ಶಿವಮೊಗ್ಗ ಜಿಲ್ಲೆಯ ಜಿಲ್ಲಾ ಮತ್ತು ತಾಲೂಕು ಮಟ್ಟದ ಹಾಗೂ ಸ್ಥಳೀಯ ಮಟ್ಟದಲ್ಲಿ ಅಧಿಕಾರಿಗಳು ಮತ್ತು ನೌಕರರು ಕಡ್ಡಾಯವಾಗಿ ಐಡಿ ಕಾರ್ಡ್ ಧರಿಸುವಂತೆ ಕ್ರಮಕೈಗೊಳ್ಳಲಿ ಕೋರಿ ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆ ಶಿವಮೊಗ್ಗ ಜಿಲ್ಲಾ ಘಟಕ ವತಿಯಿಂದ ಇಂದು ಜಿಲ್ಲಾಧಿಕಾರಿ ಮನವಿ ಸಲ್ಲಿಸಲಾಗಿದೆ.
“ಸಂಘಟನೆಯ ಕಾರ್ಯಕರ್ತರು ಕೆಲಸ ಕಾರ್ಯಗಳ ನಿಮಿತ್ತ ವಿವಿಧ ಇಲಾಖೆಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಅಧಿಕಾರಿಗಳು ಮತ್ತು ನೌಕರರು ಸರ್ಕಾರದ ಆದೇಶದಂತೆ ಐಡಿ ಕಾರ್ಡ್ ಗಳನ್ನು ಧರಿಸದೇ ಇರುವುದು ಕಂಡು ಬಂದಿದೆ. ಹಾಗೂ ನಿಗದಿತ ಸಮಯಕ್ಕೆ ಕಚೇರಿಗೆ ಬರುತ್ತಿಲ್ಲ. ಅಧಿಕಾರಿಗಳು ಮತ್ತು ನೌಕರರನ್ನು ಗುರುತಿಸುವುದು ಕಷ್ಟವಾಗುತ್ತದೆ ಮತ್ತು ನಿಗದಿತ ಸಮಯಕ್ಕೆ ಕಚೇರಿಗೆ ಬರದೆ ಇರುವುದು ಸಾರ್ವಜನಿಕರಿಗೆ ತೊಂದರೆ ಆಗುತ್ತಿದೆ” ಎಂದು ಸಂಘಟನೆಯ ಮುಖಂಡರು ಆರೋಪಿಸಿದ್ದಾರೆ.

ಜಿಲ್ಲೆಯ ಎಲ್ಲಾ ಇಲಾಖೆಯ ಅಧಿಕಾರಿಗಳು ಮತ್ತು ನೌಕರರು ಸರ್ಕಾರದ ಆದೇಶದಂತೆ ಅಧಿಕಾರಿಗಳು ಮತ್ತು ನೌಕರರು ಕಡ್ಡಾಯವಾಗಿ ಐಡಿಯನ್ನು ಧರಿಸುವಂತೆ ಮತ್ತು ನಿಗದಿತ ಸಮಯಕ್ಕೆ ಕಚೇರಿಗೆ ಬಂದು ಸಾರ್ವಜನಿಕರ ಕೆಲಸ ಕಾರ್ಯಗಳಿಗೆ ಅನುಕೂಲವಾಗುವಂತೆ ಕರ್ತವ್ಯ ನಿರ್ವಹಿಸುವಂತೆ ಜಿಲ್ಲೆಯ ಎಲ್ಲಾ ಅಧಿಕಾರಿಗಳಿಗೆ ಮತ್ತು ನೌಕರರಿಗೆ ಸೂಚನೆ ನೀಡುವಂತೆ ಸಾಮಾಜಿಕ ಕಾರ್ಯಕರ್ತರ ವೇದಿಕೆ ಜಿಲ್ಲಾಧ್ಯಕ್ಷೆ ಮೀನಾ ಮನವಿ ಸಲ್ಲಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ವಿವಿಧ ಕಾಮಗಾರಿಗೆ ಸಚಿವ ಮಧು ಬಂಗಾರಪ್ಪ ಚಾಲನೆ
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಮೀನಾ ಎಂಎಸ್, ಜಿಲ್ಲಾ ಗೌರವಾಧ್ಯಕ್ಷ ಈರಪ್ಪ, ಜಿಲ್ಲಾ ಉಪಾಧ್ಯಕ್ಷರು ಲಕ್ಷ್ಮಿಕಳಸಣ್ಣನವರ್ ,ಜಿಲ್ಲಾ ಕಾರ್ಯದರ್ಶಿಯಾದ ಭಾಗ್ಯ ಪಿ ಗೌಡ, ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾದಂತಹ ವೆಂಕಟೇಶ ಸಿ, ಹಾಗು ಸೊರಬ ತಾಲೂಕು ಅಧ್ಯಕ್ಷರಾದ ರಾಜೇಶ್ ಸಿ ಕಾನಡೇ ಉಪಸ್ಥಿತರಿದ್ದರು