ಶಿವಮೊಗ್ಗ ನಗರದ ಹೊರವಲಯದ ಶ್ರೀರಾಂಪುರದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಟಿಪ್ಪರ್ ಲಾರಿಯೊಂದು ಬೈಕ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಈ ಘಟನೆಯಲ್ಲಿ ಬೈಕ್‌ನಲ್ಲಿದ್ದ ತಂದೆ ಮತ್ತು ಮಗಳು ಗಾಯಗೊಂಡಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆ.
ತಂದೆ ತನ್ನ ಮಗಳನ್ನು ಶಾಲೆಗೆ ಬಿಡಲು ಕರೆದೊಯ್ಯುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಬೈಕ್‌ನಲ್ಲಿ ತಂದೆ ಮಗಳು ಆಯನೂರು ನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದರು, ಆ ವೇಳೆ ಹಿಂದಿನಿಂದ ಬಂದ ಟಿಪ್ಪರ್ ಲಾರಿ ಬೈಕ್‌ಗೆ ಡಿಕ್ಕಿ ಹೊಡೆದಿದೆ.
ಇದರ ಪರಿಣಾಮ ಬೈಕ್‌ನಲ್ಲಿದ್ದ ತಂದೆ ಮಗಳು ನೆಲಕ್ಕೆ ಉರುಳಿದ್ದು, ಅವರಿಗೆ ಗಾಯಗಳಾಗಿದೆ.
ಲಾರಿ ಚಾಲಕನ ಅಜಾಗರೂಕತೆಯ ಚಾಲನೆಯೇ ಈ ಘಟನೆಗೆ ಕಾರಣವಾಗಿದೆ ಎಂದು ಸ್ಥಳಿಯರು ಆರೋಪಿಸಿದ್ದಾರೆ.