ಶಿವಮೊಗ್ಗ | ಕೇಂದ್ರ ಸರ್ಕಾರ ರೈತರ ಕಬ್ಬಿಗೆ ಎಫ್‌ಆರ್‌ಪಿ ನಿಗದಿ ಮಾಡಲಿ: ಕೃಷಿ ಸಚಿವ ಚಲುವರಾಯಸ್ವಾಮಿ

Date:

ಕಬ್ಬು ಬೆಳೆಗೆ ಎಫ್‌ಆರ್‌ಪಿ ದರವನ್ನು ಕೇಂದ್ರ ಸರ್ಕಾರ ನಿಗದಿ ಮಾಡಬೇಕಿದೆ. ಹಾಗಾಗಿ ಈಗ ಹೆಚ್ಚಿನ ದರ ನಿಗದಿ ಮಾಡಿ ರೈತರಿಗೆ ಅನುಕೂಲ ಮಾಡಿಕೊಡಲಿ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಹೇಳಿದರು.

- Advertisement -

ಶಿವಮೊಗ್ಗ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಕಬ್ಬಿಗೆ ಎಫ್‌ಆರ್‌ಪಿ(ನ್ಯಾಯುತ ಮತ್ತು ಗೌರವಯುತ ದರ) ನಿಗದಿ ಮಾಡಬೇಕಾಗಿರುವುದು ಕೇಂದ್ರ ಸರ್ಕಾರದ ಜವಾಬ್ದಾರಿ. ಬಹಳ ವರ್ಷಗಳಿಂದ ಕಬ್ಬು ಬೆಳೆಗಾರರಿಗೆ ಅನಾನುಕೂಲವಾಗಿದೆ. ಸಕ್ಕರೆ ಬೆಲೆ ಹೆಚ್ಚು ಮಾಡುವುದಿಲ್ಲ, ಎಫ್‌ಆರ್‌ಪಿ ಬೆಲೆ ಹೆಚ್ಚಿಸುವುದಿಲ್ಲ. ಇದರಿಂದ ರೈತರಿಗೆ ನ್ಯಾಯಯುತವಾದ ಬೆಲೆ ಸಿಗುವುದಿಲ್ಲ. ಕಾರ್ಖಾನೆಯವರು ನಷ್ಟ ಎನ್ನುವುದರಿಂದ ರೈತರಿಗೆ ಸಿಗಬೇಕಾದ ಬೆಲೆ ಸಿಗುತ್ತಿಲ್ಲ. ಇದರಿಂದ ರೈತರು ಪ್ರತಿಭಟನೆಗೆ ಇಳಿದಿದ್ದಾರೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

“ಕೇಂದ್ರ ಸರ್ಕಾರ ರೈತರಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ. ನಮ್ಮ ಸಂಸದರು ಹಾಗೂ ರಾಜ್ಯಸಭಾ ಸದಸ್ಯರು ಸೇರಿದಂತೆ ಕೇಂದ್ರದ ಐದು ಜನ ರಾಜ್ಯದ ಮಂತ್ರಿಗಳಿದ್ದಾರೆ. ಅವರು ಕೇಂದ್ರ ಸರ್ಕಾರದ ಬಳಿ ಮಾತನಾಡಿ, ಸಮಸ್ಯೆ ಪರಿಹರಿಸುತ್ತಿಲ್ಲ. ಕೇಂದ್ರದವರು ಸುಳ್ಳು ಹೇಳಿಕೊಂಡು ಬರುತ್ತಿದ್ದಾರೆ. ಆದರೆ, ರೈತರಿಗೆ ಸಿಗುವುದು ರಾಜ್ಯ ಸರ್ಕಾರ ಹಾಗೂ ಸ್ಥಳೀಯ ಶಾಸಕರು. ಇದರಿಂದ ಅವರು ನಮ್ಮ ಮೇಲೆ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ” ಎಂದರು.

“ಪ್ರತಿಭಟನಾನಿರತ ರೈತರ ಜತೆಗೆ ನಮ್ಮ ಸಚಿವರು ಹೋಗಿ ಮಾತನಾಡಿಕೊಂಡು ಬಂದಿದ್ದಾರೆ. ಇಂದು ನಮ್ಮ ಮುಖ್ಯಮಂತ್ರಿಗಳು ಕಾರ್ಖಾನೆ ಮಾಲೀಕರು ಹಾಗೂ ರೈತರ ಜತೆಗೆ ಮಾತನಾಡುತ್ತಿದ್ದಾರೆ. ಈ ಕುರಿತು ಸಿಎಂ ಅವರು ಒಂದು ತೀರ್ಮಾನ ಮಾಡುತ್ತಾರೆ. ಕಬ್ಬಿಗೆ ಇನ್ನೂ ₹300 ಹೆಚ್ಚಿಸಬೇಕಿದೆ. ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಎಲ್ಲ ತೆರಿಗೆ ನೀಡಿದೆ. ಆದರೆ, ಈಗ ಕೇಂದ್ರದಿಂದ ದರ ಏರಿಕೆ ಮಾಡದೆ, ರಾಜ್ಯ ಸರ್ಕಾರದ ಮೇಲೆ ಹಾಕಲಾಗುತ್ತಿದೆ” ಎಂದು ದೂರಿದರು.

ಈ ಸುದ್ದಿ ಓದಿದ್ದೀರಾ? ಕಬ್ಬು ಬೆಳಗಾರರ ಹೋರಾಟ –ಪಕ್ಷಗಳ ರಾಜಕಾರಣ: ರೈತರು ಅರ್ಥ ಮಾಡಿಕೊಳ್ಳಬೇಕಾದ ಸಂಗತಿಗಳಿವು!

“ನಮ್ಮ ಸರ್ಕಾರ ರೈತರ ಪರವಾಗಿದೆ. ಇದಕ್ಕಾಗಿ ರಾಜ್ಯ ಸರ್ಕಾರ ಬೆಳೆಹಾನಿ ಸೇರಿದಂತೆ ಎಲ್ಲದಕ್ಕೂ 8.50-8.50 ರಷ್ಟು ಪರಿಹಾರ ನೀಡಲಾಗುತ್ತಿದೆ. ನಾವು ಈಗ ರೈತರಿಗೆ ಏನೇ ನೀಡಿದರೂ ಕೂಡ ಅದು ತಾತ್ಕಾಲಿಕ ಪರಿಹಾರ ನೀಡಿದಂತಾಗುತ್ತದೆ. ಆದರೆ, ಕೇಂದ್ರ ಸರ್ಕಾರ ನೀಡುವ ಪರಿಹಾರ ಶಾಶ್ವತವಾದದ್ದಾಗಿರುತ್ತದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ ಶೂನ್ಯ ಜನವಸತಿ!

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು...

‘SIR’ ಪರಿಶೋಧ-ಪ್ರತಿರೋಧ: ಸೆ.29ರಂದು ಮೈಸೂರಿನಲ್ಲಿ ಪ್ರಕಾಶ್ ರಾಜ್ ಸಂವಾದ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision-SIR) ಪ್ರಕ್ರಿಯೆ...

ಉಡುಪಿ | ಹೆತ್ತ ತಾಯಿಯನ್ನೇ ಕಾರಿನಲ್ಲಿ ಕರೆತಂದು ಅಪರಿಚಿತ ಸ್ಥಳದಲ್ಲಿ ಬಿಟ್ಟುಹೋದ ಮಗ

ಹೆತ್ತ ತಾಯಿಯನ್ನೇ ಮಗ ಅಪರಿಚಿತ ಸ್ಥಳದಲ್ಲಿ ಬಿಟ್ಟು ತೆರಳಿರುವ ಅಮಾನವೀಯ ಘಟನೆ...

ಬಳ್ಳಾರಿ | ಲಾರಿ ಪಲ್ಟಿ; ಸ್ಟೀನಿಂಗ್ ಯಂತ್ರ ಬಿದ್ದು ಯುವಕ ದುರ್ಮರಣ

ಜಿಲ್ಲೆ ಸಂಡೂರು ತಾಲ್ಲೂಕಿನ ಉಬ್ಬಳಗಂಡಿ ಗ್ರಾಮದ ಬಳಿ ಮೈನ್‌ಸ್‌ನ ಸ್ಟೀನಿಂಗ್ ಯಂತ್ರವನ್ನು...