ಶಿವಮೊಗ್ಗ ಜಿಲ್ಲೆಯ ಹೊಸನಗರದಲ್ಲಿ ಕ್ಯಾಂಟರ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಕ್ಯಾಂಟರ್ ಚಾಲಕನಿಗೆ ಗಂಭೀರ ಗಾಯಗಳಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಗರ ಹೋಬಳಿಯ ನರ್ತಿಗೆ ಗ್ರಾಮದ ಬಳಿ ನಡೆದಿದೆ.
ಶಿವಮೊಗ್ಗದಿಂದ ತೆರಳುತ್ತಿದ್ದ ಕ್ಯಾಂಟರ್ ಹಾಗೂ ಹುಲಿಕಲ್ ಕಡೆಯಿಂದ ತೆರಳುತ್ತಿದ್ದ ಕಾರಿನ ನಡುವೆ ಡಿಕ್ಕಿ ಸಂಭವಿಸಿದೆ. ಇದರಿಂದ ಎರಡು ವಾಹನಗಳ ಮುಂಭಾಗ ಹಾನಿಗೊಳಗಾಗಿದ್ದು, ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.