ಶಿವಮೊಗ್ಗ ಜಿಲ್ಲೆಯ ಹೊಸನಗರದ ಮೇಲಿನ ಸಂಪಳ್ಳಿ ಸಮೀಪದ ವಿಜಾಪುರ ಗ್ರಾಮದಲ್ಲಿ, ಹಸುವಿನ ಕೆಚ್ಚಲು ಕೊಯ್ದ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ನವೀನ್ ಶೆಟ್ಟಿ ಎಂಬುವರಿಗೆ ಸೇರಿದ ಹಸುಗಳನ್ನು ಜೂನ್ 28 ರಂದು ಎಂದಿನಂತೆ ಮೇಯಲು ಬಿಡಲಾಗಿತ್ತು. ಮೇಯಲು ಬಿಟ್ಟಿದ್ದ ವೇಳೆ, ಹಸುವೊಂದರ ಕೆಚ್ಚಲು ಕತ್ತರಿಸಿದ್ದು ಕಂಡುಬಂದಿತ್ತು. ಈ ಕುರಿತಂತೆ ಜೂ. 29 ರಂದು ಹೊಸನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ವಿಜಾಪುರ ಗ್ರಾಮದ ನಿವಾಸಿ ರಾಮಚಂದ್ರ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಆರೋಪಿ ವಿರುದ್ದ ಪ್ರಾಣಿಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ – 1960 (prevention of cruelty to animals act) ರ ಅಡಿ ಪ್ರಕರಣ ದಾಖಲಸಿಕೊಂಡು, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಆರೋಪಿ ರಾಮಚಂದ್ರ ಕತ್ತಿ ದೊಣ್ಣೆಯಿಂದ ಹೊಡೆದು, ಹಸುವಿನ ಕೆಚ್ಚಲು ಗಾಯಪಡಿಸಿದ್ದು ಪತ್ತೆಯಾಗಿತ್ತು. ಆರೋಪಿಯ ತೋಟಕ್ಕೆ ದನಗಳು ನುಗ್ಗುತ್ತಿದ್ದು, ಇದರಿಂದ ಆಕ್ರೋಶಗೊಂಡು ಈ ಕೃತ್ಯ ನಡೆಸಿದ್ದಾನೆ ಎಂದು ಪೊಲೀಸ್ ಇಲಾಖೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.