ಶಿವಮೊಗ್ಗ | ಮುಖ್ಯ ನ್ಯಾಯಮೂರ್ತಿ ಬಿ. ಆರ್. ಗವಾಯಿ ಅವರ ಮೇಲೆ ಶೂ ಎಸೆತ ಪ್ರಯತ್ನ : ದಸಂಸ ಖಂಡನೆ

Date:

ಶಿವಮೊಗ್ಗ, ಸುಪ್ರೀಂ ಕೋರ್ಟ್ ಕಲಾಪ ನಡೆಯುತ್ತಿರುವ ಸಂದರ್ಭದಲ್ಲಿ ವಕೀಲನೊಬ್ಬ ಭಾರತದ ಮುಖ್ಯ ನ್ಯಾಯಮೂರ್ತಿ ಬಿ. ಆರ್. ಗವಾಯಿ ಅವರ ಮೇಲೆ ಶೂ ಎಸೆತ ಪ್ರಯತ್ನದ ಪ್ರಕರಣವನ್ನು ಪ್ರೊ. ಬಿ. ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿಯು ತೀವ್ರವಾಗಿ ಖಂಡಿಸಿದೆ.

- Advertisement -

ಈ ಬಗ್ಗೆ ಹೇಳಿಕೆ ನೀಡಿರುವ ಸಮಿತಿಯ ಗುರುಮೂರ್ತಿ, ಇದು ಮುಖ್ಯ ನ್ಯಾಯಮೂರ್ತಿಯವರ ಮೇಲೆ ನಡೆದ ದಾಳಿಯಲ್ಲ. ಇದು ಭಾರತದ ಸಂವಿಧಾನದ ಮೇಲೆ ನಡೆದ ದಾಳಿಯಾಗಿದೆ. ದೇಶದಲ್ಲಿ ಸಂವಿಧಾನ ಜಾರಿಯಾದಾಗಲೇ ನಮ್ಮ ದೇಶದ ಸಂವಿಧಾನವನ್ನು ಈ ಸನಾತನವಾದಿಗಳು ವಿರೋಧಿಸಿದ್ದರು. ದಲಿತನೊಬ್ಬ ಮುಖ್ಯ ನ್ಯಾಯಮೂರ್ತಿಯ ಪೀಠದಲ್ಲಿ ಕೂತು ನ್ಯಾಯ ಕೊಡುವುದನ್ನು ಈ ಸನಾತನವಾದಿಗಳು ಯಾವೊತ್ತು ಒಪ್ಪಿಕೊಳ್ಳುವುದಿಲ್ಲ ಎನ್ನುವುದಕ್ಕೆ ಈ ಘಟನೆ ಸಾಕ್ಷಿಯಾಗಿದೆ ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇತ್ತೀಚೆಗೆ ಆರೆಸ್ಸೆಸ್ ಕಾರ್ಯಕ್ರಮವೊಂದಕ್ಕೆ ಭಾಗವಹಿಸಲು ನಿರಾಕರಿಸಿದ ಗವಾಯಿ “ತಾನು ಅಂಬೇಡ್ಕರ್‌ವಾದಿ. ಆರ್ ಎಸ್ ಎಸ್ ನಂತಹ ಕಾರ್ಯಕ್ರಮಕ್ಕೆ ಹೋಗೋಕೆ ಸಾಧ್ಯವೇ ಇಲ್ಲ” ಎಂದು ಹೇಳಿದ್ದರು.

ಇದರ ಬೆನ್ನಲ್ಲೆ ವಿಚಾರಣೆಯ ವೇಳೆಯಲ್ಲಿ ವಕೀಲನೊಬ್ಬ ಚಪ್ಪಲಿ ಎಸೆಯಲೆತ್ನಿಸಿದ್ದಾನೆ. ಸನಾತನ ಧರ್ಮಕ್ಕೆ ಅಪಮಾನ ಮಾಡಿದರೆ ಸಹಿಸುವುದಿಲ್ಲ ಎಂದು ಉದ್ದಟತನದಿಂದ ಮಾತನಾಡಿರುವುದು ಸನಾತನವಾದಿಗಳ ಮುಖವಾಡ ಕಳಚಿದಂತಾಗಿದೆ ಎಂದಿದ್ದಾರೆ.

ಸಿ ಜೆ ಐ ಗವಾಯಿಯವರು ಉತ್ತರ ಪ್ರದೇಶ ಸರ್ಕಾರದ ಬುಲ್ಡೋಜರ್ ಕಾರ್ಯಾಚರಣೆಗೆ ತಡೆ ನೀಡಿದ್ದಲ್ಲದೆ ಯಾವುದೇ ಪ್ರಕರಣವಿದ್ದರೂ ಸಂವಿಧಾನದಡಿಯಲ್ಲಿ ಆದೇಶ ನೀಡುತ್ತಿರುವುದು ಸನಾತನವಾದಿಗಳಿಗೆ ಬಿಸಿ ತುಪ್ಪವಾಗಿದೆ.

ಶೂ ಎಸೆದ ವಕೀಲನ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸ ಬೇಕು. ಮತ್ತು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಉನ್ನತ ಮಟ್ಟದ ತನಿಖೆಯನ್ನು ನಡೆಸಿ, ಈ ದಾಳಿಯ ಹಿಂದಿನ ಸನಾತನವಾದಿಗಳ ಹುನ್ನಾರವನ್ನು ಕೇಂದ್ರ ಸರ್ಕಾರ ಬಯಲಿಗೆಳೆಯ ಬೇಕೆಂದು ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...