ಶಿವಮೊಗ್ಗ | 17 ನೆ ವಾರ್ಡ್ ನಲ್ಲಿ, ಮೂಲಭೂತ ಸೌಕರ್ಯಕ್ಕಾಗಿ : ಪೌರಾಯುಕ್ತರಿಗೆ ಮನವಿ

Date:

Advertisements

ಶಿವಮೊಗ್ಗ, ಗೋಪಾಲಗೌಡ ಬಡಾವಣೆ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘ ಹಾಗೂ ವಿವಿಧ ಸಂಘಟನೆಗಳ ಪ್ರಮುಖರು ಇಂದು ಮಹಾನಗರ ಪಾಲಿಕೆಯ ಪೌರಾಯುಕ್ತ ಕೆ, ಮಾಯಣ್ಣ ಗೌಡ ಅವರನ್ನು ಭೇಟಿ ಮಾಡಿ ಬಡಾವಣೆಯಲ್ಲಿ ಕೈಗೊಳ್ಳಬೇಕಾದ ಕಾಮಗಾರಿಗಳ ಬಗ್ಗೆ ಹಾಗೂ ಇನ್ನಿತರ ಸಮಸ್ಯೆಗಳ ಬಗ್ಗೆ ತುರ್ತಾಗಿ ಗಮನಹರಿಸುವಂತೆ ಮನವಿ ಸಲ್ಲಿಸಿದರು.

ಎಸ್ ಬಂಗಾರಪ್ಪ ಇಂಡೋರ್ ಶಟಲ್ ಕೋರ್ಟ್ ನ ಕಾಮಗಾರಿ ತುರ್ತಾಗಿ ಕೈಗೊಳ್ಳಲು ಕ್ರಮ ಕೈಗೊಳ್ಳುವುದು,ಬಡಾವಣೆಗೆ ಹೋಗುವ ಪ್ರಮುಖ ರಸ್ತೆ ಆಯನೂರು ಗೇಟ್ ನಿಂದ ಶಾರದಾದೇವಿ ಅಂಧ ವಿಕಾಸ ಶಾಲೆಯವರೆಗೆ ರಸ್ತೆ ಗುಂಡಿ ಬಿದ್ದಿದ್ದು ತಕ್ಷಣ ವೆಟ್ ಮಿಕ್ಸಿ ಇಂದ ಗುಂಡಿ ಮುಚ್ಚುವಂತೆ ಕೋರಿದರು.

ಹೈ ವೋಲ್ಟೇಜ್ ವಿದ್ಯುತ್ ಲೈನ್ ನ ಕೆಳಗೆ ಗಿಡಗಂಟೆಗಳು ಬೆಳೆದಿದ್ದು ಇದನ್ನು ತಕ್ಷಣ ತೆರವುಗೊಳಿಸಬೇಕೆಂದು ಮತ್ತು ಚಂದನ ಆರೋಗ್ಯ ಪಾರ್ಕ್ ನ ತಡೆಗೋಡೆ ಕಾಮಗಾರಿ ತ್ವರಿತವಾಗಿ ಮುಗಿಸುವುದು, ಬೀದಿ ನಾಯಿಗಳ ಸಂಖ್ಯೆ ವಿಪರೀತ ಹೆಚ್ಚಳವಾಗಿದ್ದು ತಕ್ಷಣ ಸಂತಾನ ಹರಣ ಚಿಕಿತ್ಸೆ ಕೈಗೊಳ್ಳುವುದು ಹಾಗೂ ಹಂದಿಗಳ ಹೆಚ್ಚಳಕ್ಕೆ ಕಡಿವಾಣ ಹಾಕಬೇಕು ಎಂದು ಸ್ಥಳೀಯರು ತಿಳಿಸಿದ್ದಾರೆ.

Advertisements

ಗೋಪಾಲಗೌಡ ಬಡಾವಣೆ ವಾರ್ಡ್ ಹದಿನೇಳರ ವಿಸ್ತರಣೆ ದೊಡ್ಡದಿದ್ದು ಇದಕ್ಕೆ ಹೊಂದಿಕೊಂಡಂತೆ ಸ್ವಾಮಿ ವಿವೇಕಾನಂದ ಬಡಾವಣೆಯ ಕಸ ವಿಲೇವಾರಿಯ ಜವಾಬ್ದಾರಿಯು ಇರುವುದರಿಂದ ಪೌರಕಾರ್ಮಿಕರ ಸಂಖ್ಯೆ ಕಡಿಮೆ ಇರುವುದನ್ನು ಪರಿಗಣಿಸಿ ಹೆಚ್ಚುವರಿ ಕಾರ್ಮಿಕರನ್ನು ನಿಯೋಜಿಸಬೇಕೆಂದರು.

ವಾರ್ಡ್ನಲ್ಲಿ ಅತಿ ಹೆಚ್ಚು ಪಾರ್ಕ್ ಗಳಿದ್ದು ನಿರ್ವಹಣೆ ಇಲ್ಲವಾಗಿದೆ ಪಾರ್ಕ್ ಗಳ ನಿರ್ವಹಣೆಗೆ ಹೆಚ್ಚುವರಿ ಸಿಬ್ಬಂದಿಗಳನ್ನು ನೇಮಿಸಬೇಕೆಂದರು, ವಾರ್ಡಿನ ಒಳಬಾಗದ ರಸ್ತೆಗಳು ಸಂಪೂರ್ಣ ಹಾಳಾಗಿದ್ದು ಆದ್ಯತೆ ಮೇರೆಗೆ ಕಾಮಗಾರಿ ಕೈಗೊಳ್ಳಬೇಕೆಂದರು.

ರಾಜ ಕಾಲುವೆಯ ಕಾಮಗಾರಿ ಅವೈಜ್ಞಾನಿಕವಾಗಿದ್ದು ಮಳೆಗಾಲದಲ್ಲಿ ಬಡಾವಣೆಗೆ ನೀರು ನುಗ್ಗುತ್ತಿದ್ದು ವೈಜ್ಞಾನಿಕವಾಗಿ ಕಾಮಗಾರಿಯನ್ನು ಕೈಗೊಳ್ಳಬೇಕೆಂದು ಅಗ್ರಹಿಸಿದರು. ಬೀದಿ ದೀಪಗಳ ನಿರ್ವಹಣೆ ಅಸಮರ್ಪಕವಾಗಿದ್ದು ಸೂಕ್ತ ಕ್ರಮ ಕೈಗೊಳ್ಳುವುದು 24/7 ಕುಡಿಯುವ ನೀರಿನ ಯೋಜನೆ ಅವೈಜ್ಞಾನಿಕವಾಗಿದ್ದು ನೀರಿನ ಅಭಾವ ಹೆಚ್ಚಾಗಿದ್ದು ಸಮಸ್ಯೆ ನಿರ್ವಹಣೆಗೆ ತುರ್ತು ಕ್ರಮ ಕೈಗೊಳ್ಳುವುದು ಅವಶ್ಯಕವಿದೆ ಎಂದು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಸಂಘಟನೆಯ ಪ್ರಮುಖರಾದ ಜಿ.ಡಿ. ಮಂಜುನಾಥ್ ಟಿ.ಡಿ ಗೀತೇಂದ್ರಗೌಡ, ಜಿ.ಎಸ್. ಶಿವಕುಮಾರ್,ಚಂದನ ಪಾರ್ಕ್ ನ ಪ್ರಧಾನ ಕಾರ್ಯದರ್ಶಿ ಶ್ರೀ ಗುರುರಾಜ್, ಅಶೋಕ್, ರವಿ, ಬೋರೇಗೌಡ, ನಾಗೇಶ್ ರಂಗೆಗೌಡ್ರು,ಆನಂದ್ ಮತ್ತು17ನೇ ವಾರ್ಡಿನ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಶ್ರೀ ಆರ್. ರಾಜಶೇಖರ್ ಹಾಗೂ ಇನ್ನು ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

ವಿಜಯನಗರ | ಅಲೆಮಾರಿ ಸಮುದಾಯಗಳ ಅಭಿವೃದ್ಧಿಯೇ ನಿಗಮದ ಮುಖ್ಯ ಧ್ಯೇಯ: ಪಲ್ಲವಿ

ಅಲೆಮಾರಿ ಬುಡಕಟ್ಟು ಸಮುದಾಯಗಳನ್ನು ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ರಾಜಕೀಯವಾಗಿ ಮತ್ತು ಔದ್ಯೋಗಿಕವಾಗಿ ಮುಂಚೂಣಿಗೆ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ಯಾದಗಿರಿ | ಕಟ್ಟಡ ಕಾರ್ಮಿಕರ ಮಕ್ಕಳಿಗೆ ಸಹಾಯ ಧನ ನೀಡುವಂತೆ ಒತ್ತಾಯ

ಕಾರ್ಮಿಕರ ಮಕ್ಕಳಿಗೆ ಸಹಾಯ ಧನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸುವಂತೆ ಕಲ್ಯಾಣ...

Download Eedina App Android / iOS

X