ಶಿವಮೊಗ್ಗ | ಅರಣ್ಯದಲ್ಲಿ ಜಾನುವಾರು ಮೇಯಿಸಬಾರದು ; ತಲೆ ಬುಡ ಇಲ್ಲದ ಆದೇಶ : ಆರಗ ಜ್ಞಾನೇಂದ್ರ ವಾಗ್ದಾಳಿ

Date:

ಶಿವಮೊಗ್ಗ, ಅರಣ್ಯದಲ್ಲಿ ಜಾನುವಾರುಗಳನ್ನು ಮೇಯಿಸಬಾರದು ಎಂದು ತಲೆ ಬುಡ ಇಲ್ಲದ ಆದೇಶವನ್ನು ಸರ್ಕಾರ ಹೊರಡಿಸಿದೆ. ಕೂಡಲೇ ಇದನ್ನು ವಾಪಾಸ್ ಪಡೆಯಬೇಕು ಎಂದು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಒತ್ತಾಯಿಸಿದ್ದಾರೆ.

- Advertisement -

ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಗುರುವಾರ ಸುದ್ದಿಗಾರರ ಜೊತೆ ಮಾತನಾಡಿ, ಅರಣ್ಯ ಸಚಿವರಿಗೆ ಜಾನುವಾರು ಸಾಕಣೆ ಅರಿವು ಇಲ್ಲ. ರಾಜ್ಯದಲ್ಲಿ ಸಾವಯವ ಕೃಷಿ ಪುನಃ ಸ್ಥಾಪಿಸಬೇಕು ಎಂಬ ಆಂದೋಲನ ನಡೆಯುತ್ತಿದೆ. ಈ ಆಂದೋಲನ ಯಶಸ್ವಿ ಆಗಲು ಜಾನುವಾರು ಸಾಕಣೆ ಅಗತ್ಯ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಸಾವಿರಾರು ಕೋಟಿ ಖರ್ಚು ಮಾಡಿ ವಿದೇಶದಿಂದ ರಸಗೊಬ್ಬರ ತರಿಸುತ್ತಿದ್ದೇವೆ. ಆದರೆ ಗೊಬ್ಬರದ ಕಾರ್ಖಾನೆ ಕೊಟ್ಟಿಗೆ ಗೊಬ್ಬರ.  2011ರ ಜಾನುವಾರು ಗಣತಿಗೆ ಹೋಲಿಸಿದರೆ 2021ರ ಜಾನುವಾರು ಗಣತಿಯಲ್ಲಿ ಜಾನುವಾರು ಸಂಖ್ಯೆ ಕಡಿಮೆ ಆಗಿದೆ. ಜಾನುವಾರು ಸಾಕಣೆಗೆ ಪ್ರೋತ್ಸಾಹ ಕೊಡಬೇಕು ಎಂದರು.

ನೆಗಡಿ ಬಂದಿದೆ ಅಂತ ಮೂಗು ಕೊಯ್ಯುವ ಸ್ಥಿತಿಯನ್ನು ಈ ಆದೇಶ ನೆನಪಿಸುತ್ತದೆ. ಹಾಗಾಗಿ ಆದೇಶ ವಾಪಸ್ ಪಡೆಯಬೇಕು. ಪಶ್ಚಿಮ ಘಟ್ಟಗಳ ಅನೇಕ ಹಳ್ಳಿಗಳು ಕಾಡಿನಲ್ಲಿ ಇವೆ. ನಾಳೆ ಮನುಷ್ಯ ಅಲ್ಲಿ ಓಡಾಡಬಾರದು ಎಂದೂ ಆದೇಶ ಹೊರಡಿಸಬಹುದು ಎಂದು ವ್ಯಂಗ್ಯವಾಡಿದರು.

ಇಲಾಖೆ ದಬಾವಣೆ ಆಗುತ್ತದೆ. ಇದು ಆಗಲು ಬಿಡಬಾರದು. ಜನರು ಹೋರಾಟಕ್ಕೆ ಇಳಿಯುತ್ತಾರೆ ಎಂದು ಎಚ್ಚರಿಸಿದರು.ಎನ್ ಆರ್ ಪುರ ಆನೆ ದಾಳಿಯಿಂದ ಮಹಿಳೆ ಮೃತಪಟ್ಟಿದ್ದಾರೆ. ಹಂದಿ, ಮಂಗ ಊರಿನಲ್ಲಿ ದಾಳಿ ಮಾಡುತ್ತಿವೆ. ಕಾಡು ಪ್ರಾಣಿಗಳನ್ನು ಕಾಡಿನಲ್ಲಿ ಇಟ್ಟುಕೊಂಡು ಬಿಡಿ. ರೈತರ ಜಮೀನಿಗೆ ಅವುಗಳನ್ನು ಬಿಡಬೇಡಿ ಎಂದರು.

ಹಿಂದೆ ಗೋಮಾಳ ಇತ್ತು. ಶಿವಮೊಗ್ಗ ಜಿಲ್ಲೆಯಲ್ಲಿಯೇ 25,000 ಎಕರೆ ಸರ್ಕಾರಿ ಪ್ಲಾಂಟೇಷನ್ ಆಗಿದೆ. ಅದನ್ನು ದನ ಮೇಯಿಸಲು ಕೊಡಿ ಎಂದರು. ಮಾಧ್ಯಮ ಸಂಚಾಲಕ ಕೆ.ವಿ.ಅಣ್ಣಪ್ಪ, ಶರತ್ ಕಲ್ಯಾಣಿ ಇದ್ದರು.  

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...

ಉಡುಪಿ | ಜನರ ಬಳಿಗೇ ಅಧಿಕಾರಿಗಳು ತೆರಳಿ ಸಮಸ್ಯೆ ಪರಿಹರಿಸಬೇಕು: ಗುರುರಾಜ್ ಶೆಟ್ಟಿ ಗಂಟಿಹೊಳೆ

ಪ್ರಜಾಸೇವಾ ಆಂದೋಲನ ಸಭೆಯು ಜನಪರ ಕಾಳಜಿಯ ಕಾರ್ಯಕ್ರಮವಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ...

ಉಡುಪಿ | ನಿವೇಶನ ರಹಿತರಿಂದ ನಿವೇಶನಕ್ಕಾಗಿ ಅರ್ಜಿ ಆಹ್ವಾನ

ಉಡುಪಿ ಜಿಲ್ಲೆಯ ಸಾಲಿಗ್ರಾಮ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಂತ ನಿವೇಶನ ಹೊಂದಿಲ್ಲದ...