ಶಿವಮೊಗ್ಗ, ಮತಗಳತನ ವಿರುದ್ಧ ರಾಜ್ಯದ ಜನರಿಗೆ ಅರಿವು ಮೂಡಿಸುವುದರ ಜೊತೆಗೆ ಪಕ್ಷದ ಜನಪರ ಕಾರ್ಯಕ್ರಮಗಳನ್ನು ತಿಳಿಸುವ ಸಲುವಾಗಿ ಈಗ ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯ ಪ್ರವಾಸ ಹಮ್ಮಿಕೊಂಡಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಸಚಿವ ವಿನಯಕುಮಾರ್ ಸೊರಕೆ ಹೇಳಿದರು.
ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮತಗಳ್ಳತನದ ವಿರುದ್ಧದ ರಾಹುಲ್ ಗಾಂಧಿ ಅವರ ಹೋರಾಟ ಹೊಸ ಇತಿಹಾಸ ಸೃಷ್ಟಿಸಿದೆ. ಈ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಮಧ್ಯ ಪ್ರವೇಶಿಸಿರುವುದು ಹೋರಾಟಕ್ಕೆ ಸಿಕ್ಕ ಜಯ ಆಗಿದೆ. , ಮತಗಳ್ಳತನ ಕೇವಲ ಕರ್ನಾಟಕ, ಬಿಹಾರ ಅಥವಾ ಮಹಾರಾಷ್ಟ್ರಕ್ಕೆ ಮಾತ್ರ ಸಿಮೀತವಾಗಿಲ್ಲ. ಇಡೀ ದೇಶಕ್ಕೆ ವ್ಯಾಪಿಸಿದೆ.
ಮಹಾರಾಷ್ಟ್ರ ದಲ್ಲಿ ವಿಧಾನ ಸಭೆ ಚುನಾವಣೆ ವೇಳೆ ೧ ಲಕ್ಷದಷ್ಟು ಹೆಚ್ಚುವರಿ ಇದ್ದ ವೋಟ ಸಂಖ್ಯೆ ಪಾರ್ಲಿಮೆಂಟ್ ಚುನಾವಣೆ ವೇಳೆ ದುಪ್ಪಟ್ಟಾಗುತ್ತದೆ. ಆದ್ದರಿಂದಲೇ ಮತ ಗಳ್ಳತನದ ಬಗ್ಗೆ ದೊಡ್ಡ ಅನುಮಾನವೇ ಮೂಡಿದೆ. ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು ಪಕ್ಷದ ಕೆಲಸವಾಗಿದೆ ಎಂದರು.
ಬೆಂಗಳೂರಿನ ಮಹದೇವಪುರ ಕ್ಷೇತ್ರದಲ್ಲಿ ತಾನು ಕಳೆದ ವಿಧನಸಭಾ ಚುನಾವಣೆಯಲ್ಲಿ ಪಕ್ಷದ ಚುನಾವಣಾ ವೀಕ್ಷಕನಾಗಿದ್ದೆ. ಆ ವೇಳೆ ಒಂದು ಅಪಾರ್ಟ್ ಮೆಂಟ್‌ಗೆ ಹೋದರೆ ಅಲ್ಲಿ ಒಳಹೋಗುವುದಕ್ಕೆ ನಮಗೆ ಬಿಡಲಿಲ್ಲ.
ಇವೆಲ್ಲವನ್ನು ಜನರಿಗೆ ತಿಳಿಸುವ ಸಲುವಾಗಿ ವರದಿ ತಯಾರಿಸಲು ಸೂಚಿಸಿದ್ದರು. ಆ ಪ್ರಕಾರ ನಾವು ಸತ್ಯ ಶೋಧನೆ ನಡೆಸಿ, ವರದಿ ತಯಾರಿಸಿ ಎಐಸಿಸಿಗೆ ಸಲ್ಲಿಸಿದ್ದೆವು. ಅಲ್ಲಿಂದ ಮತಗಳ್ಳತನ ಹೊರಬಂದಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಮಾಜಿ ಸಚಿವ ಹಾಗೂ ಕೆಪಿಸಿಸಿ ಪ್ರಚಾರ ಸಮಿತಿ ಉಪಾಧ್ಯಕ್ಷ ಕಿಮ್ಮನೆ ರತ್ನಾಕರ್, ಜಿಲ್ಲಾಧ್ಯಕ್ಷ ಆರ್.ಪ್ರಸನ್ನ ಕುಮಾರ್, ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ರಮೇಶ್ ಹೆಗ್ಡೆ, ಡಾ|| ಸಂತೋಷ್, ವೀಕ್ಷಕ ಆನಂತ್, ಸೂಡಾ ಅಧ್ಯಕ್ಷ ಹೆಚ್. ಎಸ್.ಸುಂದರೇಶ್, ಪದಾಧಿಕಾರಿಗಳಾದ ಕಲಗೋಡು ರತ್ನಾಕರ್, ಎಸ್.ಪಿ. ಶೇಷಾದ್ರಿ, ಇಕ್ಕೇರಿ ರಮೇಶ್, ಇಸ್ಮಾಯಿಲ್ ಖಾನ್, ಹಿಂದುಳಿದ ವರ್ಗಗಳ ವಿಭಾಗದ ಜಿಲ್ಲಾಧ್ಯಕ್ಷ ರಮೇಶ್ ಶಂಕರ್ ಘಟ್ಟ, ಮಹಿಳಾ ಘಟಕದ ಅಧ್ಯಕ್ಷೆ ಶ್ವೇತಾ ಬಂಡಿ, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರ್ಷಿತ್ ಗೌಡ ಉಪಸ್ಥಿತರಿದ್ದರು..