ಶಿವಮೊಗ್ಗ ಜೂನ್ 19ರಂದು ಸಾಗರ ತಾಲೂಕಿನ ಆನಂದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೈಕ್ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ. ಈ ಕುರಿತು ಸಾರ್ವಜನಿಕರೊಬ್ಬರು 112 ತುರ್ತು ಸೇವೆಗೆ ಕರೆ ಮಾಡಿ ಮಾಹಿತಿ ನೀಡಿದ್ದರು, ಕರೆ ಸ್ವೀಕರಿಸಿದ ತಕ್ಷಣವೇ, ERV (Emergency Response Vehicle) ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ಧಾವಿಸಿ ಅಲ್ಲಿ ಗಾಯಗೊಂಡಿದ್ದ ವ್ಯಕ್ತಿಯನ್ನು ಆಟೋದ ಮೂಲಕ ಆಸ್ಪತ್ರೆಗೆ ಕಳುಹಿಸಿಕೊಟ್ಟು ಪ್ರಥಮ ಚಿಕಿತ್ಸೆಗೆ ನೆರವಾಗಿದ್ದಾರೆ.
ಅಲ್ಲದೆ, ಅಪಘಾತಕ್ಕೀಡಾದ ವ್ಯಕ್ತಿಯ ಕುಟುಂಬಸ್ಥರಿಗೆ ಮತ್ತು ಸಂಬಂಧಪಟ್ಟ ಪೊಲೀಸ್ ಠಾಣೆಗೆ ಈ ಕುರಿತು ಮಾಹಿತಿ ನೀಡಿದ್ದಾರೆ.ಒಂದು ಬೈಕ್ ಉತ್ತರ ಕನ್ನಡದ ಸಿದ್ದಾಪುರದಿಂದ ಶಿವಮೊಗ್ಗದತ್ತ ಬರುತ್ತಿದ್ದರೆ ಇನ್ನೊಂದು ಶಿವಮೊಗ್ಗದಿಂದ ಸಾಗರದತ್ತ ಸಾಗುತ್ತಿತ್ತು ಎಂದು ತಿಳಿದುಬಂದಿದೆ.