ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಪೊಲೀಸರು ನಾಲ್ವರು ಯುವಕರನ್ನು ಬಂಧಿಸಿದ ಘಟನೆ, ಶಿವಮೊಗ್ಗ ನಗರದ ಹೊರವಲಯ ಬೊಮ್ಮನಕಟ್ಟೆ ಹಾಗೂ ಬಸವನಗಂಗೂರು ರಸ್ತೆಯಲ್ಲಿ ನಡೆದಿದೆ.
ಖಚಿತ ಮಾಹಿತಿ ಮೇರೆಗೆ ಸಿಇಎನ್ ಕ್ರೈಂ ಠಾಣೆ ಪೊಲೀಸರು ಮೇ 8 ರಂದು ಸದರಿ ಕಾರ್ಯಾಚರಣೆ ನಡೆಸಿದ್ದಾರೆ ಎಂದು ಜಿಲ್ಲಾ ಪೊಲೀಸ್ ಇಲಾಖೆ ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.

ಶಿವಮೊಗ್ಗದ ಬೊಮ್ಮನಕಟ್ಟೆ ಆಶ್ರಯ ಬಡಾವಣೆ ನಿವಾಸಿಗಳಾದ ಆಕಾಶ್ ಯಾನೆ ಮಚ್ಚೆ (20), ಕೇಶವ ವಿ (21), ನಾಗರಾಜ್ ಎಂ (21) ಹಾಗೂ ದಾವಣಗೆರೆ ಜಿಲ್ಲೆ ನ್ಯಾಮತಿ ಟೌನ್ ವಿನೋಬನಗರ ವಿ ದರ್ಶನ್ (22) ಬಂಧಿತ ಆರೋಪಿಗಳೆಂದು ಗುರುತಿಸಲಾಗಿದೆ.
ಬಂಧಿತ ಆರೋಪಿಗಳಿಂದ 20,000₹ ರೂಪಾಯಿ. ಮೌಲ್ಯದ 1 ಕೆಜಿ 225 ಗ್ರಾಂ ತೂಕದ ಒಣ ಗಾಂಜಾವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಸಿಇಎನ್ ಕ್ರೈಂ ಪೊಲೀಸ್ ಠಾಣೆ ಡಿವೈಎಸ್ಪಿ ಕೃಷ್ಣಮೂರ್ತಿ ಕೆ ಅವರು ಕಾರ್ಯಾಚರಣೆ ನೇತೃತ್ವವಹಿಸಿದ್ದರು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.