ಶಿವಮೊಗ್ಗ | ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಕೈಬಿಡಿ ; ಅಣಕು ಶವ ದಹಿಸುವ ಮೂಲಕ ವಿನೂತನ ಪ್ರತಿಭಟನೆ

Date:

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಉಪವಿಭಾಗಾಧಿಕಾರಿಗಳ ಕಚೇರಿ ಎದುರು ಶಿವಮೊಗ್ಗ ಜಿಲ್ಲಾ ರೈತ ಸಂಘದ ವತಿಯಿಂದ ಹಮ್ಮಿಕೊಂಡಿರುವ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಅಣುಕು ಶವವನ್ನು ನಗರಸಭೆ ರಂಗಮಂದಿರದ ಎಡಭಾಗದಲ್ಲಿ ಬುಧವಾರ ವಿಧಿವಿಧಾನಗಳ ಮೂಲಕ ದಹಿಸಿ ಯೋಜನೆ ಕೈಬಿಡುವಂತೆ ರಾಜ್ಯ ಸರ್ಕಾರವನ್ನು ವಿನೂತನವಾಗಿ ಒತ್ತಾಯಿಸಲಾಯಿತು.

- Advertisement -

ಕಳೆದ 12 ದಿನಗಳಿಂದ ಅನಿರ್ಧಿಷ್ಟಾವಧಿ ಪ್ರತಿಭಟನೆ ಶರಾವತಿ ಪಂಪ್ಡ್ ಸ್ಟೋರೇಜ್ ಶವವನ್ನು ಎದುರು ಇರಿಸಿಕೊಂಡು ರೈತ ಸಂಘದ ಜಿಲ್ಲಾಧ್ಯಕ್ಷ ದಿನೇಶ್ ಶಿರವಾಳ ನೇತೃತ್ವದಲ್ಲಿ ನಡೆಸಲಾಗುತ್ತಿತ್ತು. ಬುಧವಾರ ಪ್ರತಿಭಟನಾ ಸ್ಥಳಕ್ಕೆ ಆನಂದಪುರ ಮುರುಘಾಮಠದ ಡಾ. ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮಿಗಳು ಆಗಮಿಸಿ ಸಹಿ ಮಾಡುವ ಮೂಲಕ ತಮ್ಮ ಬೆಂಬಲ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...
1002402410

ನಂತರ ಅಣುಕು ಶವಕ್ಕೆ ಮಾಜಿ ಸಚಿವ ಹರತಾಳು ಹಾಲಪ್ಪ, ಜಿಲ್ಲಾಧ್ಯಕ್ಷ ದಿನೇಶ್ ಶಿರವಾಳ ಹಾಗೂ ರೈತ ಸಂಘದ ಪ್ರಮುಖರು ಹೆಗಲು ಕೊಟ್ಟರು. ನಗರದ ಪ್ರಮುಖ ಬೀದಿಗಳಲ್ಲಿ ಅಣಕು ಶವಯಾತ್ರೆ ನಡೆದು, ಅಂತಿಮವಾಗಿ ನಗರಸಭೆ ಆವರಣದಲ್ಲಿ ದಹನ ಮಾಡಲಾಯಿತು.

ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿ ಮಾತನಾಡಿದ ಡಾ. ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮಿಗಳು ಪಂಪ್ಡ್ ಸ್ಟೋರೇಜ್ ದುಬಾರಿ ಮತ್ತು ಲಾಭದಾಯಕವಲ್ಲದ ಯೋಜನೆಯಾಗಿದೆ.

ಎರಡೂವರೆ ಸಾವಿರ ಮೆಗಾವ್ಯಾಟ್. ವಿನಿಯೋಗಿಸಿ, ಎರಡು ಸಾವಿರ ಮೆ.ವ್ಯಾ. ವಿದ್ಯುತ್ ಉತ್ಪಾದನೆ ಮಾಡುವ ಅತ್ಯಂತ ಅವೈಜ್ಞಾನಿಕ ಯೋಜನೆಯಾಗಿದೆ. ಇದರಿಂದ ದೊಡ್ಡ ಪ್ರಮಾಣದಲ್ಲಿ ಪರಿಸರ ನಾಶವಾಗುವ ಜೊತೆಗೆ ಕಾಡುಪ್ರಾಣಿ, ಜೀವವೈವಿಧ್ಯ, ಅರಣ್ಯ, ಪರಿಸರ ನಾಶವಾಗುತ್ತದೆ. ಹಿಂದೆ ಯೋಜನೆ ಕೈಗೆತ್ತಿಕೊಂಡಿದ್ದಾಗ ನಾವೆಲ್ಲಾ ಮಠಾಧೀಶರು ವಿರೋಧ ಮಾಡಿದ್ದೇವೆ.

ಇದೀಗ ಮತ್ತೆ ಯೋಜನೆ ಪ್ರಸ್ತಾಪವಾಗುತ್ತಿರುವುದು ದುರದೃಷ್ಟಕರ. ರಾಜ್ಯ ಸರ್ಕಾರ ಇಂತಹ ಪರಿಸರ ವಿರೋಧಿ ಯೋಜನೆ ತಕ್ಷಣ ಕೈಬಿಡಬೇಕು. ಯೋಜನೆ ವಿರುದ್ದದ ಹೋರಾಟಕ್ಕೆ ತಮ್ಮ ಎಲ್ಲಾ ರೀತಿ ಬೆಂಬಲ ಇದೆ ಎಂದರು.

ಮಾಜಿ ಸಚಿವ ಹರತಾಳು ಹಾಲಪ್ಪ ಮಾತನಾಡಿ ನಾನು ಶಾಸಕನಾಗಿದ್ದಾಗ ಯೋಜನೆ ಪ್ರಸ್ತಾಪವಾಗಿತ್ತು. ಆಗ ಸ್ಥಳಕ್ಕೆ ಭೇಟಿ ನೀಡಿ ಅರಣ್ಯ, ವನ್ಯಸಂಪತ್ತು ನಾಶವಾಗುವ ಹಿನ್ನೆಲೆಯಲ್ಲಿ ಅಂದಿನ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಹೇಳಿ ಯೋಜನೆ ಕೈಬಿಡುವಂತೆ ಮಾಡಿದ್ದೇನೆ.

ಈಗಿನ ಜನಪ್ರತಿನಿಧಿಗಳು ವಿಧಾನಸೌಧದಲ್ಲಿ ಯೋಜನೆ ಪರ ಮಾತನಾಡಿದ್ದಾರೆ. ಯೋಜನೆ ಅನುಷ್ಟಾನಕ್ಕೆ ಮುಂದಾದರೆ ಸುಮಾರು ನಾಲ್ಕು ಸಾವಿರ ಎಕರೆ ಅರಣ್ಯ ನಾಶವಾಗುತ್ತದೆ. ಕೆಪಿಟಿಸಿಎಲ್ ಅಧಿಕಾರಿಗಳು ವಾಸ್ತವಾಂಶ ಮುಚ್ಚಿಟ್ಟು ಯೋಜನೆ ಅನುಷ್ಟಾನಕ್ಕೆ ಮುಂದಾಗಿದ್ದಾರೆ. ಗುಡ್ಡವನ್ನು ಕೊರೆದು ಸುರಂಗ ಮಾರ್ಗ ನಿರ್ಮಿಸುವ ಉದ್ದೇಶ ಯೋಜನೆ ಹೊಂದಿದ್ದು ಇದರಿಂದ ಭವಿಷ್ಯದಲ್ಲಿ ಅಲ್ಲಿನ ಪರಿಸರದ ಮೇಲೆ ಮಾರಕ ಪರಿಣಾಮ ಬೀರುತ್ತದೆ. ಯಾವುದೇ ಕಾರಣಕ್ಕೂ ಯೋಜನೆ ಅನುಷ್ಟಾನಕ್ಕೆ ಬರಬಾರದು. ಸಂದರ್ಭ ಬಂದರೆ ಹಸಿರುಪೀಠದ ಎದುರು ಕಾನೂನು ಹೋರಾಟ ನಡೆಸೋಣ ಎಂದು ತಿಳಿಸಿದರು.

ಬಂಗಾರಮಕ್ಕಿಯ ಶ್ರೀ ಮಾರುತಿ ಗುರೂಜಿ ಮಾತನಾಡಿ. ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಕೈಬಿಡದೆ ಹೋದರೆ ನೇಪಾಳ ಮಾದರಿ ಹೋರಾಟ ಅನಿವಾರ್ಯವಾಗುತ್ತದೆ. ಹನ್ನೆರಡು ದಿನಗಳ ನಂತರ ಹೋರಾಟ ನಿಲ್ಲಿಸಿದ್ದೇವೆ ಎಂದು ಸರ್ಕಾರ ನಿಟ್ಟುಸಿರು ಬಿಡುವುದು ಬೇಡ. ತಕ್ಷಣ ಯೋಜನೆ ಕೈಬಿಟ್ಟಿದ್ದೇವೆ ಎಂದು ಗೆಜೆಟ್‌ನಲ್ಲಿ ಘೋಷಣೆ ಮಾಡಬೇಕು. ಇಲ್ಲವಾದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಎದುರು, ವಿಧಾನಸೌಧದೆದುರು ಅಥವಾ ದೆಹಲಿಯ ಜಂತರ್ ಮಂಥರ್‌ನಲ್ಲಿ ಸಹ ಪ್ರತಿಭಟನೆ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದರು.

ರೈತ ಸಂಘದ ಜಿಲ್ಲಾಧ್ಯಕ್ಷ ದಿನೇಶ ಶಿರವಾಳ, ಪ್ರಮುಖರಾದ ಬಿ. ಸ್ವಾಮಿರಾವ್, ಅಖಿಲೇಶ್ ಚಿಪ್ಪಳಿ, ಚೂನಪ್ಪ ಪೂಜಾರಿ, ಶಿವಾನಂದ ಬೆಳಗಾವಿ, ತೇಜಸ್ವಿ ಪಟೇಲ್, ಶಶಿಕಾಂತ್ ಗುರೂಜಿ, ಶಿವಾನಂದ ಕುಗ್ವೆ, ರಮೇಶ್ ಕೆಳದಿ, ಡಾ. ರಾಮಚಂದ್ರಪ್ಪ, ಟಿ.ಡಿ.ಮೇಘರಾಜ್, ರತ್ನಾಕರ ಹೊನಗೋಡು, ಗಣೇಶ್ ಪ್ರಸಾದ್, ಮಲ್ಲಿಕಾರ್ಜುನ ಹಕ್ರೆ, ಕೊಟ್ರಪ್ಪ ನೇದರವಳ್ಳಿ ಇನ್ನಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...