ಶಿವಮೊಗ್ಗ | ಸಿಗಂದೂರು ಲಾಂಚ್‌ಗಳನ್ನು ಹೋಟೆಲ್‌ಗಳಾಗಿ ಪರಿವರ್ತನೆ : ಶಾಸಕ ಬೇಳೂರು ಗೋಪಾಲಕೃಷ್ಣ

Date:

ಶಿವಮೊಗ್ಗ, ಸಿಗಂದೂರಿನಲ್ಲಿರುವ ಎರಡು ಲಾಂಚ್‌ಗಳನ್ನು ತೇಲುವ ಹೋಟೆಲ್‌ಗಳಾಗಿ ಪರಿವರ್ತಿಸುವ ಯೋಜನೆಯನ್ನು ಹಮ್ಮಿಕೊಂಡಿದ್ದೇವೆ ಎಂದು ಸಾಗರ ಶಾಸಕ ಬೇಳೂರು ಗೋಪಾಲ ಕೃಷ್ಣ ಹೇಳಿದರು.

- Advertisement -

ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಗಂದೂರು ಸೇತುವೆ ಉದ್ಘಾಟನೆಯಾದ ನಂತರ ಲಾಂಚ್‌ಗಳು ಮೂಲೆಗುಂಪಾಗುತ್ತವೆ ಎಂಬ ಮಾತುಗಳು ಕೇಳಿಬರುತ್ತಿದ್ದವು. ಆದರೆ ನಾವು ಆ ಲಾಂಚ್‌ಗಳನ್ನು ಹೋಟೆಲ್‌ಗಳಾಗಿ ಪರಿವರ್ತಿಸುವ ಕುರಿತು ಯೋಜನೆ ರೂಪಿಸಿದ್ದೇವೆ” ಎಂದು ಗೋಪಾಲಕೃಷ್ಣ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಈ ತೇಲುವ ಹೋಟೆಲ್‌ಗಳಿಗೆ ಪ್ರವಾಸಿಗರನ್ನು ಕರೆದೊಯ್ಯಲು ಎರಡು ಬೋಟ್‌ಗಳನ್ನು ವ್ಯವಸ್ಥೆ ಮಾಡಲಾಗುವುದು. ಪ್ರವಾಸಿಗರು ಬೋಟ್‌ಗಳ ಮೂಲಕ ಸುತ್ತಾಡಿ ನಂತರ ಈ ಹೋಟೆಲ್‌ಗಳಿಗೆ ಬರಬಹುದು.

ಇಲ್ಲಿ ಪಾನಿಪೂರಿ, ಭೇಲ್ ಪೂರಿ ಸೇರಿದಂತೆ ವಿವಿಧ ಬಗೆಯ ತಿನಿಸುಗಳು ಲಭ್ಯವಿರಲಿವೆ. ಆದರೆ, ಮದ್ಯಪಾನ ಅಥವಾ ಯಾವುದೇ ರೀತಿಯ ಅಕ್ರಮ ಚಟುವಟಿಕೆಗಳಿಗೆ ಅವಕಾಶವಿರುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಈ ಯೋಜನೆಗೆ ಪ್ರವಾಸೋದ್ಯಮ ಎಚ್.ಕೆ. ಪಾಟೀಲ್ ಅವರು ಅನುಮೋದನೆ ನೀಡುವುದಾಗಿ ತಿಳಿಸಿದ್ದಾರೆ. ಅಲ್ಲದೆ, ಈ ಹಿಂದೆ ಲಾಂಚ್‌ಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕಾರ್ಮಿಕರಿಗೂ ಈ ಹೊಸ ಯೋಜನೆಯಲ್ಲಿ ಉದ್ಯೋಗಾವಕಾಶ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಎನ್‌.ಎಸ್‌.ಎಸ್‌ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದ ದಾರಿ: ನಾಲತವಾಡ

ವಿದ್ಯಾರ್ಥಿಗಳಲ್ಲಿ ಕೇವಲ ಶೈಕ್ಷಣಿಕ ಜ್ಞಾನವಷ್ಟೇ ಅಲ್ಲದೆ, ಸಾಮಾಜಿಕ ಜವಾಬ್ದಾರಿ, ನಾಯಕತ್ವ ಗುಣ...

ವಿಜಯಪುರ | ಮತದಾರರ ಹಕ್ಕು ರಕ್ಷಣೆಗೆ SIR ಪರಿಶೋಧನಾ ಪ್ರವಾಸ; ನಟ ಪ್ರಕಾಶ್ ರಾಜ್ ಭಾಗಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಮತದಾರರ...

ಯುವ ಪೀಳಿಗೆ ಸತ್ಯ, ಸರಳತೆಯ ತತ್ವಗಳನ್ನು ಅಳವಡಿಸಿಕೊಳ್ಳಬೇಕು: ಪ್ರೊ. ವಿಜಯಾ ಕೋರಿಶೆಟ್ಟಿ

ಸತ್ಯ, ಅಹಿಂಸೆ, ಸರಳತೆ, ಕರ್ತವ್ಯನಿಷ್ಠೆ ಮತ್ತು ನೈತಿಕ ಮೌಲ್ಯಗಳು ಕೇವಲ ಇತಿಹಾಸದ...

ಸಾಗರ | ಗೂಡ್ಸ್ ಆಟೋ ಢಿಕ್ಕಿ; ಚಿಕಿತ್ಸೆ ಫಲಿಸದೆ ಬಾಲಕ ಸಾವು

ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಗೂಡ್ಸ್ ಆಟೋ ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ...