ಬಾಲ್ಯ ವಿವಾಹ ನಿಷೇಧ ಮತ್ತು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯದ ಬಗ್ಗೆ ಮಕ್ಕಳಲ್ಲಿ ಅರಿವು ಕಾರ್ಯಕ್ರಮವನ್ನು ನಾಳೆ ದಿವಸ ದಿನಾಂಕ 23-07-2025 ರ ಬುಧವಾರ ಬೆಳಗ್ಗೆ 9.30 ಕ್ಕೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ಶಾಲಾ ಶಿಕ್ಷಣ ಇಲಾಖೆಯವರ ಸಹಯೋಗದೊಂದಿಗೆ ಗೌರವಾನ್ವಿತ ಮುಖ್ಯ ನ್ಯಾಯಧೀಶರಾದ ಸಂತೋಷ್ ಎಂ ಎಸ್ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಧೀಶರು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಶಿವಮೊಗ್ಗ ಇವರ ಘನ ಉಪಸ್ಥಿತಿಯಲ್ಲಿ ಕರ್ನಾಟಕ ಪಬ್ಲಿಕ್ ಶಾಲೆ ಬಿ ಹೆಚ್ ರಸ್ತೆ ಶಿವಮೊಗ್ಗ ಇಲ್ಲಿ ಬಾಲ್ಯ ವಿವಾಹ ನಿಷೇಧ ಮತ್ತು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯದ ಬಗ್ಗೆ ಮಕ್ಕಳಲ್ಲಿ ಅರಿವು ಮೂಡಿಸುವ ಬಗ್ಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಕ್ರಮಕ್ಕೆ ಕೆಳಕಂಡ ಪ್ರೌಢಶಾಲೆಗಳ ಮುಖ್ಯ ಶಿಕ್ಷಕರು ತಮ್ಮ ಶಾಲೆಯಲ್ಲಿನ 8 ರಿಂದ 10 ನೇ ತರಗತಿಯ ಹೆಣ್ಣು ಮಕ್ಕಳನ್ನು ಶಾಲೆಯ ಒಬ್ಬ ಶಿಕ್ಷಕಿ /ಶಿಕ್ಷಕರೊಂದಿಗೆ ಕಡ್ಡಾಯವಾಗಿ ಕರೆದುಕೊಂಡು ಬರಲು ಈ ಮೂಲಕ ತಿಳಿಸಲಾಗಿದೆ.

ಕರ್ನಾಟಕ ಪಬ್ಲಿಕ್ ಶಾಲೆ ಬಿ ಹೆಚ್ ರಸ್ತೆ ಸರ್ಕಾರಿ ಬಾಲಿಕಾ ಪ್ರೌಢಶಾಲೆ, ಶಾಲೆ ಬಿ ಹೆಚ್ ರಸ್ತೆ ಸರ್ಕಾರಿ ಉರ್ದು ಪ್ರೌಢಶಾಲೆ, ಶಾಲೆ ಬಿ ಹೆಚ್ ರಸ್ತೆ ಸರ್ಕಾರಿ ತಮಿಳ್ ಪ್ರೌಢ ಶಾಲೆ ಶಾಲೆ ಬಿ ಹೆಚ್ ರಸ್ತೆ ಸರ್ಕಾರಿ ಪ್ರೌಢಶಾಲೆ ದುರ್ಗಿಗುಡಿ ಸರ್ಕಾರಿ ಪ್ರೌಢಶಾಲೆ ಮಿಳಘಟ್ಟ ಸರ್ಕಾರಿ ಪ್ರೌಢಶಾಲೆ ವಿನೋಬನಗರ.
ಕಾರ್ಯಕ್ರಮದ ಸ್ಥಳ : ಕರ್ನಾಟಕ ಪಬ್ಲಿಕ್ ಶಾಲೆ ಬಿ ಹೆಚ್ ರಸ್ತೆ ಶಿವಮೊಗ್ಗ ಹಾಗೂ ಸಮಯ ಬೆಳಿಗ್ಗೆ : 9.30 ಕ್ಕೆ ನಿಗದಿಯಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಬಿಇಒ ರಮೇಶ್ ತಿಳಿಸಿದ್ದಾರೆ.