ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರ 8 ರಿಂದ 14 ವರ್ಷ ವಯೋಮಾನದೊಳಗಿನ ಐವರು ಮಕ್ಕಳು ನಾಪತ್ತೆಯಾದ ಪ್ರಕರಣ ಸುಖಾಂತ್ಯ ಕಂಡಿದೆ.
ಏ. 6ರ ಭಾನುವಾರ ಸಂಜೆ 4 ಗಂಟೆ ಸುಮಾರಿಗೆ ಸಮೀಪದ ನಾಲೆಯಲ್ಲಿ ಮೀನು ಹಿಡಿಯಲು ತೆರಳಿದ್ದರು. ಸಂಜೆಯಾದರೂ ಮನೆಗೆ ಹಿಂದಿರುಗಿರಲಿಲ್ಲ. ಮಕ್ಕಳು ಮನೆಗೆ ಹಿಂದಿರುಗದಿದ್ದರಿಂದ ಪೋಷಕರುಗಳು ಊರಿನ ಪರಿಚಯಸ್ಥರು, ಸಂಬಂಧಿಗಳ ಮನೆಗಳು ಸೇರಿದಂತೆ ಗ್ರಾಮದೆಲ್ಲೆಡೆ ಹುಡುಕಾಟ ನಡೆಸಿದ್ದರು. ಎಲ್ಲಿಯೂ ಮಕ್ಕಳ ಸುಳಿವು ಪತ್ತೆಯಾಗಿರಲಿಲ್ಲ. ಆತಂಕಗೊಂಡ ಪೋಷಕರು ಗ್ರಾಮಾಂತರ ಠಾಣೆ ಪೊಲೀಸರ ಗಮನಕ್ಕೆ ತಂದಿದ್ದರು. ಅಲರ್ಟ್ ಆದ ಪೊಲೀಸರು ಕೆರೆಕಟ್ಟೆ, ನಿರ್ಜನ ಪ್ರದೇಶಗಳು, ಬಸ್, ರೈಲ್ವೆ ನಿಲ್ದಾಣ ಸೇರಿದಂತೆ ಹಲವೆಡೆ ಶೋಧ ನಡೆಸಿದ್ದರು. ಮತ್ತೊಂದೆಡೆ, ಪೋಷಕರು ಹಾಗೂ ಗ್ರಾಮಸ್ಥರು ರಾತ್ರಿಯಿಡಿ ಎಲ್ಲೆಡೆ ಹುಡುಕಾಟ ನಡೆಸಿದ್ದರು.

ಕೊನೆಗೂ ನಾಪತ್ತೆಯಾಗಿದ್ದ ಐವರು ಮಕ್ಕಳು ಗ್ರಾಮದ ತೋಟವೊಂದರಲ್ಲಿ ಪತ್ತೆಯಾಗಿದ್ದಾರೆ. ಇದರಿಂದ ಪೋಷಕರು ಹಾಗೂ ಗ್ರಾಮಸ್ಥರು ನಿಟ್ಟುಸಿರು ಬಿಡುವಂತಾಗಿದೆ.
ಇದನ್ನೂ ಓದಿ: ಶಿವಮೊಗ್ಗ | ಈದ್ಗ ಮೈದಾನದ ತುರ್ತು ಎಸ್ ಪಿ ಸಭೆಗೆ ಗೈರು ಹಿನ್ನಲೆ ವಿನೋಬನಗರ ಪಿ ಐ ಅಮಾನತು