ಶಿವಮೊಗ್ಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಆ.20 ರಂದು ಬೆಳಗ್ಗೆ 11.00ಕ್ಕೆ ಕುವೆಂಪು ರಂಗಮಂದಿರದಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಶ್ರೀ ಡಿ. ದೇವರಾಜ ಅರಸುರವರ 110ನೇ ಜನ್ಮ ದಿನಾಚರಣೆಯನ್ನು ಆಚರಿಸಲಾಗುತ್ತಿದೆ.
ಈ ಕಾರ್ಯಕ್ರಮವನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪರವರು ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆ ಶಿವಮೊಗ್ಗ ನಗರ ವಿಧಾನ ಸಭೆ ಶಾಸಲಎಸ್.ಎನ್. ಚನ್ನಬಸಪ್ಪ ವಹಿಸಲಿದ್ದು,
ವಿಶೇಷ ಆಹ್ವಾನಿತರಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ತಂಗಡಗಿ ಶಿವರಾಜ ಸಂಗಪ್ಪರವರು ಭಾಗವಹಿಸಲಿದ್ದಾರೆ. ಈ ಸಮಾರಂಭದಲ್ಲಿ ಜಿಲ್ಲೆಯ ಸಂಸದರು, ವಿಧಾನಸಭೆ/ವಿಧಾನ ಪರಿಷತ್ ಸದಸ್ಯರುಗಳು ಮತ್ತು ಎಲ್ಲಾ ಜನಪ್ರತಿನಿಧಿಗಳು, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ಅಧೀಕ್ಷಕರು, ಜಿ.ಪಂ. ಸಿಇಓ, ಶಿ ಮಹಾನಗರ ಪಾಲಿಕೆಯ ಸಿಇಓ, ಮಹಾನಗರ ಪಾಲಿಕೆ ಆಯುಕ್ತರು, ಹಿಂ., ವ, ಕ, ಇಲಾಖೆಯ ಜಿಲ್ಲಾ ಅಧಿಕಾರಿಗಳು, ವಿವಿಧ ಸಂಘ ಸಂಸ್ಥೆಗಳ ಮುಖಂಡರು/ಪ್ರತಿನಿಧಿಗಳು, ವಿವಿಧ ನಿಗಮ/ಮಂಡಳಿಗಳ ಅಧ್ಯಕ್ಷರುಗಳು/ ವಿವಿಧ ಇಲಾಖೆಗಳ ಅಧಿಕಾರಿ/ಸಿಬ್ಬಂದಿ ವರ್ಗದವರು ಭಾಗವಹಿಸಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಸಮಾರಂಭವನ್ನು ಯಶಸ್ವಿಗೊಳಿಸುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ಕೋರಿರುತ್ತಾರೆ.
ಅಂದು ಶಂಕರಘಟ್ಟದ ಕನ್ನಡ ಭಾರತಿ ಕುವೆಂಪು ವಿಶ್ವವಿದ್ಯಾಲಯದ ಹಿರಿಯ ಪ್ರಾಧ್ಯಾಪಕ ಡಾ. ಈ. ಪ್ರಶಾಂತ್ ನಾಯಕ್‌ರವರಿಂದ ಡಿ.ದೇವರಾಜ ಅರಸುರವರ ಜೀವನ ಚರಿತ್ರೆ ಮತ್ತು ಸಾಧನೆಗಳ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ.
https://shorturl.fm/kPCOl