ಶಿವಮೊಗ್ಗ | ಬೆಳೆ ವಿಮಾ ಪರಿಹಾರದಲ್ಲಿ ತಾರತಮ್ಯ : ರೈತರ ಪ್ರತಿಭಟನೆ

Date:

ಹವಾಮಾನ ಆಧಾರಿತ ಬೆಳೆ ವಿಮೆ ಪರಿಹಾರ ಹಂಚಿಕೆಯಲ್ಲಿ ಲೋಪವಾಗಿದೆ ಎಂದು ಆರೋಪಿಸಿ ರೈತರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

- Advertisement -

ಶೋಧ ಬೆಳೆ ವಿಮೆ ಹೋರಾಟ ಸಮಿತಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಗೆ ಜಿಲ್ಲೆಯ ವಿವಿಧ ಭಾಗಗಳಿಂದ ರೈತರು ಆಗಮಿಸಿದ್ದರು. ಶಿವಮೊಗ್ಗ ಸರ್ಕಿಟ್ ಹೌಸ್‌ನಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪಾದಯಾತ್ರೆ ನಡೆಸಿದ ರೈತರು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಆರ್‌ಟಿಇ ಶಿಕ್ಷಣ ಹಕ್ಕೋ, ಶಾಲೆಗಳಲ್ಲಿನ ಸಾಮಾಜಿಕ ಅಂತರಕ್ಕೆ ಕಾರಣವೋ?

ಶಿಕ್ಷಣದ ಸಮಾನ ಅವಕಾಶದ ಆಶಯಕ್ಕೆ ಸವಾಲಾಗುತ್ತಿರುವ ನಿಯಮಗಳು, ಖಾಸಗೀಕರಣ ಮತ್ತು ಸರ್ಕಾರಿ ಶಾಲೆಗಳ ದುಸ್ಥಿತಿ ಒಂದೇ ಶಾಲೆಯ ಆವರಣ, ಒಂದೇ ತರಗತಿಯ ಕೊಠಡಿ, ಒಂದೇ ಪಠ್ಯಪುಸ್ತಕ, ಒಂದೇ ಶಿಕ್ಷಕರು. ಆದರೆ ಆ ಮಕ್ಕಳ ಹಿನ್ನೆಲೆ...

ಬಿಲ್ಕಿಸ್‌ ಬಾನೋ ‘ಮುಸ್ಲಿಂ’ ಎಂಬ ಕಾರಣಕ್ಕೇ ಪದೇ-ಪದೇ ದೂರವಾಗುತ್ತಿದೆಯೇ...

ಅಪರಾಧಿಗಳ ಹಕ್ಕುಗಳ ಬಗ್ಗೆ ಮಾತನಾಡುವ ನ್ಯಾಯವ್ಯವಸ್ಥೆ, ಸಂತ್ರಸ್ತೆಯ ಬದುಕುವ ಹಕ್ಕು, ಸುರಕ್ಷತೆ ಮತ್ತು ಘನತೆಯನ್ನೂ ಅಷ್ಟೇ ಗಂಭೀರವಾಗಿ ಪರಿಗಣಿಸುತ್ತಿದೆಯೇ? ಬಿಲ್ಕಿಸ್‌ ಬಾನೋ ಪ್ರಕರಣದಲ್ಲಿ ಈ ಪ್ರಶ್ನೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಭಾರತದಲ್ಲಿ ನ್ಯಾಯದ ಮುಂದೆ...

ನವ-ಉದಾರವಾದದ ಬಿಕ್ಕಟ್ಟು ಮತ್ತು ಫ್ಯಾಸಿಸ್ಟ್-ವಿರೋಧಿ ಅರ್ಥಶಾಸ್ತ್ರ: ಡಾ. ಇಸಬೆಲ್ಲಾ...

ಪ್ರಸ್ತುತ ಜಗತ್ತನ್ನು ಕಾಡುತ್ತಿರುವ ಬೆಲೆ ಏರಿಕೆ, ಆರ್ಥಿಕ ಅಸಮಾನತೆ ಮತ್ತು ಅದರಿಂದಾಗಿ ಜಾಗತಿಕವಾಗಿ ತಲೆ ಎತ್ತುತ್ತಿರುವ ಫ್ಯಾಸಿಸಂ ಪ್ರವೃತ್ತಿಗಳಿಗೆ ಪರ್ಯಾಯ ಆರ್ಥಿಕ ಮಾರ್ಗವನ್ನು ಡಾ. ಇಸಬೆಲ್ಲಾ ವೆಬರ್ ಇಲ್ಲಿ ಚರ್ಚಿಸಿದ್ದಾರೆ. ಜರ್ಮನಿಯ ಪ್ರಖ್ಯಾತ ಅರ್ಥಶಾಸ್ತ್ರಜ್ಞೆ...

‘ಮಲೆನಾಡಿನ ಬಹುತೇಕ ರೈತರು ಸಣ್ಣ ಮತ್ತು ಅತಿಸಣ್ಣ ಹಿಡುವಳಿದಾರರಾಗಿದ್ದು, ಕೃಷಿ ವೆಚ್ಚ ಹೆಚ್ಚುತ್ತಿರುವ ಸಂದರ್ಭದಲ್ಲಿ ಬೆಳೆ ವಿಮೆಯೇ ಆಸರೆಯಾಗಿತ್ತು. ಕಳೆದ ಎರಡು ವರ್ಷಗಳಿಂದ ಪರಿಹಾರದ ನಿರೀಕ್ಷೆಯಲ್ಲಿದ್ದ ರೈತರಿಗೆ ತಾರತಮ್ಯದಿಂದಾಗಿ ಅನ್ಯಾಯವಾಗಿದೆ’ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಮಳೆ ಮಾಪನದಲ್ಲೂ ಲೋಪ

2024 ಮತ್ತು 2025ರಲ್ಲಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅಳವಡಿಸಲಾಗಿದ್ದ ಮಳೆ ಮಾಪನ ವ್ಯವಸ್ಥೆಯಲ್ಲಿ ಲೋಪವಾಗಿತ್ತು. ಮಳೆ ಮಾಪನ ಸರಿಯಾಗಿಲ್ಲದಿದ್ದರೂ ರೈತರಿಂದ ವಿಮಾ ಕಂತು ಸ್ವೀಕರಿಸಿರುವುದು ಪ್ರಶ್ನಾರ್ಹ ಎಂದು ಅವರು ಹೇಳಿದರು.

‘ಮೂರನೇ ತಾರೀಖಿನಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಅಧಿಕಾರಿಗಳ ಸಮ್ಮುಖದಲ್ಲೇ ಮಳೆ ಮಾಪನ ಹಾಗೂ ವಿಮೆ ಪರಿಹಾರ ಹಂಚಿಕೆಯಲ್ಲಿ ಲೋಪವಾಗಿರುವುದನ್ನು ಜಿಲ್ಲಾಧಿಕಾರಿ ಒಪ್ಪಿಕೊಂಡಿದ್ದಾರೆ’ ಎಂದು ಪ್ರತಿಭಟನಾಕಾರರು ತಿಳಿಸಿದರು.
ಕೆಪಿಸಿಯ ಮಳೆ ಮಾಪನದ ಅಂಕಿ-ಅಂಶ ಹಾಗೂ ಕೆಎಸ್‌ಎನ್‌ಡಿಎಂಸಿ ದಾಖಲಿಸಿರುವ ಮಳೆ ಪ್ರಮಾಣದಲ್ಲಿ ವ್ಯತ್ಯಾಸವಿದೆ. ಒಂದೇ ಪ್ರದೇಶದ ಸಮೀಪದ ಗ್ರಾಮ ಪಂಚಾಯಿತಿಗಳಲ್ಲೇ ಪರಿಹಾರ ಮೊತ್ತದಲ್ಲಿ ಭಾರಿ ವ್ಯತ್ಯಾಸ ಕಂಡುಬರುತ್ತಿದೆ ಎಂದು ಅವರು ಆರೋಪಿಸಿದರು.

ಒಂದೇ ಗಡಿ, ಪರಿಹಾರದಲ್ಲಿ ಭಾರಿ ವ್ಯತ್ಯಾಸ

ನಗರ ಹೋಬಳಿಯ ಕರಿಮನೆ ಗ್ರಾಮ ಪಂಚಾಯಿತಿಗೆ ಹೆಕ್ಟೇರ್‌ಗೆ ₹67,750 ಪರಿಹಾರ ನಿಗದಿಯಾಗಿದ್ದರೆ, ಸಮೀಪದ ನಗರ ಗ್ರಾಮ ಪಂಚಾಯಿತಿಗೆ ₹3,450, ಅರಮನೆಕೊಪ್ಪಕ್ಕೆ ₹2,200 ಹಾಗೂ ಸಂತೆಕಟ್ಟೆ–ನಿಟ್ಟೂರು ಭಾಗಕ್ಕೆ ₹1,500 ಮಾತ್ರ ನಿಗದಿಯಾಗಿದೆ. ಪರಸ್ಪರ ಗಡಿ ಹಂಚಿಕೊಂಡಿರುವ ಗ್ರಾಮ ಪಂಚಾಯಿತಿಗಳಲ್ಲೇ ಇಷ್ಟೊಂದು ವ್ಯತ್ಯಾಸ ಏಕೆ ಎಂಬುದಕ್ಕೆ ಅಧಿಕಾರಿಗಳು ಸ್ಪಷ್ಟನೆ ನೀಡಬೇಕು ಎಂದು ರೈತರು ಒತ್ತಾಯಿಸಿದರು.

ಸಾಗರ, ಕರೂರು ಹಾಗೂ ತೀರ್ಥಹಳ್ಳಿ ಹೋಬಳಿಯ ಹಲವು ಗ್ರಾಮ ಪಂಚಾಯಿತಿಗಳಲ್ಲೂ ಇದೇ ರೀತಿಯ ವ್ಯತ್ಯಾಸ ಕಂಡುಬಂದಿದೆ. ಕೆಲವೆಡೆ ಹೆಕ್ಟೇರ್‌ಗೆ ₹65–70 ಸಾವಿರದಷ್ಟು ಪರಿಹಾರ ದೊರೆತಿದ್ದರೆ, ಪಕ್ಕದ ಗ್ರಾಮ ಪಂಚಾಯಿತಿಗಳ ರೈತರಿಗೆ ₹2–3 ಸಾವಿರ ಮಾತ್ರ ನಿಗದಿಯಾಗಿರುವುದು ವ್ಯವಸ್ಥೆಯಲ್ಲಿನ ಲೋಪಕ್ಕೆ ಸಾಕ್ಷಿ ಎಂದು ಪ್ರತಿಭಟನಾಕಾರರು ದೂರಿದರು.

ಮಳೆ ಆಧಾರಿತ ಬೆಳೆ ವಿಮೆಯಲ್ಲಿ ಸ್ಥಳೀಯವಾಗಿ ಸಂಭವಿಸುವ ಎಲೆಚುಕ್ಕಿ ಸೇರಿದಂತೆ ಬೆಳೆ ರೋಗಗಳನ್ನೂ ವಿಮಾ ವ್ಯಾಪ್ತಿಗೆ ತರಬೇಕು. ವಿಮಾ ಷರತ್ತುಗಳಲ್ಲಿ ಅಗತ್ಯ ಬದಲಾವಣೆ ಮಾಡಿ ರೈತರಿಗೆ ನ್ಯಾಯ ಒದಗಿಸಬೇಕು ಎಂದು ಅವರು ಆಗ್ರಹಿಸಿದರು.

ಮಳೆ ಮಾಪನ ಕೇಂದ್ರಗಳ ವಿಶ್ವಾಸಾರ್ಹತೆ, ಪರಿಹಾರ ನಿಗದಿಯ ಮಾನದಂಡ ಹಾಗೂ ವಿಮಾ ಕಂಪನಿಗಳ ಕಾರ್ಯವೈಖರಿ ಕುರಿತು ಸಮಗ್ರ ತನಿಖೆ ನಡೆಸಬೇಕು. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಂಡು, ಅರ್ಹ ರೈತರಿಗೆ ನ್ಯಾಯಯುತ ಪರಿಹಾರ ನೀಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

GTA ಶೈಲಿಯಲ್ಲಿ ಪ್ರಗತಿ ಪಟ್ಟಿ ಹಂಚಿಕೊಂಡ ಮೋದಿ; ಜೈರಾಮ್ ರಮೇಶ್ ಟೀಕೆ

ಜಾಗತಿಕವಾಗಿ ಭಾರೀ ಕುತೂಹಲ ಮೂಡಿಸಿದ್ದ ಜನಪ್ರಿಯ ವಿಡಿಯೋ ಗೇಮ್ 'ಗ್ರ್ಯಾಂಡ್ ಥೆಫ್ಟ್...

ಬಿಲ್ಕಿಸ್‌ ಬಾನೋ ‘ಮುಸ್ಲಿಂ’ ಎಂಬ ಕಾರಣಕ್ಕೇ ಪದೇ-ಪದೇ ದೂರವಾಗುತ್ತಿದೆಯೇ ನ್ಯಾಯ?

ಅಪರಾಧಿಗಳ ಹಕ್ಕುಗಳ ಬಗ್ಗೆ ಮಾತನಾಡುವ ನ್ಯಾಯವ್ಯವಸ್ಥೆ, ಸಂತ್ರಸ್ತೆಯ ಬದುಕುವ ಹಕ್ಕು, ಸುರಕ್ಷತೆ...

BJP ಬೆಂಬಲಿಗರಿಂದ ಕಾರಿನ ಮೇಲೆ ಕಲ್ಲು, ಮೊಟ್ಟೆ ತೂರಾಟ; ಪೊಲೀಸರ ವಿರುದ್ಧವೂ ಮೊಯಿತ್ರಾ ಗಂಭೀರ ಆರೋಪ!

ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯ ಕಾಲಿಗಂಜ್‌ನಲ್ಲಿ ಬಿಜೆಪಿ ಬೆಂಬಲಿಗರ ಗುಂಪೊಂದು ತಮ್ಮ...

ನಿವೃತ್ತಿ ನಂತರವೂ EPF ಖಾತೆಯಲ್ಲೇ ಹಣ ಉಳಿಸಿ ತಿಂಗಳ ಆದಾಯ ಪಡೆಯುವ ಅವಕಾಶ: ಹೊಸ ಯೋಜನೆ ಪ್ರಸ್ತಾಪ!

ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (EPFO) ತನ್ನ ಸದಸ್ಯರಿಗೆ ನಿವೃತ್ತಿಯ ನಂತರದ...