ಶಿವಮೊಗ್ಗ | ʼದಸಂಸʼ ಹೆಸರು ದುರುಪಯೋಗದ ವಿರುದ್ಧ ಕ್ರಮ: ಗುರುಮೂರ್ತಿ

Date:

ದಲಿತ ಸಂಘರ್ಷ ಸಮಿತಿ (ದಸಂಸ)ಯ ಹೆಸರು ಬಳಸಿಕೊಳ್ಳಲು ನಾವು ಮಾತ್ರ ಅರ್ಹರು. ಆ ಹೆಸರನ್ನು ಇತರೆ ದಲಿತ ಹೋರಾಟ ಸಂಘಟನೆಗಳು ಬಳಸಿಕೊಳ್ಳಬಾರದೆಂದು ದಸಂಸ ರಾಜ್ಯ ಸಂಚಾಲಕ ಗುರುಮೂರ್ತಿ ತಾಕೀತು ಮಾಡಿದ್ದಾರೆ.

- Advertisement -

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ನಮಗೆ ಮಾತ್ರ ದಸಂಸ ಬಳಸಿಕೊಳ್ಳಲು ಎಂದು ನ್ಯಾಯಾಲಯ ಆದೇಶಿದೆ. ದಲಿತ ಸಂಘರ್ಷ ಸಮಿತಿ ಹೆಸರನ್ನು ಹಲವು ಮಂದಿ ತಮ್ಮದು ಎಂಬಂದೆ ಬಿಂಬಿಸಿಕೊಳ್ಳುತ್ತಿದ್ದಾರೆ. ಸಂಘಟನೆಯ ಹೆಸರು ಬಳಸಬಾರದು. ಬಳಸಿದಲ್ಲಿ ರಾಜ್ಯಾದ್ಯಂತ ಪ್ರಕರಣ ದಾಖಲಿಸಲಾಗುವುದು. ಹೈಕೋರ್ಟ್ ನಲ್ಲಿ ಕೆವಿಟ್ ಹಾಕಲಾಗುವುದು” ಎಂದು ಎಚ್ಚರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಈ ಕುರಿತು ನ್ಯಾಯಾಲಯದಲ್ಲಿ ಹೋರಾಟ ನಡೆಸಿದ ವಕೀಲ ಸೀತಾರಾಮ್ ಮಾತನಾಡಿ, “ದಲಿತ ಸಂಘರ್ಷ ಸಮಿತಿ ಹೆಸರನ್ನ ಪ್ರೊ.ಕೃಷ್ಣಪ್ಪ 74/75 ಎಂದು ನೋಂದಣಿ ಮಾಡಿಸಿದ್ದರು. ಗುರುಮೂರ್ತಿ 2008 ರವರೆಗೆ ಆಡಿಟ್ ಮಾಡಿಸುತ್ತಿದ್ದರು. ಸತ್ಯ ಮತ್ತು ಇತರರು ಡಿಆರ್‌ಗೆ ಪತ್ರ ಬರೆದು ತಕರಾರು ಮಾಡಿದ್ದರು. ತಕರಾರಿಗೆ ಸಮಿತಿ ರಚಿಸಲಾಗಿತ್ತು. ಸಮಿತಿಯು ಸಾಧ್ಯವಿಲ್ಲದ ಪ್ರಕರಣ ಎಂದು ಬರೆದು, ನ್ಯಾಯಾಲಯದಲ್ಲಿ ಫೈಟ್ ಮಾಡಲು ಸೂಚಿಸಿತ್ತು. ಗುರುಮೂರ್ತಿ ಅವರು ಭದ್ರಾವತಿಯ ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು. ಭದ್ರಾವತಿಯ ನ್ಯಾಯಾಲಯ ಗುರುಮೂರ್ತಿ ಪರ ನ್ಯಾಯ ಪ್ರಕಟಿಸಿದ್ದರು. ಸತ್ಯರವರು ಕೆಳ ನ್ಯಾಯಾಲಯದ ಆದೇಶವನ್ನ ಪ್ರಶ್ನಿಸಿ ಹೈಕೋರ್ಟ್ ಗೆ ಹೋಗಿದ್ದರು. ಹೈಕೋರ್ಟ್ ಕಂಡಿಷನ್ ಮೇಲೆ ಸ್ಟೇ ನೀಡುತ್ತದೆ. ಕಂಡಿಷನ್ ಪ್ರಕಾರ ಗುರುಮೂರ್ತಿಗೆ ಸಂಘಟನೆ ಹೆಸರು ಬಳಸಿಕೊಳ್ಳಲು ಮಾತ್ರ ಅಧಿಕಾರವಿದ್ದು, ಇತರರು ಬಳಸಿಕೊಳ್ಳದಂತೆ ಸೂಚಿಸಿತ್ತು” ಎಂದರು.

“ನಂತರ ಹೈಕೋರ್ಟ್ ವಿಚಾರಣೆ ನಡೆಸಿ ಕೆಳ ನ್ಯಾಯಾಲಯದ ಆದೇಶವನ್ನ ಎತ್ತಿಹಿಡಿದಿದೆ. ಇದರ‌ ಮಧ್ಯೆ ಸತ್ಯರವರು ಭದ್ರಾವತಿಯಲ್ಲಿ ದಲಿತ ಸಂಘರ್ಷ ಸಮಿತಿ ಹೆಸರಿನಲ್ಲಿ ಕಾರ್ಯಕ್ರಮ ನಡೆಸಿದ್ದರು. ಡಿವೈಎಸ್‌ಪಿ ಆಕ್ಷೇಪಣಾರ್ಹ ಹಿಂಬರಹ ಕೊಟ್ಟು ಈ ಕಾರ್ಯಕ್ರಮಕ್ಕೆ ಅನುವು ಮಾಡಿಕೊಟ್ಟಿದ್ದರು. ಇದರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು” ಎಂದರು.

ಇದನ್ನೂ ಓದಿ: ಶಿವಮೊಗ್ಗ | ಮೀಟರ್ ಬಳಸದ ಆಟೋಗಳು; ಕಣ್ಮುಚ್ಚಿ ಕುಳಿತ ಪೊಲೀಸರು

ದಲಿತ ಸಂಘರ್ಷ ಸಮಿತಿಯ ಭದ್ರಾವತಿ ವಕೀಲ ಶಿವಕುಮಾರ್, ದಸಂಸ ಜಿಲ್ಲಾ ಸಂಚಾಲಕ ಏಳುಕೋಟಿ, ಬೊಮ್ಮನ್ ಕಟ್ಟೆ ಕೃಷ್ಣಪ್ಪ, ಮೂಗೂರು ಪರಶುರಾಮ್, ಚಿಕ್ಕಮರಡಿ ರಮೇಶ್, ನಾಗರಾಜ್, ದೌರ್ಜನ್ಯ ಸಮಿತಿ ಸದಸ್ಯ ಹನುಮಂತಪ್ಪ ಯಡವಾಲ, ಹರಗೆ ರವಿ, ಹನುಮಂತಪ್ಪ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...