ಶಿವಮೊಗ್ಗ, ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗೋಪಾಳ ಆನೆ ಸರ್ಕಲ್ ಫುಟ್‌ಪಾಲ್ ಬಳಿ ಸುಮಾರು 45-50 ವರ್ಷದ ವ್ಯಕ್ತಿ ಅನಾರೋಗ್ಯದಿಂದ ಬಿದ್ದಿದ್ದು, ಸಾರ್ವಜನಿಕರ ಸಹಾಯದಿಂದ ಆಂಬ್ಯುಲೆನ್ಸ್ ಮೂಲಕ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದು, ವೈದ್ಯರು ಪರೀಕ್ಷಿಸಿ ವ್ಯಕ್ತಿ ಮೃತಪಟ್ಟಿರುವುದಾಗಿ ತಿಳಿಸಿರುತ್ತಾರೆ.
ಮೃತನ ಹೆಸರು, ವಿಳಾಸ, ವಾರಸುದಾರರ ಬಗ್ಗೆ ಯಾವುದೇ ಸುಳಿವು ಇರುವುದಿಲ್ಲ. ಮೃತ ವ್ಯಕ್ತಿಯ ಚಹರೆ 5.6 ಅಡಿ ಎತ್ತರ, ತೆಳುವಾದ ಮೈಕಟ್ಟು, ಗೋಧ ಮೈಬಣ್ಣ, ಬಲಗೈ ಮೆಲೆ ಮಂಜಮ್ಮ , ಕವಿತಾ ಎಂಬ ಕನ್ನಡ ಅಕ್ಷರದ ಹಚ್ಚೆ ಇರುತ್ತದೆ. ಮೈಮೇಲೆ ಬಿಳಿ ಬಣ್ಣದ ನೀಲಿ ಗೆರೆಯಿರುವ ತುಂಬುತೋಳಿನ ಶರ್ಟ್, ಬ್ರೌನ್ ಕಲರ್ ಪ್ಯಾಂಟ್ ಧರಿಸಿರುತ್ತಾನೆ.
ಈ ವ್ಯಕ್ತಿಯ ವಾರಸುದಾರರ ಬಗ್ಗೆ ಸುಳಿವು ಸಿಕ್ಕಲ್ಲಿ ತುಂಗಾನಗರ ಪೊಲೀಸ್ ಠಾಣೆ 08182-261424 /261404/261400/08192-237860/22212108 ನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ಪ್ರಕಟಣೆ ತಿಳಿಸಿದೆ.

ರಾಘವೇಂದ್ರ ರವರು ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಉಂಡಿಗನಾಳು ಗ್ರಾಮದವರು. ಕುವೆಂಪು ವಿಶ್ವವಿದ್ಯಾಲಯದಲ್ಲಿ ಬಿಎಸ್ಸಿ ಪದವಿ ಪಡೆದಿರುವ ಇವರು ಈದಿನ ಡಾಟ್ ಕಾಮ್ ಮಾಧ್ಯಮ ಸಂಸ್ಥೆಯಲ್ಲಿ ಕಳೆದ 2023 ರಿಂದ ಶಿವಮೊಗ್ಗ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ವರದಿಗಾರಿಕೆ, ರಾಜಕೀಯ ವಿಶ್ಲೇಷಣೆ,Anchoring, (ನಿರೂಪಣೆ) ವಿಶೇಷ ಸ್ಟೋರಿ ಹಾಗೂ ತನಿಖಾ ವರದಿಗಾರಿಕೆ ಮಾಡುವುದು ಇವರ ಅಚ್ಚು ಮೆಚ್ಚಿನ ಕ್ಷೇತ್ರ.