ಶಿವಮೊಗ್ಗ | ಆ. 16 ರಿಂದ 28ರ ವರೆಗೆ : “ಕರ್ನಾಟಕ ಸ್ಟಾರ್ ಸಿಂಗರ್ 2025 ಸೀಸನ್-2”

Date:

ಶಿವಮೊಗ್ಗ, ಜಿಲ್ಲಾ ಸಾಂಸ್ಕೃತಿಕ ಕಲಾವಿದರ ಸಂಘದ ವತಿಯಿಂದ ಬಸವೇಶ್ವರ ಧರ್ಮ ಸಂಸ್ಥೆ ಸಂಯುಕ್ತಾಶ್ರಯದಲ್ಲಿ ಸಂಘದ ಐದನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ರಾಜ್ಯ ಮಟ್ಟದ ಚಲನ ಚಿತ್ರಗೀತೆಗಳ ಗಾಯನ ಸ್ಪರ್ಧೆಯನ್ನು “ಕರ್ನಾಟಕ ಸ್ಟಾರ್ ಸಿಂಗರ್ 2025 ಸೀಸನ್-2” ಎಂಬ ಹೆಸರಿನಲ್ಲಿ ಹಮ್ಮಿಕೊಳ್ಳಲಾಗಿದೆ.

- Advertisement -

ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ‌ ನೀಡಿದ ಸಂಘದ ಅಧ್ಯಕ್ಷ ಬಿ ಎ ಮಂಜುನಾಥ , ಕಾರ್ಯಕ್ರಮದ ಗಾಯಕ-ಗಾಯಕಿಯರ ಆಡಿಶನ್ ಆ. 16 ರಂದು ಲಯನ್ಸ್ ಕ್ಲಬ್, ಶುಗರ್ ಟೌನ್, ಇಲ್ಲಿ ನಡೆಯಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಆಡಿಶನ್‌ನಲ್ಲಿ ಆಯ್ಕೆಯಾದ ಗಾಯಕ-ಗಾಯಕಿಯರಿಗೆ ಸೆಮಿಫೈನಲ್ ರೌಂಡ್ ‌ಆ. 17-08-2025 ರಂದು ಲಯನ್ಸ್ ಕ್ಲಬ್, ಜೆ.ಟಿ.ಎಸ್. ಸ್ಕೂಲ್ ಪಕ್ಕ, ಶುಗರ್ ಟೌನ್. ಇಲ್ಲಿ ಸೆಮಿಫೈನಲ್‌ ನಡೆಯಲಿದೆ ಎಂದರು.

ಸೆಮಿಫೈನಲ್‌ನಲ್ಲಿ ಆಯ್ಕೆಯಾದ ಗಾಯಕ-ಗಾಯಕಿಯರಿಗೆ ರಾಜ್ಯ ಮಟ್ಟದ ಚಲನಚಿತ್ರಗೀತೆಗಳ ಫೈನಲ್ ಮತ್ತು ಗ್ರಾಂಡ್ ಫಿನಾಲೆ ಸ್ಪರ್ಧೆಯು ಆ. 24 ರ ಭಾನುವಾರ ಬಸವೇಶ್ವರ ಸಭಾ ಭವನ ಸಿದ್ಧರೂಢನಗರ, ಭದ್ರಾವತಿಯಲ್ಲಿ ನಡೆಯಲಿದೆ. ವಿಜೇತರಾದವರಿಗೆ ಪ್ರಥಮ ಬಹುಮಾನ 25000/- ನಗದು ಮತ್ತು ಪಾರಿತೋಷಕ. ದ್ವೀತಿಯ ಬಹುಮಾನ 15000/- ನಗದು ಮತ್ತು ಪಾರಿತೋಷಕ. ತೃತೀಯ ಬಹುಮಾನ 10000/- ನಗದು ಮತ್ತು ಪಾರಿತೋಷಕ. ಸಮಾಧಾನಕರ ಬಹುಮಾನ 2000/- ಭಾಗವಹಿಸಿದ ಎಲ್ಲಾ ಗಾಯಕ ಗಾಯಕಿಯರಿಗೆ ಸರ್ಟಿಫೀಕೆಟ್‌ಗಳನ್ನು ನೀಡಕಾಗುವುದು ಎಂದರು.

ಇದೇ ಕಾರ್ಯಕ್ರಮದಲ್ಲಿ ಇಬ್ಬರು ಹಿರಿಯ ಕಲಾವಿದರಿಗೆ ದಿ॥ ಜಯಶೀಲನ್ ರಾಜ್ಯಪ್ರಶಸ್ತಿ ಮತ್ತು ದಿ| ಗೀತಾಂಜಲಿ ಶ್ರೀನಿವಾಸ್‌ ರಾಜ್ಯ ಪ್ರಶಸ್ತಿ ಪ್ರದಾನ ಮಾಡಲಾಗುವುದು, ಹಾಗೂ ಸಂಘದ ಹಿರಿಯ ಕಲಾವಿದರಿಗೆ ಸನ್ಮಾನ ಕಾರ್ಯಕ್ರಮ, ಕಲಾವಿದರ ಮಕ್ಕಳಿಗೆ ಎಸ್.ಎಸ್.ಎಲ್.ಸಿ ಮತ್ತು ದ್ವೀತಿಯ ಪಿ.ಯು.ಸಿ.ಯಲ್ಲಿ ಅತಿಹೆಚ್ಚು ಅಂಕ ಪಡೆದವರಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುವುದು ಎಂದು ವಿವರಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಪದಾಧಿಕಾರಿಗಳಾದ ವೈ ಕೆ ಹನುಮಂತಯ್ಯ, ಚರಣ್ ಕವಾಡ್, ಚಿದಾನಂದ, ಪ್ರಶಾಂತ್ ಮೊದಲಾದವರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...