ಶಿವಮೊಗ್ಗ | ತೋಟಗಾರಿಕೆ ಸಹಕಾರ ಸಂಘದ ಆಡಳಿತ ಮಂಡಳಿಗೆ ಅಶೋಕ್ ಬೇಳೂರು ನೇಮಕ

Date:

ಶಿವಮೊಗ್ಗ ಜಿಲ್ಲಾ ತೋಟಗಾರಿಕೆ ಬೆಳೆಗಾರ ಉತ್ಪನ್ನ ಮಾರಾಟ ಮತ್ತು ಸಂಸ್ಕರಣಾ ಸಹಕಾರ ಸಂಘದ ಆಡಳಿತ ಮಂಡಳಿಯ ಸದಸ್ಯರನ್ನಾಗಿ ಅಶೋಕ್ ಬೇಳೂರು ಅವರನ್ನು ನೇಮಕ ಮಾಡಿ ಸರ್ಕಾರ ಆದೇಶಿಸಿದೆ.

- Advertisement -

ಈ ಸಂಬಂಧ ರಾಜ್ಯದ ಸಹಕಾರ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ. ಅದರಂತೆ ಕರ್ನಾಟಕ ಸಹಕಾರ ಸಂಘಗಳ ಅಧಿನಿಯಮ 1959 ರ ಪ್ರಕರಣ 28ಎ ಉಪ ಪ್ರಕರಣ (4ಬಿ)(1) ರನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಶಿವಮೊಗ್ಗ ಜಿಲ್ಲಾ ತೋಟಗಾರಿಕೆ ಬೆಳೆಗಾರ ಉತ್ಪನ್ನ ಮಾರಾಟ ಮತ್ತು ಸಂಸ್ಕರಣಾ ಸಹಕಾರ ಸಂಘ ನಿ., ಶಿವಮೊಗ್ಗ, ಇದರ ಆಡಳಿತ ಮಂಡಳಿಗೆ ಅಶೋಕ ಬೇಳೂರು ತಂದೆ ನಾಗಪ್ಪ, ಬೇಳೂರು ಗ್ರಾಮ, ಕಸಬಾ ಹೋಬಳಿ, ಸಾಗರ ತಾಲ್ಲೂಕು, ಶಿವಮೊಗ, ಜಿಲ್ಲೆ ಇವರನ್ನು ಅಧಿಕಾರೇತರ ಸದಸ್ಯರನ್ನಾಗಿ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಸರ್ಕಾರದ ಮುಂದಿನ ಆದೇಶದವರೆಗೆ ನಾಮನಿರ್ದೇಶನ ಮಾಡಿ ಆದೇಶಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...
1002481364

ಅಂದಹಾಗೇ ಅಶೋಕ್ ಬೇಳೂರು, ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಅವರ ಸಹೋದರರ ಪುತ್ರರಾಗಿದ್ದಾರೆ. ಕಾಂಗ್ರೆಸ್ ಪಕ್ಷದ ಯುವ ಕಾರ್ಯಕರ್ತರಾಗಿದ್ದು, ಪಕ್ಷ ಸಂಘಟನೆಯಲ್ಲಿ ಮುಂಚೂಣಿಯಾಗಿ ಕೆಲಸ ಮಾಡುತ್ತಿದ್ದಾರೆ.

ಸಾಗರ ತಾಲ್ಲೂಕಿನಲ್ಲಿ ಕಾಂಗ್ರೆಸ್ ಯುವ ಮುಖಂಡರಾಗಿರುವಂತ ಅಶೋಕ್ ಬೇಳೂರು ಅವರಿಗೆ ಪಕ್ಷವು ಅವರ ಪಕ್ಷ ನಿಷ್ಠೆಗೆ ನೀಡಿದಂತ ಗೌರವ ಇದಾಗಿದೆ. ಆ ಮೂಲಕ ಶಿವಮೊಗ್ಗ ಜಿಲ್ಲಾ ತೋಟಗಾರಿಕೆ ಬೆಳೆಗಾರರ ಸಹಕಾರ ಸಂಘದ ಆಡಳಿತ ಮಂಡಳಿಯ ಸದಸ್ಯರನ್ನಾಗಿ ನೇಮಿಸಿ, ಮತ್ತಷ್ಟು ಜವಾಬ್ದಾರಿಯನ್ನು ಹೆಚ್ಚಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಆತ್ಮಪರಿಚಯದತ್ತ ಕರೆದೊಯ್ಯುವ ಗಾಂಧೀ ಚಿಂತನೆ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಡಾ. ಶಿವರಾಮ ಕಾರಂತ ಟ್ರಸ್ಟ್ ಹಾಗೂ...

ಹಾವೇರಿ | ಗಾಂಧಿ ಕಂಡ ಕನಸನ್ನ ಸೌಹಾರ್ದಗೊಳಿಸೋಣ: ಬಸವರಾಜ ಪೂಜಾರ

"ಸರ್ಕಾರದ ಕಾರ್ಯಕ್ರಮದ ಭಾಗವಾಗಿ ಮಾತ್ರ ಗಾಂಧಿ ಜಯಂತಿ ಅತ್ಯಂತ ವಿಜೃಂಭಣೆಯಿಂದ ಆಚರಣೆ...

ಶಿವಮೊಗ್ಗ | ಅಕ್ರಮ ಜಂಬಿಟ್ಟಿಗೆ ಸಾಗಿಸುತ್ತಿದ್ದ ಲಾರಿಗಳ ಮೇಲೆ ತಹಶೀಲ್ದಾರ್ ದಾಳಿ

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್​​ ಪೇಟೆ, ಆನಂದಪುರ ಮಾರ್ಗವಾಗಿ ಅಕ್ರಮವಾಗಿ...

ಶಿವಮೊಗ್ಗ | ತಂದೆ-ತಾಯಿ ಬದುಕಿರುವಾಗಲೇ ಗೌರವಿಸಿ, ಪ್ರೀತಿಸಿ: ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ, ತಂದೆ-ತಾಯಿಗಳು ಬದುಕಿರುವಾಗಲೇ ಮಕ್ಕಳಾದ ನಾವು ಅವರನ್ನು ಸದಾ ಗೌರವದಿಂದ ಕಾಣಬೇಕು....