ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ವ್ಯಕ್ತಿ ಸಾವನ್ನಪ್ಪಿದ್ದಾನೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಆತ ಸಾವನ್ನಪ್ಪಿದ್ದಾನೆ ಎಂದು ಕಾರಾಗೃಹದ ಮೂಲಗಳು ತಿಳಿಸಿವೆ.
ಮೃತನನ್ನು ನಲವತ್ತು ಮೂರು ವರ್ಷದ ಮನ್ಸೂರ್ ಎಂದು ಗುರುತಿಸಲಾಗಿದೆ. ಈತ ಟಿಪ್ಪು ನಗರ ನಿವಾಸಿಯಾಗಿದ್ದ. ತನ್ನ ತಂದೆಯನ್ನು ಕೊಲೆ ಮಾಡಲು ಯತ್ನಿಸಿದ್ದ ಈತನನ್ನು ಬಂಧಿಸಿದ್ದ ಪೊಲೀಸರು ಕೋರ್ಟ್ಗೆ ಹಾಜರುಪಡಿಸಿದ್ದರು.
ಆನಂತರ ಈತನನ್ನು ಸೆಪ್ಟೆಂಬರ್ 15 ರಂದು ಕೇಂದ್ರ ಕಾರಾಗೃಹದಲ್ಲಿ ಎಂಟ್ರಿ ಮಾಡಿಸಲಾಗಿತ್ತು. ಆನಂತರ ನಿನ್ನೆ ಅಂದರೆ ಸೆಪ್ಟೆಂಬರ್ 17 ರಂದು ಮನ್ಸೂರ್ ಆರೋಗ್ಯದಲ್ಲಿ ಏರುಪೇರಾಗಿದೆ.
ಈ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದಲ್ಲಿರುವ ಮೆಗ್ಗಾನ್ ಆಸ್ಪತ್ರೆಗೆ ಆತನನ್ನು ದಾಖಲಿಸಿ ಚಿಕಿತ್ಸೆ ಒದಗಿಸಲಾಗಿತ್ತು. ಇಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೇ ಮನ್ಸೂರ್ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.