ಶಿವಮೊಗ್ಗ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹಾಗೂ ಮೂಂಜಾಗೃತಾ ಕ್ರಮವಾಗಿ ಮಂಗಳವಾರ ಸಂಜೆ ಜಿಲ್ಲೆಯಾದ್ಯಂತ ಗಸ್ತು ತಿರುಗುತ್ತಿದ್ದ ಪೊಲೀಸರು ಅನುಮಾನಸ್ಪಾದ ವ್ಯಕ್ತಿಗಳ ವಿರುದ್ದ ಲಘು ಹಾಗೂ COTPA ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.
ಆಯಾ ಪೊಲೀಸ್ ಉಪಾಧೀಕ್ಷಕರುಗಳ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕರು, ಪೋಲಿಸ್ ಉಪನಿರೀಕ್ಷಕರು ಮತ್ತು ಸಿಬ್ಬಂದಿಗಳ ತಂಡಗಳು ಕಾರ್ಯಾಚರಣೆ ನಡೆಸುವ ಮೂಲಕ ಸೂಕ್ಷ್ಮ ಪ್ರದೇಶಗಳಲ್ಲಿ ಕಾಲ್ನಡಿಗೆ ವಿಶೇಷಗಸ್ತು ನಡೆಸಿದ್ದು, ಸಾರ್ವಜನಿಕರಿಗೆ ತೊಂದರೆ ಮಾಡಿದ ಮತ್ತು ಅನುಮಾನಸ್ಪಾದವಾಗಿ ಕಂಡುಬಂದವರ ವಿರುದ್ದ ಲಘು ಪ್ರಕರಣ ಮತ್ತು COTPA ಕಾಯ್ದೆಯಡಿ ಪ್ರಕರಣಗಳನ್ನು ದಾಖಲಿಸಿದ್ದಾರೆ.

