ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕು ಆನವಟ್ಟಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬರುವ ಜಡೆ ಗ್ರಾಮದಲ್ಲಿ ವ್ಯಕ್ತಿಯೊಬ್ಬನನ್ನು ಕತ್ತರಿಯಿಂದ ಇರಿದು ಹತ್ಯೆ ಮಾಡಲಾಗಿದೆ. ಈ ಸಂಬಂಧ ಆನವಟ್ಟಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಎಸ್ಪಿ ಮಿಥುನ್ ಕುಮಾರ್ ಆನವಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ ಎಂದು ತಿಳಿಸಿದ್ದಾರೆ.
ಘಟನೆಯಲ್ಲಿ ಎಂಎಸ್ಐಎಲ್ ಮಳಿಗೆ ಮದ್ಯಪಾನ ಮಾಡಿದ ಬಳಿಕ ಊಟಕ್ಕೆ ಹೋದ ಸಂದರ್ಭದಲ್ಲಿ ಉಮೇಶ್ 46 ವರ್ಷ ಹಾಗೂ ಈತನ ಅಳಿಯ ರವೀಂದ್ರ 26 ವರ್ಷ ನಡುವೆ ಜಗಳವಾಗಿದೆ. ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು, ಉಮೇಶ್ ರವೀಂದ್ರರವರಿಗೆ ಕತ್ತರಿಯಿಂದ ಇರಿದಿದ್ದ.
ತೀವ್ರವಾಗಿ ಗಾಯಗೊಂಡ ಆತನನ್ನು ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಆತ ಸಾವನ್ನಪ್ಪಿದ್ದಾನೆ ಎಂದು ತಿಳಿಸಿದ್ದಾರೆ .
