ಶಿವಮೊಗ್ಗ | ಸಾಗರದಲ್ಲಿ ಗಣಪತಿ ವಿಸರ್ಜನೆ ವೇಳೆ, ಉಗಿದ ಬಾಲಕ : ಎಸ್ಪಿ ಮಿಥುನ್ ಕುಮಾರ್ ಹೇಳಿದ್ದೇನು?

Date:

ಶಿವಮೊಗ್ಗ ಜಿಲ್ಲೆ ಸಾಗರ ಪಟ್ಟಣದ ಜನ್ನತ್ ಗಲ್ಲಿಯ ಗಣಪತಿ ಮೂರ್ತಿಯ ರಾಜಬೀದಿ ಉತ್ಸವದ ಮೇಲೆ ಐದು ವರ್ಷದ ಬಾಲಕನೋರ್ವನಿಂದ ಉಗಿದಿರುವ ಘಟನೆ ನಡೆದಿದ್ದು, ಇಬ್ಬರೂ ಬಾಲಕರನ್ನ ಪೊಲೀಸರು ಸೆಕ್ಯೂರ್ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.

- Advertisement -

ಇಂದು ಸಾಗರ ಪಟ್ಟಣದ ಜನ್ನತ್ ಗಲ್ಲಿಯಲ್ಲಿ ಇಂದು ಜೈ ಭುವನೇಶ್ವರಿ ಗಣಪತಿಯ ರಾಜಬೀದಿ ಉತ್ಸವ ನಡೆದಿದ್ದು ಗಲ್ಲಿಯಲ್ಲೇ ಇಬ್ಬರು ಬಾಲಕರು ಮೆರವಣಿಗೆಯ ಮೇಲೆ ಉಗಿದಿರುವ ವಿಡಿಯೋವೊಂದು ವೈರಲ್ ಆಗಿ ಉದ್ವಿಘ್ನ ಸ್ಥಿತಿ ನಿರ್ಮಾಣವಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇಬ್ಬರು ಮಕ್ಕಳಿಂದ ಗಣೇಶನ ಮೆರವಣಿಗೆ ಮೇಲೆ ಉಗಳುವ ವಿಡಿಯೋ ವೈರಲ್ ಆಗಿದ್ದು ಇದನ್ನು ಗಮನಿಸಿದ ಮೆರವಣಿಗೆಯಲ್ಲಿ ಹೋಗುತ್ತಿದ್ದ ಹಿಂದೂ ಪರ ಸಂಘಟನೆಗಳು ಸ್ಥಳದಲ್ಲಿಯೇ ಪ್ರತಿಭಟನೆ ನಡೆಸಿದ್ದಾರೆ.

ಗಣೇಶ ಮೂರ್ತಿಗೆ ಅವಮಾನ ಮಾಡಿದವರ ವಿರುದ್ಧ ಪೊಲೀಸರು ಕ್ರಮದ ಭರವಸೆ ನೀಡಿದ ನಂತರ ಪ್ರತಿಭಟನೆಯನ್ನ ಪ್ರತಿಭಟನಾಕಾರರು ಕೈಬಿಟ್ಟಿದ್ದಾರೆ.

ಇದರಿಂದ ಗಣೇಶನ ಮೆರವಣಿಗೆ ಮುಂದುವರೆದಿದೆ. ಕೆಲ ಹೊತ್ತು ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತಾದರೂ ಸಹ ಪೋಲೀಸರ ಮದ್ಯಪ್ರವೇಶದಿಂದ ತಿಳಿಯಾಗಿದೆ. ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಸ್ಥಳದಲ್ಲೆ ಎಸ್ಪಿ ಮಿಥುನ್ ಕುಮಾರ್ ಮೊಕ್ಕಂ ಹೂಡಿದ್ದಾರೆ. ಇದರ ಬೆನ್ನಲ್ಲೇ ಮಾಹಿತಿ ನೀಡಿರುವ ಎಸ್ಪಿ ಮಿಥುನ್ ಕುಮಾರ್ ವಿಡಿಯೋದಲ್ಲಿ ಐದು ವರ್ಷದ ಮಕ್ಕಳಿಬ್ಬರಿದ್ದು, ಅದರಲ್ಲಿ ಓರ್ವ ಬಾಲಕ ಮೆರವಣಿಗೆಯ ಮೇಲೆ ಉಗಿದಿರುವುದು ಕಂಡು ಬಂದಿದೆ.

ಇಬ್ಬರೂ ಮಕ್ಕಳನ್ನ ಸೆಕ್ಯೂರ್ ಮಾಡಲಾಗಿದೆ. ಪೋಷಕರು ಈ ಘಟನೆ ಕುರಿತು ಕ್ಷಮೆಯಾಚಿಸಿರುವುದಾಗಿ ತಿಳಿಸಿದ್ದಾರೆ. ‌ಗಣಪತಿಯ ರಾಜಬೀದಿ ಉತ್ಸವಕ್ಕೆ ಯಾವುದೇ ಅಡ್ಡಿ ಉಂಟಾಗಿಲ್ಲ. ರಾಜಬೀದಿ ಉತ್ಸವ ಮುಂದೆ ಸಾಗುತ್ತಿದೆ. ಉಳಿದಂತೆ ಎಲ್ಲವೂ ಶಾಂತಿ ರೀತಿಯಲ್ಲಿದೆ ಎಂದು ತಿಳಿಸಿದರು.

ಮಕ್ಕಳು ಮತ್ತು ತಾಯಿ ಕರೆದು ಪೊಲೀಸರ ವಿಚಾರಣೆ ನಡೆಸಿದ್ದು ಮಕ್ಕಳು ಮಾಡಿದ ತಪ್ಪಿಗೆ ತಾಯಿ ಕ್ಷಮೆಯಾಚಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...