ಶಿವಮೊಗ್ಗ | ಜೋಗಗುಂಡಿಗೆ ಬಿದ್ದು ಆತ್ಮಹತ್ಯೆಗೆ ಯತ್ನ : ಮನಃಪರಿವರ್ತಿಸಿ, ಮರು ಜೀವ ನೀಡಿದ ಎಸ್ ಐ ನಾಗರಾಜ್

Date:

Advertisements

ಶಿವಮೊಗ್ಗ, ಜೋಗ್ ಫಾಲ್ಸ್ ನಲ್ಲಿ ಜಿಗಿದು ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದ ವ್ಯಾಪಾರಿಗೆ ಕಾರ್ಗಲ್ ಸಬ್ ಇನ್ಸ್ ಪೆಕ್ಟರ್ ಬುದ್ಧಿ ಹೇಳಿ ಆತ್ಮಹತ್ಯೆ ನಿರ್ಧಾರ ಬದಲಿಸುವಂತೆ ಮಾಡಿ ಆತನ ಊರಿಗೆ ಕಳುಹಿಸಿದ ಘಟನೆ ಜೋಗದಿಂದ ವರದಿಯಾಗಿದೆ.

ಸಬ್ ಇನ್ಸ್ ಪೆಕ್ಟರ್ ನಾಗರಾಜ್ ಆತ್ಮಹತ್ಯೆಯಿಂದ ವ್ಯಕ್ತಿಯನ್ನು ಪಾರು ಮಾಡಿದವರು.ಜೋಗ ಫಾಲ್ಸ್ ನಲ್ಲಿ ರೌಂಡ್ಸ್ ನಲ್ಲಿ ಇದ್ದಾಗ ಒಬ್ಬ ವ್ಯಕ್ತಿಯು ಜೋಗ್ ಫಾಲ್ಸ್ ನಲ್ಲಿ ಇರುವ ಅತಿ ಅಪಾಯಕಾರಿ ಸ್ಥಳಗಳ ಬಗ್ಗೆ ಅಲ್ಲಿನ ಆಟೋ ಚಾಲಕರಲ್ಲಿ ವಿಚಾರಿಸಿದ್ದರ ಮಾಹಿತಿ ಪಡೆದಿದ್ದರು.

ಆತನ ಬಗ್ಗೆ ಅನುಮಾನ ಬಂದು, ವಿಚಾರಿಸಲಾಗಿ ಬೆಂಗಳೂರಿನಲ್ಲಿ ಬಟ್ಟೆ ವ್ಯಾಪಾರ ಮಾಡುತ್ತಿದ್ದ ವ್ಯಕ್ತಿಯ ಎನ್ನುವುದು ಗೊತ್ತಾಗಿದೆ.

ವ್ಯಾಪಾರದಲ್ಲಿ ನಷ್ಟವಾಗಿದೆ , ತನ್ನ ಪೋಷಕರ ಆರೋಗ್ಯದಲ್ಲಿ ಸಮಸ್ಯೆ ಇದ್ದ ಕಾರಣ, ಲಕ್ಷಗಟ್ಟಲೆ ಸಾಲ ಮಾಡಿ ತೀರಿಸಲಾಗದೆ ಜೀವನದಲ್ಲಿ ಜಿಗುಪ್ಸೆ ಹೊಂದಿದ್ದೇನೆ.

ಬೇಸರದಿಂದ, ಸುಮಾರು 20 ದಿನಗಳ ಹಿಂದೆ, ಮನೆ ಬಿಟ್ಟು ಹೊರಗಡೆ ಬಸ್ ಸ್ಟ್ಯಾಂಡ್, ರೈಲ್ವೆ ಸ್ಟೇಷನ್ ಬೇರೆ ಬೇರೆ ಸ್ಥಳಗಳಲ್ಲಿ ವಾಸ್ತವ ಮಾಡಿ ನಂತರ ಸಾಯುವ ನಿರ್ಧಾರ ತೆಗೆದುಕೊಂಡಿದ್ದಾಗಿ ವಿವರಿಸಿದ್ದನು.

ಜೋಗ್ ಫಾಲ್ಸ್ ಗೆ ಹೋಗಿ ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿ ಬಂದಿದ್ದಾಗಿ‌ ಮಾಹಿತಿ‌ ನೀಡಿದ್ದನು.

ನಂತರ ಆತನಿಗೆ ಧೈರ್ಯ ತುಂಬಿ ಮನವೊಲಿಸಿ ಅವರ ಪೋಷಕರನ್ನು ಫೋನ್ ಮುಖಾಂತರ ಸಂಪರ್ಕಿಸಿ, ವಾಪಸ್ ಬೆಂಗಳೂರಿನ ಅವನ ಮನೆಗೆ ಕಳಿಸಿ ಕೊಟ್ಟಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೋಜುಗಾದ ಸೂಜು ಮಲ್ಲಿಗೆ ಹುಡುಗಿ ಹಾಡು : ಇಮ್ಮಡಿಯಾದ ಪ್ರೇಕ್ಷಕರ ಉತ್ಸಾಹ

 ಕಳೆದ 10 ದಿನಗಳಿಂದ ದಸರಾ ಉತ್ಸವ ಸಂಭ್ರಮದಲ್ಲಿ ಮುಳುಗಿದ್ದ ಪ್ರೇಕ್ಷಕರ ಉತ್ಸಾಹ...

ತುಮಕೂರು ದಸರಾ : ಸಚಿವರಿಂದ ವಿಶೇಷ ಪೂಜೆ

ತುಮಕೂರು ದಸರಾ ಉತ್ಸವದ ಕಡೆಯ ದಿನವಾದ ವಿಜಯದಶಮಿಯಂದು ಗೃಹ ಹಾಗೂ ಜಿಲ್ಲಾ...

ಯುವಪರಿವರ್ತನೆ ಯಾತ್ರೆ: ಬಾಗಲಕೋಟೆಯಲ್ಲಿ ಚಾಲನೆ

ಯುವಜನರನ್ನು ರಾಜ್ಯದ ಅಭಿವೃದ್ಧಿಯತ್ತ ಚಿತ್ತಹರಿಸಲು, ಪ್ರಜೆಗಳ ಆರೋಗ್ಯ, ಶಿಕ್ಷಣ, ಸಬಲೀಕರಣ, ಉದ್ಯೋಗದ...

ಕೊಪ್ಪಳ | ಪ್ರವಾದಿ ಮಹಮ್ಮದ್‌ ಸಂದೇಶವನ್ನು ನಾವು ಪಾಲನೆ ಮಾಡಬೇಕು: ಲಾಲ್ ಹುಸೇನ್ ಕಂದ್ಗಲ್

'ಖುರಾನ್' ಬರುವ ಪ್ರವಾದಿ ಮಹಮ್ಮದ್‌ ಅವರು ಹೇಳಿದ ಸತ್ಯವನ್ನೇ ಭಾರತೀಯ ಪುರಾಣಗಳು...

Download Eedina App Android / iOS

X