಗಲಿವೆ. ಜತೆಗೆ ರಾಜ್ಯದ 4ನೇ ರೈಲ್ವೆ ಕೋಚಿಂಗ್‌ ಡಿಪೋ ಕೂಡ ಆರಂಭವಾಗಲಿದೆ. ಈ ಬಗ್ಗೆ ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಅವರು ಮಾಹಿತಿ ನೀಡಿದ್ದಾರೆ.

- Advertisement -

ನಗರ ಹೊರ ವಲಯದ ಕೋಟೆಗಂಗೂರಿನಲ್ಲಿ ರಾಜ್ಯದ 4ನೇ ರೈಲ್ವೆ ಕೋಚಿಂಗ್‌ ಡಿಪೋ ಆರಂಭದೊಂದಿಗೆ ಶಿವಮೊಗ್ಗದಲ್ಲಿ ಹೊಸ ರೈಲ್ವೆ ಕ್ರಾಂತಿಗೆ ನಾಂದಿ ಹಾಡಲಿದೆ ಎಂದು ಸಂಸದರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌:...

ಇವಿಎಂ ಮೇಲಿನ ವಿಶ್ವಾಸದ ಪ್ರಶ್ನೆ ಮತ್ತೆ ದೇಶದ ಚುನಾವಣಾ ಚರ್ಚಾ ಕೇಂದ್ರವಾಗಿದೆ. ಪಾರದರ್ಶಕತೆ ಮತ್ತು ಮತದಾರರ ನಂಬಿಕೆಯನ್ನು ಮುಂದಿಟ್ಟುಕೊಂಡು, ಬ್ಯಾಲೆಟ್‌ ಪೇಪರ್ ವ್ಯವಸ್ಥೆಗೆ ಮರಳಬೇಕೆಂಬ ಬೇಡಿಕೆಯನ್ನು ವಿಪಕ್ಷಗಳು ಮುಂದೆ ತಂದಿವೆ. ಬುಧವಾರ (ಸೆ.30), ದೆಹಲಿಯಲ್ಲಿ...

ಪೈಲಟ್ ಗಾಯಗೊಂಡ ನಂತರ ʼಫ್ಲೈದುಬೈʼ ವಿಮಾನ ನಡೆಸಿದವರು ಯಾರು?...

ಬುಧವಾರ ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ಹಾರಾಟದಲ್ಲಿದ್ದ FZ1073 ವಿಮಾನದಲ್ಲಿ ನಡೆದ ಪ್ರಕರಣವು ಕಾಕ್‌ಪಿಟ್‌ನೊಳಗಿನ ಸುರಕ್ಷತೆ ಕುರಿತು ಪ್ರಶ್ನೆಗಳನ್ನು ಹುಟ್ಟಿ ಹಾಕಿದೆ.ಈ ವಿಮಾನದ ಯೆಮೆನ್ ಮೂಲದ ಸಹ-ಪೈಲಟ್‌, ಹರಿತ ವಸ್ತುವಿನಿಂದ ಪೈಲಟ್ ಮೇಲೆ...

ಜಾಗತಿಕ ಬಿಕ್ಕಟ್ಟಿನ ನೆಪ, ಮರೆಯಾದ ದೇಶದ ಹಿತ: ಜೈಶಂಕರ್...

ಬೆಲೆ ಏರಿಕೆಯ ಬೇಗೆಯಲ್ಲಿ ಜನಸಾಮಾನ್ಯರು ನರಳುತ್ತಿದ್ದರೆ, ಗದ್ದೆಯಲ್ಲಿ ರೈತ ರಸಗೊಬ್ಬರಕ್ಕಾಗಿ ಕಣ್ಣೀರು ಸುರಿಸುತ್ತಿದ್ದಾನೆ. ಆದರೆ, ಇದಕ್ಕೆ ಸ್ಪಂದಿಸಬೇಕಾದ ಮೋದಿ ಸರ್ಕಾರ, ವಿದೇಶಾಂಗ ಸಚಿವ ಎಸ್. ಜೈಶಂಕರ್ ಮೂಲಕ ಜಾಗತಿಕ ವೇದಿಕೆಗಳಲ್ಲಿ ವಿದೇಶಿ ಯುದ್ಧಗಳತ್ತ...

ಬೆಂಗಳೂರು ಮತ್ತು ಮೈಸೂರು ರೈಲ್ವೆ ಮೇಲಿನ ಒತ್ತಡ ಕಡಿಮೆ ಮಾಡಲು ರೈಲ್ವೆ ಇಲಾಖೆ ನಿರ್ಧರಿಸಿದ್ದು, ಅದಕ್ಕಾಗಿ ಬಹಳಷ್ಟು ರೈಲುಗಳು ಬೆಂಗಳೂರು ಮತ್ತು ಮೈಸೂರು ಬದಲಾಗಿ ಶಿವಮೊಗ್ಗದಿಂದ ಸಂಚಾರ ಆರಂಭಿಸಲು ಯೋಜನೆ ರೂಪಿಸಲಾಗಿದೆ ಎಂದರು.

2026 ಜನವರಿಗೆ ರೈಲ್ವೆ ಕೋಚಿಂಗ್ ಡಿಪೋ ಆರಂಭ ರೈಲ್ವೆ ಕೋಚಿಂಗ್‌ ಡಿಪೋ 2026ನೇ ಜನವರಿ ಅಂತ್ಯದೊಳಗೆ ಆರಂಭವಾಗಲಿದೆ. ಅದರ ಜತೆಗೆ ಎರಡು ವಂದೇ ಭಾರತ್‌ ರೈಲುಗಳು ಶಿವಮೊಗ್ಗದಿಂದ ಸಂಚಾರ ಆರಂಭಿಸುತ್ತವೆ ಎಂದು ತಿಳಿಸಿದರು.

ಈಗಾಗಲೆ ಎರಡೂ ವಂದೇ ಭಾರತ್‌ ರೈಲುಗಳ ವೇಳಾಪಟ್ಟಿ ಹಾಗೂ ಗಾಡಿ ಸಂಖ್ಯೆಯನ್ನೂ ಇಲಾಖೆ ಪ್ರಕಟಿಸಿದೆ.

ಶಿವಮೊಗ್ಗ ತಿರುಪತಿ ವಂದೇ ಭಾರತ್‌ ರೈಲು ಮುಂಜಾನೆ 4.30ಕ್ಕೆ ಶಿವಮೊಗ್ಗದಿಂದ ಹೊರಟು ಮಧ್ಯಾಹ್ನ 12.30ಕ್ಕೆ ತಿರುಪತಿ ತಲುಪುತ್ತದೆ. ಮತ್ತೆ ಸಂಜೆ 4.30ಕ್ಕೆ ಹೊರಟು ರಾತ್ರಿ 12.30 ಗಂಟೆಗೆ ಶಿವಮೊಗ್ಗ ತಲುಪುತ್ತದೆ.

ಮತ್ತೊಂದು ವಂದೇ ಭಾರತ್‌ ರೈಲು ಶಿವಮೊಗ್ಗ- ಬೆಂಗಳೂರು ನಡುವೆ ಸಂಚರಿಸಲಿದೆ ಎಂಬ ಮಾಹಿತಿ ನೀಡಿದ್ದಾರೆ.

ಶಿವಮೊಗ್ಗದಿಂದ ಇತರೆ ರಾಜ್ಯಕ್ಕೆ ಹೊಸ ರೈಲುಗಳು,

ಶಿವಮೊಗ್ಗ ಎರ್ನಾಕುಲಂ(ಕೇರಳ), ಶಿವಮೊಗ್ಗ ಬಗಲ್‌ಪುರ್‌(ಬಿಹಾರ), ಶಿವಮೊಗ್ಗ ಜಮ್‌ಶೆಡ್‌ಪುರ್‌(ಜಾರ್ಖಂಡ್‌), ಶಿವಮೊಗ್ಗ ಚಂಡೀಗಢ, ಶಿವಮೊಗ್ಗ ಗೌಹಾಟಿ ರೈಲುಗಳ ಸಂಚಾರ ಜನವರಿ ಮತ್ತು ಫೆಬ್ರವರಿಯಲ್ಲಿ ಆರಂಭಿಸಲು ಇಲಾಖೆ ನಿರ್ಧರಿಸಿದೆ ಎಂದರು.

ಹೊಸ ರೈಲು ಮಾರ್ಗಗಳ ಸರ್ವೇ ಆರಂಭ ಮತ್ತೊಂದು ಕಡೆ ತಾಳಗುಪ್ಪದಿಂದ ಹುಬ್ಬಳ್ಳಿ ಸಂಪರ್ಕಕ್ಕೆ ಸಿದ್ದಾಪುರ, ಶಿರಸಿ, ಮುಂಡಗೋಡು ತಡಸ ನಡುವೆ 150 ಕಿ.ಮೀ. ಉದ್ದದ ರೈಲು ಮಾರ್ಗ ನಿರ್ಮಾಣಕ್ಕೆ ಸರ್ವೆ ಆಗಿದೆ.

ಈ ಮಾರ್ಗದಲ್ಲಿ195 ಹೆಕ್ಟೆರ್‌ ಖುಷ್ಕಿ ಭೂಮಿ, 317 ಹೆಕ್ಟೆರ್‌ ನೀರಾವರಿ, 190 ಹೆಕ್ಟೆರ್‌ ಅರಣ್ಯ ಭೂಮಿ ಬರುತ್ತದೆ. ಅರಣ್ಯ ಭೂಮಿಗೆ ಬದಲಿ ಭೂಮಿ ಕೊಡುವ ಕಾರ್ಯ ಆರಂಭವಾಗಿದೆ.

ತಾಳಗುಪ್ಪ- ಹೊನ್ನಾವರ ರೈಲು ಮಾರ್ಗದ ಸರ್ವೆ ಸಹ ಆಗಿದೆ. ಇಲ್ಲಿ ಶೇ.73ರಷ್ಟು ಅರಣ್ಯ ಬರುವುದರಿಂದ ಸರಕಾರ ಅಂತಿಮ ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ ಎಂದರು.

ಚಿಕ್ಕಮಗಳೂರು ಬೇಲೂರು ಹಾಸನ ನೂತನ ಮಾರ್ಗಕ್ಕೆ ಸರ್ವೆ ಆರಂಭವಾಗಿದೆ. ಬೀರೂರು ಶಿವಮೊಗ್ಗ ಡಬ್ಲಿಂಗ್‌ಗೆ 1900 ಕೋಟಿ ರೂ. ಅನುಮೋದನೆ ನೀಡಲಾಗಿದ್ದು ಈ ವರ್ಷಾಂತ್ಯದೊಳಗೆ ಕಾಮಗಾರಿ ಆರಂಭವಾಗಲಿದೆ ಎಂದರು.

ಭದ್ರಾವತಿ ಚಿಕ್ಕಜಾಜೂರು ನಡುವೆ 73 ಕಿ.ಮೀ. ರೈಲು ಮಾರ್ಗ ಸರ್ವೆಗೆ ಟೆಂಡರ್‌ ಆಗಿದೆ. ಇದು ವಿಐಎಸ್‌ಎಲ್‌ಗೆ ಅದಿರು ಸಾಗಿಸಲು ಅನುಕೂಲವಾಗುತ್ತದೆ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ನಾಳೆ ‘ಮನಸಿರಿ’ ಮಾನಸಿಕ ಆರೋಗ್ಯ ಜಾಗೃತಿ ಅಭಿಯಾನ

ಶಿರಸಿ: ಮಾನಸಿಕ ಆರೋಗ್ಯದ ಕುರಿತು ಜಾಗೃತಿ ಮೂಡಿಸುವ ಹಾಗೂ ಈ ಬಗ್ಗೆ...

ಹವ್ಯಾಸದಿಂದ ಉದ್ಯಮದತ್ತ: ಶಿರಸಿ ಮಹಿಳೆಯರ ʻಡೇರೆʼ ಕೃಷಿಗೆ ಸ್ವಾವಲಂಬನೆಯ ಮೆರಗು

ಮನೆಯಂಗಳದ ಅಂದ ಹೆಚ್ಚಿಸುವ ಹೂವಷ್ಟೇ ಆಗಿದ್ದ ಡೇರೆ ಹೂವು (ಡೇಲಿಯಾ), ಇದೀಗ...