ಶಿವಮೊಗ್ಗ | ಅತಿಥಿ ಉಪನ್ಯಾಸಕರ ವೇತನ ಹೆಚ್ಚಳಕ್ಕೆ ಒತ್ತಾಯ

Date:

Advertisements

ಸರ್ಕಾರಿ ಪದವಿಪೂರ್ವ ಕಾಲೇಜು ಅತಿಥಿ ಉಪನ್ಯಾಸಕರ ವೇತನವನ್ನು ಹೆಚ್ಚಿಸುವಂತೆ ಆಗ್ರಹಿಸಿ ಅತಿಥಿ ಉಪನ್ಯಾಸಕರ ಸಂಘದಿಂದ ಶಿವಮೊಗ್ಗ ನಗರದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪನವರಿಗೆ ಮನವಿ ಸಲ್ಲಿಸಿದರು.

ಸಂಘಟನೆಯ ರಾಜ್ಯಾಧ್ಯಕ್ಷ ಪದ್ಮಪ್ರಭ ಇಂದ್ರ ಮಾತನಾಡಿ, ರಾಜ್ಯದ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ 4,659ಕ್ಕೂ ಅಧಿಕ ಮಂದಿ ಅತಿಥಿ ಉಪನ್ಯಾಸಕರು ಕಾರ್ಯನಿರ್ವಹಿಸುತ್ತಿದ್ದಾರೆ. ಅವರಿಗೆ ಮಾಸಿಕ ₹12,000 ವೇತನ ನೀಡಲಾಗುತ್ತಿದ್ದು, ಈ ವೇತನವು ಕುಟುಂಬ ನಿರ್ವಹಣೆಗೆ ಸಾಕಾಗುವುದಿಲ್ಲ. ಆದ್ದರಿಂದ ಸರ್ಕಾರಿ ಪದವಿಪೂರ್ವ ಕಾಲೇಜು ಅತಿಥಿ ಉಪನ್ಯಾಸಕರ ವೇತನವನ್ನು ₹30‌,000ಕ್ಕೆ ಹೆಚ್ಚಳ ಮಾಡುವಂತೆ ಆಗ್ರಹಿಸಿದರು.

“ಹಲವು ವರ್ಷಗಳಿಂದ ಅನೇಕ ಹೋರಾಟಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರೂ ಕೂಡಾ ಯಾವುದೇ ಪ್ರಯೋಜನವಾಗಿಲ್ಲ. ಹೀಗಾಗಿ ರಾಜ್ಯ ಸರ್ಕಾರದ ಮುಂಬರುವ ಬಜೆಟ್’ನಲ್ಲಿ ಅತಿಥಿ ಉಪನ್ಯಾಸಕರ ವೇತನವನ್ನು ಹೆಚ್ಚಳ ಮಾಡುವ ಕುರಿತು ಅನುದಾನವನ್ನು ಒದಗಿಸಬೇಕು” ಎಂದು ಒತ್ತಾಯಿಸಿದರು.

Advertisements

ಈ ಸುದ್ದಿ

ಮಹೇಶ, ರಾಜೇಶ್ ಭಟ್, ಎಸ್ ಜಿ ನಾಗರತ್ನ, ಅಶ್ವಿನಿ, ವಿ ಎನ್‌ ರಾಜಶೇಖರ, ಬೈರೆಗೌಡ, ಸುಧೀರ್ ಕುಮಾರ್, ಜಗದೀಶ, ಸುಲತಾ, ತಾರಾಸಿಂಗ್, ಗುರುರಾಜ್, ಮಮತಾ, ನಿತ್ಯಾನಂದ, ಲೋಕೇಶ‌ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

ವಿಜಯನಗರ | ಅಲೆಮಾರಿ ಸಮುದಾಯಗಳ ಅಭಿವೃದ್ಧಿಯೇ ನಿಗಮದ ಮುಖ್ಯ ಧ್ಯೇಯ: ಪಲ್ಲವಿ

ಅಲೆಮಾರಿ ಬುಡಕಟ್ಟು ಸಮುದಾಯಗಳನ್ನು ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ರಾಜಕೀಯವಾಗಿ ಮತ್ತು ಔದ್ಯೋಗಿಕವಾಗಿ ಮುಂಚೂಣಿಗೆ...

Download Eedina App Android / iOS

X