ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನಲ್ಲಿ ಗೂಡ್ಸ್ ವಾಹನ ಮತ್ತು ಖಾಸಗಿ ಬಸ್ ಮುಖಾಮುಖಿ ಡಿಕ್ಕಿಯಾಗಿದೆ. ಗೂಡ್ಸ್ ವಾಹನದ ಚಾಲಕ ಗಾಯಗೊಂಡಿದ್ದಾನೆ.
ತೀರ್ಥಹಳ್ಳಿ ತಾಲೂಕು ಮೇಗರವಳ್ಳಿ ಸಮೀಪ ಇಂದು ಬೆಳಗ್ಗೆ ಘಟನೆ ಸಂಭವಿಸಿದೆ. ಖಾಸಗಿ ಬಸ್ಸು ತೀರ್ಥಹಳ್ಳಿಯಿಂದ ಮಂಗಳೂರಿಗೆ ತೆರಳುತಿತ್ತು. ಘಟನೆಯಲ್ಲಿ ಬಸ್ಸು ಮತ್ತು ಗೂಡ್ಸ್ ವಾಹನದ ಮುಂಭಾಗ ಜಖಂಗೊಂಡಿವೆ.
ತೀರ್ಥಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.