ಶಿವಮೊಗ್ಗ | ಮೀಟರ್ ಹಾಕಲು ತಿಳಿಸಿದ್ದಕ್ಕೆ ಅವಾಚ್ಯ ಶಬ್ಧಗಳಿಂದ ನಿಂದನೆ : ಆಟೋ ಚಾಲಕನಿಗೆ ದಂಡ

Date:

Advertisements

ಶಿವಮೊಗ್ಗ, ನಗರದಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಆಟೋ ಚಾಲಕನೊಬ್ಬನಿಗೆ ಟ್ರಾಫಿಕ್ ಪೊಲೀಸರು ದಂಡ ವಿಧಿಸಿರುವ ಘಟನೆ ಬೆಳಕಿಗೆ ಬಂದಿದೆ.

ಪ್ರಯಾಣಿಕರು ಆಟೋ ಮೀಟರ್ ಹಾಕಿಕೊಳ್ಳುವಂತೆ ಕೇಳಿದಾಗ, ಚಾಲಕನು ಅವಾಚ್ಯ ಶಬ್ಧಗಳಿಂದ ನಿಂದನೆ ಮಾಡಿದ್ದಾನೆ. ಈ ಕುರಿತು ಪ್ರಯಾಣಿಕರಿಂದ ಟ್ರಾಫಿಕ್ ಪೊಲೀಸರಿಗೆ ದೂರು ಸಲ್ಲಿಸಲಾಗಿತ್ತು.

ದೂರು ಪರಿಶೀಲಿಸಿದ ನಂತರ, ಪೊಲೀಸರು ಚಾಲಕನಿಗೆ ₹500 ದಂಡ ವಿಧಿಸಿದರು.ಅಷ್ಟೇ ಅಲ್ಲದೆ, ಮುಂದಿನ ದಿನಗಳಲ್ಲಿ ಈ ರೀತಿಯ ವರ್ತನೆ ಪುನರಾವರ್ತನೆ ಆಗದಂತೆ ಆಟೋ ಚಾಲಕನಿಗೆ ಎಚ್ಚರಿಕೆ ನೀಡಲಾಗಿದೆ.

Advertisements

ಜೊತೆಗೆ ಎಲ್ಲಾ ಆಟೋ ಚಾಲಕರು ಪ್ರಯಾಣಿಕರನ್ನು ಗೌರವದಿಂದ ವರ್ತಿಸಬೇಕು ಮತ್ತು ಕಡ್ಡಾಯವಾಗಿ ಮೀಟರ್ ಬಳಸಬೇಕು ಎಂಬ ಸೂಚನೆ ನೀಡಲಾಗಿದೆ.

ಟ್ರಾಫಿಕ್ ಪೊಲೀಸರು ಪ್ರಯಾಣಿಕರ ಸುರಕ್ಷತೆ ಮತ್ತು ಹಕ್ಕುಗಳನ್ನು ಕಾಯ್ದುಕೊಳ್ಳುವುದು ತಮ್ಮ ಕರ್ತವ್ಯ ಎಂದು ತಿಳಿಸಿ, ಭವಿಷ್ಯದಲ್ಲೂ ಇದೇ ರೀತಿಯ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಂತಾಮಣಿ | ಸಬ್ ರಿಜಿಸ್ಟರ್ ಕಚೇರಿಯಿಂದ ʼಲಂಚ ಸ್ವೀಕರಿಸುವುದಿಲ್ಲʼವೆಂಬ ನಾಮಫಲಕ ನಾಪತ್ತೆ

ಸಬ್ ರಿಜಿಸ್ಟರ್ ನಾರಾಯಣಪ್ಪ ವರ್ಗಾವಣೆಯಾದ ಬೆನ್ನಲ್ಲೇ ಅವರು ಹಾಕಿದ್ದ ʼಲಂಚ ಸ್ವೀಕರಿಸುವುದಿಲ್ಲʼವೆಂಬ...

ಬೀದರ್‌ | ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

ಬೀದರ್‌ ನಗರದ ಅಕ್ಕಮಹಾದೇವಿ ಪದವಿ ಮಹಿಳಾ ಮಹಾವಿದ್ಯಾಲಯದ ತೃತೀಯ ಹಾಗೂ ಅಂತಿಮ...

ಶಿವಮೊಗ್ಗ | ಪತ್ರಿಕಾ ವಿತರಕರ ಸಮ್ಮೇಳನ ಯಶಸ್ವಿಗೆ ಭಾಗಿಯಾಗಿ : ಎನ್. ಮಾಲತೇಶ್

ಶಿವಮೊಗ್ಗ, ಮೈಸೂರಿನಲ್ಲಿ ನಡೆಯುವ ವಿಶ್ವ ಪತ್ರಿಕಾ ವಿತರಕರ ದಿನಾಚರಣೆ 5 ನೇ...

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ಸ್ವಾಗತ, ಬಿಜೆಪಿ ಮುಖಂಡರ ನಡೆಗೆ ಖಂಡನೆ: ಸಿಪಿಐಎಂ

ನಾಡಹಬ್ಬ ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತೆ, ಲೇಖಕಿ ಬಾನು ಮುಷ್ತಾಕ್...

Download Eedina App Android / iOS

X